ಬಿಎಸ್‌ ಯಡಿಯೂರಪ್ಪ ಪರವಾಗಿ ಅರಮನೆ ಮೈದಾನದಲ್ಲಿ ಮಠಾಧೀಶರ ‘ಧರ್ಮ ಯುದ್ಧ’

ಬೆಂಗಳೂರು: ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ಒತ್ತಡ ಹಿನ್ನೆಲೆಯಲ್ಲಿ ಅರಮನೆ ಮೈದಾನದಲ್ಲಿ ಮಠಾಧೀಶರು ಭಾನುವಾರ ಸಮಾವೇಶವನ್ನು ಹಮ್ಮಿಕೊಂಡಿದ್ದಾರೆ. ಬಾಳೆಹೊಸೂರು ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಸಮಾವೇಶ ನಡೆಯಲಿದ್ದು, ಈಗಾಗಲೇ 200ಕ್ಕೂ ಅಧಿಕ ಮಠಾಧೀಶರು ಸಮಾವೇಶಕ್ಕೆ ಆಗಮಿಸಿದ್ದಾರೆ. ಸಿಎಂ ಸ್ಥಾನಕ್ಕೆ ಬಿಎಸ್‌ವೈ ರಾಜೀನಾಮೆ ನೀಡಬಾರದು ಎಂದು ಮಠಾಧೀಶರು ಸಮಾವೇಶದ ಮೂಲಕ ಒತ್ತಡ ಹೇರಲು ಮುಂದಾಗಿದ್ದಾರೆ. ಈಗಾಗಲೇ ಹಲವು ಸ್ವಾಮೀಜಿಗಳು ಬಿಎಸ್‌ವೈ ನಿವಾಸಕ್ಕೆ ತೆರಳಿ ಬೆಂಬಲ ಸೂಚಿಸಿದ್ದರು. ಇದೀಗ ವರ್ತಮಾನದ ಸಮಸ್ಯೆಗಳು ಮತ್ತು ಪರಿಹಾರ ಎಂಬ ಹೆಸರಿನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶಕ್ಕೆ ಒಂದು ಸಾವಿರ ಮಠಾಧೀಶರು ಆಗಮಿಸಲಿದ್ದಾರೆ ಎಂದು ಹೇಳಲಾಗಿದ್ದು ಅರಮನೆ ಮೈದಾನಕ್ಕೆ ಈಗಾಗಲೇ ಇನ್ನೂರಕ್ಕೂ ಹೆಚ್ಚು ಮಠಾಧೀಶರು ಆಗಮಿತ್ತಿದ್ದಾರೆ. ‘ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು. ಪಕ್ಷ ನನಗೆ ಮಾತೃ ಸಮಾನ,ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ’ ಎಂದು ಯಡಿಯೂರಪ್ಪ ಹೇಳಿಕೆಯನ್ನು ನೀಡಿದ್ದಾರೆ. ಆದರೆ ಈ ಎಲ್ಲ ಬೆಳವಣಿಗೆಗಳ ನಡುವೆಯೂ ಇದೀಗ ಮಠಾಧೀಶರು ಸಮಾವೇಶ ನಡೆಸುವ ಮೂಲಕ ಯಡಿಯೂರಪ್ಪ ಅವರಿಗೆ ಬೆಂಬಲ ಸೂಚಿಸುತ್ತಿದ್ದಾರೆ. ಈ ವರೆಗೆ ಸುಮಾರು 200 ಕ್ಕೂ ಅಧಿಕ ಸ್ವಾಮೀಜಿಗಳು ಭಾಗಿಯಾಗಿದ್ದಾರೆ.


from India & World News in Kannada | VK Polls https://ift.tt/3x7Zqnf

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...