ಡಿಕೆಶಿ ಮೇಲಿನ ಐಟಿ ದಾಳಿ ಪ್ರಕರಣ, ನೋಟಿಸ್‌ಗೆ ತಡೆ ನೀಡಿದ್ರೆ ತನಿಖೆಗೆ ಅಡ್ಡಿ ಎಂದ ಸಿಬಿಐ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ನಿವಾಸಗಳ ಮೇಲಿನ ಪ್ರಕರಣದಲ್ಲಿ ವಿಚಾರಣೆ ನಡೆಸಲು ನೀಡಿರುವ ನೋಟಿಸ್‌ಗೆ ತಡೆ ನೀಡಿದರೆ ತನಿಖೆಗೆ ಹಿನ್ನೆಡೆಯಾಗಲಿದೆ ಎಂದು ಹೈಕೋರ್ಟ್‌ಗೆ ಶುಕ್ರವಾರ ಹೇಳಿದೆ. ಸರಕಾರದ ಆದೇಶ ರದ್ದು ಕೋರಿ ಸಲ್ಲಿಸಿರುವ ತಕರಾರು ಅರ್ಜಿಯ ಜೊತೆಗೆ ಸಿಬಿಐ ಅನ್ನು ಪ್ರತಿವಾದಿ ಮಾಡುವಂತೆ ಕೋರಿ ಸಲ್ಲಿಸಿರುವ ಮಧ್ಯಂತರ ಅರ್ಜಿ ನ್ಯಾ. ಜಿ.ನರೇಂದರ್‌ ಅವರಿದ್ದ ಏಕಸದಸ್ಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತು. ಅರ್ಜಿದಾರ ಪರ ವಾದಿಸಿದ ಹಿರಿಯ ವಕೀಲ ಉದಯ ಹೊಳ್ಳ, ಪ್ರಕರಣ ಸಂಬಂಧ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸಿಬಿಐಗೆ ಸೂಚಿಸಿ ಹೈಕೋರ್ಟ್‌ ಮಧ್ಯಂತರ ಆದೇಶ ಹೊರಡಿಸಿದೆ. ಆದರೂ ಸಿಬಿಐ ನೋಟಿಸ್‌ ಜಾರಿ ಮಾಡಿ ವಿಚಾರಣೆಗೆ ಹಾಜರಾಗಲು ಸೂಚಿಸಿದೆ. ಆದ್ದರಿಂದ ಅರ್ಜಿದಾರರ ವಿರುದ್ಧ ನೋಟಿಸ್‌ ಜಾರಿಗೊಳಿಸದಂತೆ ಸಿಬಿಐಗೆ ನಿರ್ದೇಶಿಸಬೇಕು ಎಂದು ಕೋರಿದರು.

ಅದಕ್ಕೆ ಆಕ್ಷೇಪ ಎತ್ತಿದ ಸಿಬಿಐ ಪರ ವಕೀಲ ಪಿ.ಪ್ರಸನ್ನ ಕುಮಾರ್‌, ಮೂಲ ಅರ್ಜಿಯಲ್ಲಿ ಸಿಬಿಐ ಅನ್ನು ಪ್ರತಿವಾದಿ ಮಾಡಿರಲಿಲ್ಲ. ಈಗ ಪ್ರತಿವಾದಿ ಮಾಡಲಾಗಿದೆ. ಅದನ್ನು ನ್ಯಾಯಾಲಯ ಇನ್ನೂ ವಿಚಾರಣೆಗೆ ಪರಿಗಣಿಸಬೇಕಿದೆ. ಆ ಅರ್ಜಿ ಸಂಬಂಧ ಯಾವುದೇ ಆದೇಶ ಹೊರಡಿಸುವ ಮುನ್ನ ಸಿಬಿಐ ಅನ್ನು ಪ್ರತಿವಾದಿ ಮಾಡಬೇಕು ಹಾಗೂ ಅದರ ವಾದ ಆಲಿಸಿದ ನಂತರವೇ ಆದೇಶ ಹೊರಡಿಸಬೇಕಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು.


from India & World News in Kannada | VK Polls https://ift.tt/2UKYAQh

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...