ಹುಬ್ಬಳ್ಳಿ: ಬಿಎಸ್ ಯಡಿಯೂರಪ್ಪನವರ ಸಂಪುಟದಲ್ಲಿ ಗೃಹ ಖಾತೆ ಸಚಿವರಾಗಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿ, ರಾಜ್ಯದ ಉದ್ದಗಲಕ್ಕೂ ಎಲ್ಲರ ಗಮನ ಸೆಳೆದು ಬದಲಾದ ಸನ್ನಿವೇಶದಲ್ಲಿ ಇದೀಗ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿಯವರಿಗೆ ಕೇಂದ್ರ ಸಚಿವ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್. ಆರ್. ಬೊಮ್ಮಾಯಿ (ಸೋಮಪ್ಪ ರಾಯಪ್ಪ ಬೊಮ್ಮಾಯಿ) ಅವರ ಪುತ್ರ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗುವ ಮೂಲಕ, ತಂದೆ ಹಾಗೂ ಮಗ ಸಿಎಂ ಸ್ಥಾನಕ್ಕೇರಿ ಹೊಸ ಇತಿಹಾಸ ನಿರ್ಮಿಸಿದ್ದಾರೆ ಎಂದು ಜೋಶಿ ತಿಳಿಸಿದ್ದಾರೆ. ಇಂದು ಸಂಜೆ ನಡೆದ ಮಹತ್ವದ ರಾಜ್ಯ ಬಿಜೆಪಿ ಸಚಿವ ಸಂಪುಟ ಸಭೆಯಲ್ಲಿಯೇ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಾಗಿದ್ದು, ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ನನ್ನ ದೀರ್ಘಕಾಲದ ಒಡನಾಡಿ, ಲೋಕಸಭಾ ಕ್ಷೇತ್ರದ ಹೆಮ್ಮೆಯ ಶಾಸಕರಾದ ಬಸವರಾಜ ಬೊಮ್ಮಾಯಿಯವರ ಆಡಳಿತಾವಧಿಯ ಕಾಲದಲ್ಲಿ ರಾಜ್ಯ ಇನ್ನೂ ಉತ್ತುಂಗಕ್ಕೇರಲಿ, ಜನ ಮೆಚ್ಚುವ ಕಾರ್ಯ ಅವರಿಂದ ಆಗಲಿ ಎಂದು ಪ್ರಲ್ಹಾದ್ ಜೋಶಿ ಹಾರೈಸಿದ್ದಾರೆ.
from India & World News in Kannada | VK Polls https://ift.tt/3f2rVwq