ಉತ್ತರಾಖಂಡ್‌ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಪುಷ್ಕರ್‌ ಸಿಂಗ್‌ ಧಮಿ ಆಯ್ಕೆ

ಡೆಹ್ರಾಡೂನ್‌: ಉತ್ತರಾಖಂಡ್‌ನ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಪುಷ್ಕರ್‌ ಸಿಂಗ್‌ ಧಮಿ ಆಯ್ಕೆಯಾಗಿದ್ದಾರೆ. ಶನಿವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಯಿತು. ಪುಷ್ಕರ್‌ ಸಿಂಗ್‌ ಧಮಿ ಉತ್ತರಾಖಂಡ್‌ನ 11ನೇ ಮುಖ್ಯಮಂತ್ರಿಯಾಗಿ ಶೀಘ್ರದಲ್ಲೇ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಾಲಿ ತೀರತ್‌ ಸಿಂಗ್‌ ರಾವತ್‌ ನಿನ್ನೆ ಅಂದರೆ ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಹುದ್ದೆ ವಹಿಸಿಕೊಂಡ ನಾಲ್ಕೇ ತಿಂಗಳಿಗೆ ಅವರು ಸಿಎಂ ಕುರ್ಚಿ ತೊರೆದಿದ್ದರು. ಶಾಸಕರಲ್ಲದೆ ಸಿಎಂ ಸ್ಥಾನಕ್ಕೇರಿದ್ದ ಅವರು ಹುದ್ದೆ ಉಳಿಸಿಕೊಳ್ಳಬೇಕಿದ್ದರೆ ಆರು ತಿಂಗಳ ಒಳಗೆ ವಿಧಾನಸಭೆಗೆ ಆಯ್ಕೆಯಾಗಬೇಕಿತ್ತು. ಆದರೆ ಸೆಪ್ಟೆಂಬರ್‌ 10ರ ಒಳಗೆ ಶಾಸಕರಾಗುವ ಸಾಧ್ಯತೆಯೇ ಇಲ್ಲದ ಕಾರಣಕ್ಕೆ ಅವರು ಅನಿವಾರ್ಯವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದುಕೊಳ್ಳಲಾಗಿದೆ. ಶನಿವಾರ ಬಿಜೆಪಿಯ 57 ಶಾಸಕರು ರಾಜಧಾನಿ ಡೆಹ್ರಾಡೂನ್‌ನಲ್ಲಿ ಶಾಸಕಾಂಗ ಸಭೆಗಾಗಿ ಒಟ್ಟು ಸೇರಿದ್ದರು. ಈ ಸಭೆಗೆ ಕೇಂದ್ರದಿಂದ ವೀಕ್ಷಕರಾಗಿ ನರೇಂದ್ರ ಸಿಂಗ್‌ ತೋಮರ್‌ ಆಗಮಿಸಿದ್ದರು. ಈ ಸಭೆಯಲ್ಲಿ ಪುಷ್ಕರ್‌ ಸಿಂಗ್‌ ಧಮಿ ಅವರನ್ನು ಮುಂದಿನ ಸಿಎಂ ಆಗಿ ಆಯ್ಕೆ ಮಾಡಲಾಯಿತು. 45 ವರ್ಷದ ಧಮಿ ಅವರು ಖಾತಿಮಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಎರಡನೇ ಬಾರಿಗೆ ಶಾಸಕರಾಗಿದ್ದಾರೆ. ಇವರು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರ ಆಪ್ತರು ಎಂದು ಪರಿಗಣಿಸಲಾಗಿದೆ. ವಿಧಾನಸಭೆಗೆ ಒಂದು ವರ್ಷದ ಒಳಗೆ ಚುನಾವಣೆ ನಡೆಯಲಿದ್ದು, ಚುನಾವಣಾ ವರ್ಷದಲ್ಲಿ ಧಮಿ ಸಿಎಂ ಸ್ಥಾನಕ್ಕೇರಿದ್ದಾರೆ. ಪಕ್ಷವನ್ನು ಮರಳಿ ಅಧಿಕಾರಕ್ಕೇ ತರುವ ಹೊಣೆ ಈಗ ಅವರ ಮೇಲಿದೆ.


from India & World News in Kannada | VK Polls https://ift.tt/3Aj8tVv

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...