‘ಕಾಂಗ್ರೆಸ್‌ ಅಪ್ಪ-ಅಮ್ಮ ಇಲ್ಲದ ಪಕ್ಷ, ಅವರಿಗೆ ಸಿಎಂ ಸ್ಥಾನ ಕನಸೇ ಸರಿ’; ಕೆಎಸ್‌ ಈಶ್ವರಪ್ಪ

ಬೆಂಗಳೂರು: ಕಾಂಗ್ರೆಸ್‌ ಅಪ್ಪ-ಅಮ್ಮ ಇಲ್ಲದ ಪಕ್ಷ. ರಾಜ್ಯ ಕಾಂಗ್ರೆಸ್‌ನಲ್ಲಿ ಈಗಾಗಲೇ ಜಾತಿಗೊಬ್ಬರಂತೆ ಐದು ಮಂದಿ ಸಿಎಂ ಎಂದು ಘೋಷಿಸಿಕೊಂಡಿದ್ದಾರೆ. ಈ ಜನ್ಮದಲ್ಲಿ ಕಾಂಗ್ರೆಸ್‌ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ರಾಜ್ಯದಲ್ಲಿ ಮುಂದೆಯೂ ಅಧಿಕಾರಕ್ಕೆ ಬರಲಿದೆ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು. ವಿಧಾನಸೌಧದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ರಾಜ್ಯ ಕಾಂಗ್ರೆಸ್‌ನಲ್ಲಿ ಈಗಾಗಲೇ ಐದು ಮಂದಿ ಸಿಎಂ ಎಂದು ಘೋಷಿಸಿಕೊಂಡಿದ್ದಾರೆ. ಡಿ.ಕೆ.ಶಿವಕುಮಾರ್‌ ಒಕ್ಕಲಿಗರಿಗೆ, ಸಿದ್ದರಾಮಯ್ಯ ಕುರುಬರಿಗೆ, ಡಾ. ಜಿ. ಪರಮೇಶ್ವರ್‌ ಎಸ್ಸಿಗೆ, ಎಂ.ಬಿ. ಪಾಟೀಲ್‌ ಲಿಂಗಾಯಿತರಿಗೆ, ತನ್ವೀರ್‌ ಸೇಠ್‌ ಮುಸ್ಲಿಮರಿಗೆ ಎಂಬಂತೆ ಘೋಷಿಸಿಕೊಂಡಿದ್ದಾರೆ. ಕಾಂಗ್ರೆಸ್‌ ಈ ಮಟ್ಟಕ್ಕೆ ಇಳಿಯಬಾರದಿತ್ತು ಎಂದು ಬೇಸರ ವ್ಯಕ್ತಪಡಿಸಿದರು. ಇಂದು ಕಾಂಗ್ರೆಸ್‌ ಎಲ್ಲಿದೆ ಎಂದು ಹುಡುಕುವಂತಾಗಿದೆ. ರಾಜಸ್ಥಾನ, ಪಂಜಾಬ್‌ನಲ್ಲಿ ಸರಕಾರವಿರುವುದು ಬಿಟ್ಟರೆ ಕರ್ನಾಟಕದಲ್ಲಿ ಗೆದ್ದಿದ್ದ 70ಕ್ಕೂ ಹೆಚ್ಚು ಮಂದಿಯಲ್ಲಿ ಒಂದಿಷ್ಟು ಜನ ಬಿಟ್ಟು ಹೋಗಿದ್ದಾರೆ. ಕಾಂಗ್ರೆಸ್‌ ಜೀವವೇ ಹೋಗುತ್ತಿರುವ ಪರಿಸ್ಥಿತಿಯಲ್ಲಿ ಮುಂದಿನ ಸಿಎಂ ನಾನು ಎಂಬಂತೆ ಬಡಿದಾಡುಕೊಳ್ಳುತ್ತಿದ್ದಾರೆ. ಸಾಯುತ್ತಿರುವ ಕಾಂಗ್ರೆಸ್‌ ಉಳಿಸಲು ಯಾರಿಂದಲೂ ಸಾಧ್ಯವಿಲ್ಲ. ಇನ್ನು ಸಿಎಂ ಸ್ಥಾನ ಕನಸೇ ಸರಿ ಎಂದು ಲೇವಡಿ ಮಾಡಿದರು. ನಮ್ಮ ಪಕ್ಷದಲ್ಲಿ ಸಣ್ಣ ಪುಟ್ಟ ಗೊಂದಲವಿದ್ದು, ರಿಪೇರಿ ಮಾಡಿಕೊಳ್ಳುತ್ತೇವೆ. ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರು ಸಚಿವರು, ಶಾಸಕರು, ಪರಿಷತ್‌ ಸದಸ್ಯರು ಸೇರಿದಂತೆ ಎಲ್ಲ ಅಭಿಪ್ರಾಯ ಪಡೆದು ತೆರಳಿದ್ದಾರೆ. ಕೇಂದ್ರದ ನಾಯಕರ ತೀರ್ಮಾಕ್ಕೆ ಬದ್ಧ ಎಂದು ಸಿಎಂ ಯಡಿಯೂರಪ್ಪ ಅವರೂ ಹೇಳಿದ್ದಾರೆ ಎಂದು ತಿಳಿಸಿದರು.


from India & World News in Kannada | VK Polls https://ift.tt/3AmPoll

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...