ಮಂಗಳೂರು: ಅಪ್ರಾಪ್ತ ಬಾಲಕಿ ಜತೆ ಮೊಬೈಲ್ ಮೂಲಕ ಅನುಚಿತವಾಗಿ ವರ್ತಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯೊಂದರ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿ ಪೋಷಕರ ಜತೆ ದೂರು ನೀಡಲು ಬಂದಿದ್ದ ಬಾಲಕಿಯಿಂದ ಮೊಬೈಲ್ ಸಂಖ್ಯೆಯನ್ನು ಪಡೆದ ಠಾಣೆಯ ಹೆಡ್ಕಾನ್ಸ್ಟೆಬಲ್ ವಿನೋದ್ ಎಂಬವರು ಆಕೆಗೆ ಕರೆ ಮಾಡಿ, ಸಂದೇಶ ಕಳುಹಿಸಿ ಅನುಚಿತವಾಗಿ ವರ್ತಿಸಿರುವ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು ಎಂದರು. ಮಕ್ಕಳ ಕಲ್ಯಾಣ ಸಮಿತಿ ಮೂಲಕ ನೀಡಲಾದ ದೂರಿನ ಮೇರೆಗೆ ಮಂಗಳೂರು ನಗರ ಪೊಲೀಸ್ ಠಾಣೆಯೊಂದರ ಸಿಬ್ಬಂದಿಯನ್ನು ಬಂಧಿಸಲಾಗಿದ್ದು, ಸಾಕಷ್ಟು ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ವಿನೋದ್ ವಿರುದ್ಧ ಪ್ರಕರಣ ದಾಖಲಿಸಿ, ಮಂಗಳವಾರ ಬಂಧಿಸಲಾಗಿದೆ ಎಂದು ಅವರು ಹೇಳಿದರು.
from India & World News in Kannada | VK Polls https://ift.tt/3iax8UZ