ರಾಜ್ಯದ ಎಲ್ಲ ಜನರಿಗೆ ಲಸಿಕೆ ಹಾಕಲು ಯೋಜನೆ ರೂಪಿಸಲಾಗಿದೆಯೇ?; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಪ್ರಶ್ನೆ

ಬೆಂಗಳೂರು: ರಾಜ್ಯದ ಎಲ್ಲ ಜನರಿಗೆ ಕಾಲಮಿತಿಯಲ್ಲಿ ಲಸಿಕೆ ಹಾಕಲು ಯೋಜನೆಯನ್ನು ರೂಪಿಸಲಾಗಿದೆಯೇ ಎಂಬ ಬಗ್ಗೆ ವಿವರ ನೀಡುವಂತೆ ಹೈಕೋರ್ಟ್‌ ರಾಜ್ಯ ಸರಕಾರಕ್ಕೆ ಬುಧವಾರ ನಿರ್ದೇಶನ ನೀಡಿತು. ಕೋವಿಡ್‌-19 ನಿರ್ವಹಣೆ ಸಂಬಂಧ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಿಜೆ ಎ.ಎಸ್‌. ಓಕ್‌ ಮತ್ತು ನ್ಯಾ.ಅರವಿಂದ್‌ ಕುಮಾರ್‌ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಇದೇ ವೇಳೆ ರಾಜ್ಯ ಸರಕಾರ ಸಲ್ಲಿಸಿದ್ದ ಪ್ರಮಾಣಪತ್ರದಲ್ಲಿ ಲಸಿಕೆ ಕೊರತೆಯಾಗುವುದಿಲ್ಲವೆಂಬ ಹೇಳಿಕೆ ಗಮನಿಸಿದ ನ್ಯಾಯಪೀಠ, ಸೋಂಕಿನ ತೀವ್ರತೆ ತಗ್ಗುತ್ತಿದೆ. ಹಾಗಾಗಿ ಲಸಿಕೆ ನೀಡುವುದನ್ನು ತೀವ್ರಗೊಳಿಸಬೇಕಿದೆ. ಆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜನರಿಗೆ ಲಸಿಕೆಯನ್ನು ನೀಡಲು ಕಾಲಮಿತಿಯ ಯೋಜನೆ ಹಾಕಿಕೊಂಡಿದೆಯೇ? ಯೋಜನೆ ರೂಪಿಸಿದ್ದರೆ ಆ ಬಗ್ಗೆ ಮುಂದಿನ ವಿಚಾರಣೆ ವೇಳೆ ವಿವರಗಳನ್ನು ನೀಡಬೇಕು ಎಂದು ಸರಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಆ.10ಕ್ಕೆ ಮುಂದೂಡಿತು. ಮೂರನೇ ಸಂಭಾವ್ಯ ಕೊರೊನಾ ಅಲೆಯನ್ನು ತಡೆಯಲು ಕೈಗೊಂಡಿರುವ ಸಿದ್ಧತಾ ಕ್ರಮಗಳ ಬಗ್ಗೆ ಈ ಹಿಂದಿನ ಆದೇಶದಂತೆ ಕ್ರಿಯಾ ಯೋಜನೆಯನ್ನು ಸಲ್ಲಿಸಬೇಕು ಎಂದೂ ಸಹ ನ್ಯಾಯಾಲಯವು ಸರಕಾರಕ್ಕೆ ಆದೇಶಿಸಿತು. ಕುಂದುಕೊರತೆ ನಿವಾರಣಾ ಘಟಕ ಸ್ಥಾಪನೆ: ಈ ಮಧ್ಯೆ, ಸರಕಾರಿ ಕೋಟಾದದಡಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ಕೋವಿಡ್‌ ರೋಗಿಗಳಿಗೆ ನಿಗದಿಗಿಂತ ಅಧಿಕ ಶುಲ್ಕ ವಿಧಿಸಲಾಗಿದೆ ಎಂಬ ಬಗ್ಗೆ ವ್ಯಾಪಕ ದೂರುಗಳು ಬಂದಿವೆ. ಆ ಕುರಿತು ದೂರುಗಳ ವಿಲೇವಾರಿಗೆ ಸರಕಾರದಿಂದ ಏನಾದರೂ ವ್ಯವಸ್ಥೆ ಮಾಡುವಂತೆ ನಿರ್ದೇಶನ ನೀಡಬೇಕು ಎಂದು ವಕೀಲ ಶ್ರೀಧರ್‌ ಪ್ರಭು ಅವರು ನ್ಯಾಯಪೀಠದ ಗಮನ ಸೆಳೆದರು. ಆಗ ನ್ಯಾಯಪೀಠ, ಇಂತಹ ದೂರುಗಳ ಬಗ್ಗೆ ಪರಿಶೀಲನೆ ನಡೆಸಲು ಸರಕಾರವು ಕುಂದುಕೊರತೆ ನಿವಾರಣಾ ಘಟಕವನ್ನು ಸ್ಥಾಪನೆ ಮಾಡಬೇಕು ಎಂದು ನಿರ್ದೇಶನ ನೀಡಿತು.


from India & World News in Kannada | VK Polls https://ift.tt/3j1a8XM

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...