ಅತ್ಯಾಚಾರ ಸಂತ್ರಸ್ತ ಬಾಲಕಿಯ ಪೋಷಕರ ಜತೆ ಚಿತ್ರ: ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಮಕ್ಕಳ ಹಕ್ಕುಗಳ ಆಯೋಗ ಸೂಚನೆ

ಹೊಸದಿಲ್ಲಿ: ಕಾಂಗ್ರೆಸ್ ನಾಯಕ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ದಿಲ್ಲಿ ಪೊಲೀಸರು ಮತ್ತು ಟ್ವಿಟ್ಟರ್‌ಗೆ ಆಗ್ರಹಿಸಿದೆ. ನೈಋತ್ಯ ದಿಲ್ಲಿಯಲ್ಲಿ ಭಾನುವಾರ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿದ್ದಲ್ಲದೆ, ಬಲವಂತವಾಗಿ ಅಂತ್ಯಸಂಸ್ಕಾರ ನಡೆಸಲಾದ 9 ವರ್ಷದ ದಲಿತ ಬಾಲಕಿಯ ಪೋಷಕರ ಜತೆಗಿನ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಕಾರಣಕ್ಕಾಗಿ ಈ ಸೂಚನೆ ನೀಡಲಾಗಿದೆ. ಅಥವಾ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯ ಪೋಷಕರ ಜತೆಗಿನ ಚಿತ್ರ ಹಂಚಿಕೊಳ್ಳುವುದು, ಸಂತ್ರಸ್ತ ಬಾಲಕಿಯ ಗುರುತನ್ನು ಬಹಿರಂಗಪಡಿಸುವಂತೆ ಮಾಡುತ್ತದೆ. ಹೀಗಾಗಿ ಇದು ಪೋಕ್ಸೋ ಕಾಯ್ದೆ ಮತ್ತು ಬಾಲಾಪರಾಧಿಗಳ ನ್ಯಾಯ ಕಾಯ್ದೆಗಳ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಹೇಳಿದೆ. ದಿಲ್ಲಿ ಪೊಲೀಸರು ಮತ್ತು ಟ್ವಿಟ್ಟರ್‌ನಿಂದ ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ವರದಿ ಕೇಳಿರುವ ಆಯೋಗ, ಮೂರು ದಿನಗಳ ಒಳಗೆ ತನಗೆ ವರದಿ ಸಲ್ಲಿಸುವಂತೆ ಸೂಚಿಸಿದೆ. ಟ್ವಿಟ್ಟರ್‌ನ ದೂರು ಸ್ವೀಕಾರ ಅಧಿಕಾರಿಗೆ ಪತ್ರ ಬರೆದಿರುವ ಆಯೋಗ, ರಾಹುಲ್ ಗಾಂಧಿ ಅವರ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಸಂತ್ರಸ್ತೆಯ ಕುಟುಂಬದ ಚಿತ್ರವನ್ನು ಹಂಚಿಕೊಂಡಿದ್ದು, ಅವರು ಬಾಲಕಿಯ ತಂದೆ ಮತ್ತು ತಾಯಿ ಎಂದು ಬರೆದುಕೊಂಡಿದ್ದರು. ಈ ಚಿತ್ರದಲ್ಲಿ ಸಂತ್ರಸ್ತೆಯ ಪೋಷಕರ ಮುಖ ಸ್ಪಷ್ಟವಾಗಿ ಕಾಣುವಂತಿದೆ. ಇದು ಬಾಲಕಿಯ ಗುರುತನ್ನು ಬಹಿರಂಗಪಡಿಸುತ್ತದೆ ಎಂದು ಅದು ಹೇಳಿದೆ.


from India & World News in Kannada | VK Polls https://ift.tt/3Ad5vRC

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...