ಮೇಕೆದಾಟು ವಿವಾದ: ನಮ್ಮ ಕಾನೂನು ಹೋರಾಟ ಮುಂದುವರಿಯಲಿದೆ ಎಂದ ಬೊಮ್ಮಾಯಿ

ಬೆಂಗಳೂರು: ತಮಿಳುನಾಡಿನಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಸರಕಾರ ಸಣ್ಣ ವಿಷಯಗಳನ್ನು ದೊಡ್ಡದಾಗಿ ಬಿಂಬಿಸಿ ರಾಜಕೀಯ ಸಾಹಸ ಪ್ರದರ್ಶಿಸುತ್ತಿದೆ. ಆದರೆ, ವಿಚಾರದಲ್ಲಿ ರಾಜ್ಯ ಸರಕಾರದ ಕಾನೂನು ಹೋರಾಟ ಮುಂದುವರಿಯಲಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ಸಚಿವ ಹೇಳಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, " ಸರಕಾರ ಯಾವಾಗಲೂ ನೀರಿನ ವಿಚಾರವಾಗಿ ಕರ್ನಾಟಕದೊಂದಿಗೆ ತಕರಾರು ಮಾಡುತ್ತಲೇ ಬಂದಿದೆ. ನ್ಯಾಯಮಂಡಳಿ ರಚನೆಯಾದ ಮೇಲೆ ತಮಿಳುನಾಡಿಗೆ ಕಷ್ಟವಾಗುತ್ತಿದೆ" ಎಂದರು. "ಮೇಕೆದಾಟು ಯೋಜನೆಯಿಂದ ಎರಡೂ ರಾಜ್ಯಗಳಿಗೆ ಅನುಕೂಲವಾಗಲಿದೆ. ಅವರ ಪಾಲಿನ ನೀರು ಒದಗಿಸಲಾಗುವುದು. ಅದಕ್ಕೆ ಎಲ್ಲಿಯೂ ತಡೆಯಾಗುವುದಿಲ್ಲ. ಹೆಚ್ಚುವರಿ ನೀರನ್ನು ಮಾತ್ರ ಬಳಕೆ ಮಾಡುತ್ತದೆ. ಮಾರ್ಕಂಡೇಯ ಯೋಜನೆಗೂ ತಮಿಳುನಾಡಿನ ತಕರಾರು ಇದೆ. ರಾಜಕೀಯಕ್ಕೆ ಏನು ಬೇಕು ಅದನ್ನು ತಮಿಳುನಾಡು ಮಾಡುತ್ತಿದೆ. ನಾವು ಕಾನೂನಾತ್ಮಕವಾಗಿ ಸರಿಯಾಗಿದ್ದೇವೆ" ಎಂದರು. "ಇದು ಕುಡಿಯುವ ನೀರಿನ ಯೋಜನೆ. ಕೆಆರ್‌ಎಸ್‌ ಬಿಟ್ಟರೆ ಕಾವೇರಿ ನದಿ ನೀರನ್ನು ಶೇಖರಿಸಿಡಲು ಬೇರೆ ಸ್ಥಳ ಇಲ್ಲ. ಮೇಕೆದಾಟು ಯೋಜನೆಯಿಂದ ಸಂಕಷ್ಟ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಾಗುತ್ತದೆ" ಎಂದರು. ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ಕೈಗೆತ್ತಿಕೊಳ್ಳದಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವುದಕ್ಕೆ ಬೊಮ್ಮಾಯಿ ಈ ಪ್ರತಿಕ್ರಿಯೆ ನೀಡಿದ್ದಾರೆ. ಕಾವೇರಿ ನದಿ ಪಾತ್ರದಲ್ಲಿ ತಮಿಳುನಾಡು ಸರಕಾರ ಕೈಗೊಳ್ಳುತ್ತಿರುವ ಎರಡು ಜಲವಿದ್ಯುತ್ ಯೋಜನೆಗಳಿಗೂ, ಮೇಕೆದಾಟು ಯೋಜನೆಗೂ ಹೋಲಿಕೆ ಮಾಡಬೇಡಿ ಎಂದು ಸ್ಟಾಲಿನ್ ಮನವಿ ಮಾಡಿದ್ದಾರೆ.


from India & World News in Kannada | VK Polls https://ift.tt/2TzyXl0

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...