
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಿಎಸ್ ಯಡಿಯೂರಪ್ಪ ಅವರು ತಮ್ಮ ಕಾವೇರಿ ನಿವಾಸದಲ್ಲಿ ರಿಲ್ಯಾಕ್ಸ್ ಮೂಡ್‌ನಲ್ಲಿ ಇದ್ದಾರೆ. ಕಾವೇರಿ ನಿವಾಸದಲ್ಲಿ ಬೆಳಗ್ಗೆ ಗೋವುಗಳ ಆರೈಕೆ ಮಾಡುತ್ತಾ ಹಾಗೂ ಭೇಟಿಗೆ ಬಂದವರ ಬಳಿ ಖುಷಿಯಾಗಿ ಮಾತನಾಡುತ್ತಾ ಕಾಲ ಕಳೆಯುತ್ತಿದ್ದಾರೆ. ಸೋಮವಾರ ರಾಜೀನಾಮೆ ನೀಡುವ ಸಂದರ್ಭದಲ್ಲಿ ಯಡಿಯೂರಪ್ಪ ಕಣ್ಣೀರು ಹಾಕಿದ್ದರು. ಇದು ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿತ್ತು. ಇದೀಗ ಹಂಗಾಮಿ ಸಿಎಂ ಆಗಿರುವ ಯಡಿಯೂರಪ್ಪ ಅವರನ್ನು ಪಕ್ಷದ ನಾಯಕರು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ. ಭೇಟಿ ಮಾಡಲು ಬಂದವರ ಜೊತೆ ಖುಷಿಯಾಗಿಯೇ ಯಡಿಯೂರಪ್ಪ ಮಾತುಕತೆ ನಡೆಸುತ್ತಿದ್ದಾರೆ. ಬಿಎಸ್‌ವೈ ನಿವಾಸಕ್ಕೆ ಆಗಮಿಸಿದ ಮುರುಗೇಶ್ ನಿರಾಣಿ ಹಂಗಾಮಿ ಸಿಎಂ ಯಡಿಯೂರಪ್ಪ ಅವರ ಕಾವೇರಿ ನಿವಾಸಕ್ಕೆ ಮುಖ್ಯಮಂತ್ರಿ ಸ್ಥಾನದ ಸಂಭಾವ್ಯ ಅಭ್ಯರ್ಥಿ ಮುರುಗೇಶ್ ನಿರಾಣಿ ಅಗಮಿಸಿದ್ದಾರೆ. ಸೋಮವಾರ ಸಾಧನಾ ಸಮಾವೇಶಕ್ಕೆ ನಿರಾಣಿ ಗೈರಾಗಿದ್ದರು. ನಿರಾಣಿ ಗೈರು ಕುತೂಹಲಕ್ಕೆ ಗ್ರಾಮವಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ನಿರಾಣಿ ಆಗಮಿಸಿ ಯಡಿಯೂರಪ್ಪ ಜೊತೆ ಮಾತುಕತೆ ನಡೆಸಿದ್ದಾರೆ. ನಿರಾಣಿ ಸಿಎಂ ಸ್ಥಾನ ಅಭ್ಯರ್ಥಿಯ ರೇಸ್‌ನಲ್ಲಿ ಇದ್ದಾರೆ. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಎಡಿಜಿಪಿ ಗುಪ್ತಚರ ಇಲಾಖೆ ದಯಾನಂದ ಹಾಗೂ ಬಿಜೆಪಿ ಮುಖಂಡ ಗೋ ಮಧುಸೂದನ್ ಕೂಡಾ ಆಗಮಿಸಿ ಯಡಿಯೂರಪ್ಪ ಜೊತೆ ಮಾತುಕತೆ ನಡೆಸಿದರು.
from India & World News in Kannada | VK Polls https://ift.tt/3f0hmKl