ನ್ಯಾಯಾಂಗ ಬಂಧನದಲ್ಲೇ ಬುಡಕಟ್ಟು ಹೋರಾಟಗಾರ ಸ್ಟ್ಯಾನ್‌ ಸ್ವಾಮಿ ನಿಧನ

ಮುಂಬಯಿ: ಭೀಮಾ-ಕೋರೆಗಾಂವ್‌ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ರಾಷ್ಟ್ರೀಯ ತನಿಖಾ ದಳದಿಂದ ಬಂಧನಕ್ಕೆ ಒಳಗಾಗಿದ್ದ ಬುಡಕಟ್ಟು ಹಕ್ಕುಗಳ ಹೋರಾಟಗಾರ (84) ಸೋಮವಾರ ಮಧ್ಯಾಹ್ನ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮುಂಬಯಿ ಹೈಕೋರ್ಟ್‌ನಲ್ಲಿ ಮಂಗಳವಾರ ಅವರ ಜಾಮೀನು ಅರ್ಜಿ ವಿಚಾರಣೆ ನಿಗದಿಯಾಗಿತ್ತು. ಜಾಮೀನು ಅರ್ಜಿ ಇತ್ಯರ್ಥವಾಗುವ ಮೊದಲೇ, ನ್ಯಾಯಾಂಗ ಬಂಧನದಲ್ಲಿದ್ದಾಗಲೇ ಕೊನೆಯುಸಿರೆಳೆದಿದ್ದಾರೆ. ಪಾರ್ಕಿನ್‌ಸನ್‌ ಮತ್ತು ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಸ್ಟ್ಯಾನ್‌ ಸ್ವಾಮಿ ಅವರನ್ನು ಹೈಕೋರ್ಟ್‌ ಆದೇಶದಂತೆ ಮೇ 28ರಂದು ಮುಂಬಯಿಯ ಹೋಲಿ ಫ್ಯಾಮಿಲಿ ಹಾಸ್ಪಿಟಲ್‌ಗೆ ದಾಖಲಿಸಲಾ-ಗತ್ತು. ಅವರ ಚಿಕಿತ್ಸೆಯ ವೆಚ್ಚವನ್ನು ಒಡನಾಡಿಗಳು ಮತ್ತು ಸ್ನೇಹಿತರು ಭರಿಸುತ್ತಿದ್ದರು. ಭಾನುವಾರ ಅವರಿಗೆ ವೆಂಟಿಲೇಟರ್‌ ನೆರವು ಕಲ್ಪಿಸಲಾಗಿತ್ತು. ಪುಣೆ ಜಿಲ್ಲೆಯ ಭೀಮಾ-ಕೋರೆಗಾಂವ್‌ನಲ್ಲಿ ಎಲ್ಗರ್‌ ಪರಿಷತ್‌ 2017ರ ಡಿಸೆಂಬರ್‌ 31ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಮುಖರು ಪ್ರಚೋದನಕಾರಿ ಭಾಷಣ ಮಾಡಿದ್ದರು. ಪರಿಣಾಮವಾಗಿ 2018ರ ಜ.1ರಂದು ಯುದ್ಧ ಸ್ಮಾರಕ ಬಳಿ ನಡೆದ ಹಿಂಸಾಚಾರದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎನ್ನುವುದು ಪ್ರಮುಖ ಆರೋಪ. ಈ ಪ್ರಕರಣದ ಹಿಂದೆ ಮಾವೋವಾದಿಗಳ ಕೈವಾಡವಿದ್ದು, ಸ್ಟ್ಯಾನ್‌ ಸ್ವಾಮಿ ಅವರು ಮಾವೋವಾದಿಗಳ ಜತೆ ನಿಕಟ ಸಂಬಂಧ ಹೊಂದಿದ್ದಾರೆ. ಅದರಲ್ಲಿಯೂ ನಿಷೇಧಿತ ಸಂಘಟನೆಯಾದ ಸಿಪಿಐ (ಮಾವೋವಾದಿ)ನಲ್ಲಿ ಸ್ವಾಮಿ ಸಕ್ರಿಯರಾಗಿದ್ದಾರೆ ಎಂದು ಆರೋಪಿಸಿದ ರಾಷ್ಟ್ರೀಯ ತನಿಖಾ ಸಂಸ್ಥೆ (), ಕಳೆದ ವರ್ಷದ ಅಕ್ಟೋಬರ್‌ 8ರಂದು ಜಾರ್ಖಂಡ್‌ನ ರಾಂಚಿಯ ನಿವಾಸದಲ್ಲಿ ಅವರನ್ನು