ತುಮಕೂರು: ದನ ಮೇಯಿಸಲು ಹೋಗಿದ್ದ ಮಹಿಳೆ ಶವವಾಗಿ ಪತ್ತೆ; ಕತ್ತಿನಲ್ಲಿದ್ದ ಮಾಂಗಲ್ಯ ಸರ ನಾಪತ್ತೆ!

ತುಮಕೂರು: ದನ ಮೇಯಿಸಲು ಹೋಗಿದ್ದ ಮಹಿಳೆಯೊಬ್ಬಳು ಶವವಾಗಿ ಪತ್ತೆಯಾಗಿದುವ ಘಟನೆ ಗ್ರಾಮಾಂತದ ಹಿರೇಹಳ್ಳಿ ಸಮೀಪ ನಡೆದಿದೆ. ಗ್ರಾಮಾಂತರದ ಹಿರೇಹಳ್ಳಿ ಸಮೀಪದ ಛೋಟಾಸಾಬರ ಪಾಳ್ಯದಲ್ಲಿ ಈ ಘಟನೆ ಸಂಭವಿಸಿದ್ದು, ಜಯಲಕ್ಷ್ಮಿ (35) ಮೃತ . ಮಂಗಳವಾರ ಬೆಳಗ್ಗೆ ದನ ಮೇಯಿಸಲು ಸಮೀಪದ ಬೆಟ್ಟಕ್ಕೆ ತೆರಳಿದ್ದ ಮಹಿಳೆ ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಪತಿ ಶಿವಕುಮಾರ್, ಹುಡುಕಿಕೊಂಡು ಹೊರಟಾಗ ಬೆಟ್ಟದ ಬಳಿ ಪತ್ನಿ ಜಯಲಕ್ಷ್ಮಿಯ ಶವ ಪತ್ತೆಯಾಗಿದೆ. ಜೊತೆಗೆ ಮಹಿಳೆಯ ಕತ್ತಿನಲ್ಲಿದ್ದ ಮಾಂಗಲ್ಯ ಸರ ನಾಪತ್ತೆಯಾಗಿದೆ. ಕೊಲೆ ಶಂಕೆ ಮಹಿಳೆಯ ಶವ ಪತ್ತೆಯಾಗಿರುವ ರೀತಿಯಿಂದ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಕಳೆದ ರಾತ್ರಿ ಶವವನ್ನು ಸ್ಥಳದಲ್ಲೇ ಬಿಟ್ಟಿದ್ದ ಪೊಲೀಸರು, ಇಂದು ಬೆಳಗ್ಗೆ ವಿಧಿ ವಿಜ್ಞಾನ ಪ್ರಯೋಗಾಲಯದ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


from India & World News in Kannada | VK Polls https://ift.tt/3B9gnjJ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...