‘ಬಿಎಸ್‌ವೈ ಹೋದ್ರೆ ಮತ್ತೊಬ್ಬ ಭ್ರಷ್ಟ ಸಿಎಂ ಆಗ್ತಾನೆ, ಈ ಸರ್ಕಾರನೇ ತೊಲಗ್ಬೇಕು’; ಸಿದ್ದರಾಮಯ್ಯ

ಹುಬ್ಬಳ್ಳಿ: ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಮುಖ್ಯಮಂತ್ರಿ ಮಾಡಿದರೆ ಸಾಮಾನ್ಯ ಜನರಿಗೇನು ಲಾಭ? ಅದರ ಬದಲು ಅಧಿಕಾರ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿರುವ ಬಿಜೆಪಿ ಪಕ್ಷವೇ ಅಧಿಕಾರ ಬಿಟ್ಟು ತೊಲಗಿದರೆ ಜನ ನೆಮ್ಮದಿಯ ಬದುಕು ನಡೆಸುವಂತಾಗುತ್ತದೆ ಎಂದು ವಿಪಕ್ಷ ನಾಯಕ ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಭ್ರಷ್ಟ ಪಕ್ಷ, ಭ್ರಷ್ಟರನ್ನು ರಕ್ಷಿಸುವ ಕೆಲಸವನ್ನು ಬಿಜೆಪಿ‌ ಮಾಡುತ್ತಿದೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ. ಯಡಿಯೂರಪ್ಪ ಹೊದ್ರೆ ಮತ್ತೊಬ್ಬ ಭ್ರಷ್ಟ ಮುಖ್ಯಮಂತ್ರಿ ಆಗ್ತಾನೆ. ಸಿಎಂ ಬದಲಾವಣೆ ಆದ್ರೆ ರಾಜ್ಯದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ಬಿಜೆಪಿಯೇ ರಾಜ್ಯ ಬಿಟ್ಟು‌ ತೊಲಗಬೇಕು. ಬಿಜೆಪಿಯಿಂದ ರಾಜ್ಯದ ಹಿತ ಕಾಪಡಲು ಸಾದ್ಯವಿಲ್ಲ ಎಂದು ಹೇಳಿದರು. ಇನ್ನು ಬಿಎಸ್‌ವೈ ಆಡಳಿತಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮೆಚ್ಚುಗೆ ವ್ಯಕ್ತಪಡಿಸಿರುವುದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹೆತ್ತವರಿಗೆ ಹೆಗ್ಗಣ ಮುದ್ದು ಎಂಬ ಗಾಧೆ ಮಾತಿನಂತೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಯಡಿಯೂರಪ್ಪ ಅವರೇ ಉತ್ತಮ ಮುಖ್ಯಮಂತ್ರಿಯಾಗಿ ಕಂಡಿದ್ದಾರೆ. ಸ್ವತಃ ಬಿಜೆಪಿ ಶಾಸಕರೇ ಯಡಿಯೂರಪ್ಪನವರ ಕುಟುಂಬ ಸರ್ಕಾರದ ಖಜಾನೆಯನ್ನು ಲೂಟಿ ಮಾಡುತ್ತಿದೆ ಅಂದಿದ್ದಾರೆ, ಇದಕ್ಕಿಂತ ಬೇರೆ ಸಾಕ್ಷಿ ಬೇಕಾ? ಎಂದು ಪ್ರಶ್ನಿಸಿದರು. ಇನ್ನು ಪ್ರವಾಹದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳೆ ನಾಶವಾಗಿದೆ, ಈವರೆಗೆ 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಜಾನುವಾರುಗಳು ಸಾವಿಗೀಡಾಗಿವೆ. ಜನರ ಕಷ್ಟ ಅರಿತು ಅವರ ನೆರವಿಗೆ ಧಾವಿಸಬೇಕಿದ್ದ ಬಿಜೆಪಿ ನಾಯಕರು ಮುಖ್ಯಮಂತ್ರಿ ಬದಲಾವಣೆ, ಮಂತ್ರಿ ಪದವಿ ಉಳಿಸಿಕೊಳ್ಳುವುದರಲ್ಲಿ ಮಗ್ನರಾಗಿದ್ದಾರೆ. ಬಿಜೆಪಿ ಪಕ್ಷವೇ ಭ್ರಷ್ಟರ ಪಕ್ಷವಾಗಿರುವುದರಿಂದ ಶಶಿಕಲಾ ಜೊಲ್ಲೆಯವರು ಲಂಚ ಪಡೆದದ್ದನ್ನು ಬಿಜೆಪಿ ನಾಯಕರು ಸಾಧನೆಯಾಗಿ ಪರಿಗಣಿಸಿದಂತಿದೆ. ಇಲ್ಲದಿದ್ದರೆ ದಾಖಲೆ ಸಾಮೇತ ಸಿಕ್ಕಿಬಿದ್ದಿರುವ ಭ್ರಷ್ಟ ಮಂತ್ರಿಯನ್ನು ಇನ್ನೂ ಸಚಿವ ಸಂಪುಟದಲ್ಲಿ ಇಟ್ಟುಕೊಂಡು ಸುಮ್ಮನೆ ಕೂರುತ್ತಿದ್ದರೆ? ಎಂದು ಹೇಳಿದರು. ಇದೇ ವೇಳೆ ಮಠಾದೀಶರು ಧರ್ಮ ಪ್ರವಚನ ಮಾಡಲಿ, ಮಾರ್ಗದಶನ ಮಾಡಲಿ ಎಂದ ಸಿದ್ದರಾಮಯ್ಯ, ಜನರು ಜನಪ್ರತಿನಿಧಿಗಳನ್ನು ಆಯ್ಕೆ ಮಾಡ್ತಾರೆ, ಜನಪ್ರತಿನಿಧಿಗಳು ಸಿಎಂ ಆಯ್ಕೆ ಮಾಡ್ತಾರೆ ಎಂದು ಮಠಾಧೀಶರುಗಳ ರಾಜಕೀಯ ಮಧ್ಯಸ್ಥಿಕೆ ವಿಚಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.


from India & World News in Kannada | VK Polls https://ift.tt/3x0E2Al

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...