ಬಂಧಿಸಿತ್ತು. ಸ್ವಾಮಿ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (ಯುಎಪಿಎ) ಅನ್ವಯ ಪ್ರಕರಣ ದಾಖಲಿಸಲಾಗಿತ್ತು. ಎನ್‌ಐಎ ವಿಶೇಷ ನ್ಯಾಯಾಲಯವು ಜಾಮೀನು ಅರ್ಜಿ ತಿರಸ್ಕರಿಸಿತ್ತು. ಜೈಲಿನಲ್ಲಿದ್ದಾಗ ಸ್ಟ್ರಾ ಮತ್ತು ಸಿಪ್ಪರ್‌ ಪಡೆಯಲೂ ಸ್ವಾಮಿ ಕೋರ್ಟ್‌ ಮೆಟ್ಟಿಲೇರಿದ್ದರು. ನಂತರ, ತಮಗೆ ಒಳ್ಳೆಯ ಆಹಾರ ನೀಡುತ್ತಿಲ್ಲ ಮತ್ತು ತಮ್ಮ ಕೊಠಡಿಯಲ್ಲಿ ಸ್ವಚ್ಛತೆ ಇಲ್ಲಎಂ ದೂ ಸ್ವಾಮಿ ನ್ಯಾಯಾಲಯದಲ್ಲಿ ಮುಂಬಯಿಯ ತಲೋಜಾ ಜೈಲಿನ ಅಧಿಕಾರಿಗಳ ವಿರುದ್ಧ ಆರೋಪ ಮಾಡಿದ್ದರು. ಬೆಂಗಳೂರಿನಲ್ಲಿಯೂ ಕೆಲಸಸ್ಟ್ಯಾನ್‌ ಸ್ವಾಮಿ ಅವರ ಪೂರ್ತಿ ಹೆಸರು ಸ್ಟ್ಯಾನಿಸ್ಲಾಸ್‌ ಲೂರ್ದುಸ್ವಾಮಿ. ತಮಿಳುನಾಡಿನ ತಿರುಚಿನಾಪಳ್ಳಿಯಲ್ಲಿ ಜನಿಸಿದ ಅವರು ಫಿಲಿಪ್ಪೀನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಓದುವಾಗಲೇ ಹಲವು ಸಾಮಾಜಿಕ ಹೋರಾಟಗಳಲ್ಲಿ ಭಾಗಿಯಾಗಿದ್ದರು. 1975- 1986ರವರೆಗೆ ಬೆಂಗಳೂರಿನ ಭಾರತೀಯ ಸಾಮಾಜಿಕ ಸಂಸ್ಥೆಯ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದರು. ನಂತರ ಜಾರ್ಖಂಡ್‌ನಲ್ಲಿ ಬುಡಕಟ್ಟು ಜನಾಂಗದವರ ಹಕ್ಕುಗಳ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. ಗಣ್ಯರ ಸಂತಾಪಸ್ಟ್ಯಾನ್‌ ಸ್ವಾಮಿ ನಿಧನಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸೇರಿ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ''ಸ್ವಾಮಿ ಅವರಿಗೆ ನ್ಯಾಯ ಮತ್ತು ಮಾನವೀಯತೆ ಸಿಗಬೇಕಿತ್ತು,'' ಎಂದು ರಾಹುಲ್‌ ಹೇಳಿದ್ದಾರೆ. "ಸಮಾಜದ ಕೆಳವರ್ಗದ ಜನರಿಗಾಗಿ ಬದುಕಿನುದ್ದಕ್ಕೂ ಹೋರಾಟ ಮಾಡಿದ ವ್ಯಕ್ತಿ ನ್ಯಾಯಾಂಗ ಬಂಧನದಲ್ಲಿದ್ದಾಗ ಕೊನೆಯುಸಿರೆಳೆದದ್ದು ನಿಜಕ್ಕೂ ದುರಂತ,'' ಎಂದು ಪಿಣರಾಯಿ ಹೇಳಿದ್ದಾರೆ.


from India & World News in Kannada | VK Polls https://ift.tt/3hGJPph

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...