ಎತ್ತು ಏರಿಗೆ, ಕೋಣ ನೀರಿಗೆ, ಕಾಂಗ್ರೆಸ್‌ ಬೀದಿಗೆ! ಡಿಕೆಶಿ v/s ಸಿದ್ದು ಶೀತಲ ಸಮರಕ್ಕೆ ಬಿಜೆಪಿ ಲೇವಡಿ

ಬೆಂಗಳೂರು: ಎತ್ತು ಏರಿಗೆ, ಕೋಣ ನೀರಿಗೆ, ಕಾಂಗ್ರೆಸ್‌ ಬೀದಿಗೆ! ಹೀಗಂತ ಕಾಂಗ್ರೆಸ್ ಪಕ್ಷವನ್ನು ಕರ್ನಾಟಕ ಬಿಜೆಪಿ ಲೇವಡಿ ಮಾಡಿದೆ. ವಲಸಿಗರು ಮತ್ತೆ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನಡುವಿನ ಶೀತಲ ಸಮರಕ್ಕೆ ಬಿಜೆಪಿ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯೆ ನೀಡಿದೆ. ಪ್ರಳಯ ಆದರೂ ಪಕ್ಷ ಬಿಟ್ಟು ಹೋದವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಒಂದು ಕಡೆ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ನಾನು ಅಧ್ಯಕ್ಷನಾಗಿ ಹೇಳುತ್ತಿದ್ದೇನೆ, ಪಕ್ಷ ಸೇರುವವರು ಅರ್ಜಿ ಸಲ್ಲಿಸಿ ಎಂದು ಡಿ.ಕೆ. ಶಿವಕುಮಾರ್ ಹೇಳುತ್ತಿದ್ದಾರೆ. ಇದನ್ನು ಗಮನಿಸಿದರೆ ಎತ್ತು ಏರಿಗೆ, ಕೋಣ ನೀರಿಗೆ, ಕಾಂಗ್ರೆಸ್‌ ಬೀದಿಗೆ! ಎಂಬ ಪರಿಸ್ಥಿತಿ ಕಾಂಗ್ರೆಸ್‌ನಲ್ಲಿದೆ ಎಂದು ಬಿಜೆಪಿ ಟ್ವಿಟ್ಟರ್‌ನಲ್ಲಿ ವ್ಯಂಗ್ಯವಾಗಿ ಅಭಿಪ್ರಾಯ ವ್ಯಕ್ತಪಡಿಸಿದೆ. ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡ ವಲಸಿಗರು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಾರೆ ಎಂಬ ಚರ್ಚೆ ಕಾಂಗ್ರೆಸ್‌ನಲ್ಲಿ ಹುಟ್ಟಿಕೊಂಡಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಡಿಕೆಶಿ ನಾನು ಅಧ್ಯಕ್ಷನಾಗಿ ಹೇಳುತ್ತಿದ್ದೇನೆ, ಪಕ್ಷ ಸೇರುವವರು ಅರ್ಜಿ ಸಲ್ಲಿಸಿ ಎಂದಿದ್ದರು. ಆದರೆ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಪ್ರಳಯ ಆದರೂ ವಲಸಿಗರನ್ನು ಕಾಂಗ್ರೆಸ್‌ಗೆ ಸೇರ್ಪಡೆಗೊಳಿಸಲ್ಲ ಎಂದು ಸದನದಲ್ಲಿ ಹೇಳಿದ್ದೆ ಎಂದಿದ್ದಾರೆ. ಆದರೆ ವಲಸಿಗರು ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಸೇರ್ಪಡೆ ಆಗುತ್ತಾರಾ ಇಲ್ಲವೋ ಎಂಬುವುದರ ಬಗ್ಗೆ ಅವರು ಯಾರೂ ಹೇಳಿಕೆಗಳನ್ನು ನೀಡಿಲ್ಲ. ವಲಸಿಗರ ಈ ನಡೆ ಕುತೂಹಲಕ್ಕೆ ಕಾರಣವಾಗಿದೆ.


from India & World News in Kannada | VK Polls https://ift.tt/3dJBXlF

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...