ಹಾಸನ: ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಅವರು ಇಂದು ಜಿಲ್ಲೆಯ ಶಾಂತಿಗ್ರಾಮ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಕೋವಿಡ್ ಸುರಕ್ಷತಾ ಕ್ರಮಗಳು ಮತ್ತು ಬೋಧನಾ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಅವರು ಧೈರ್ಯವಾಗಿ ಕಾಲೇಜಿಗೆ ಆಗಮಿಸಿ ಕಲಿಕೆ ಬಗ್ಗೆ ಗಮನ ಹರಿಸಿ, ಜಿಲ್ಲಾಡಳಿತ ಹಾಗೂ ಸರ್ಕಾರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆ ಬಗ್ಗೆ ಕಾಳಜಿ ವಹಿಸಲಿದೆ ಎಂದರು. ಜ್ವರ ಅಥವಾ ಆರೋಗ್ಯ ಸಮಸ್ಯೆ ಕಂಡು ಬಂದಲ್ಲಿ ತಕ್ಷಣ ಉಪನ್ಯಾಸಕರ ಗಮನಕ್ಕೆ ತರುವಂತೆ ಅವರು ಹೇಳಿದರು. ಕಾಲೇಜಿನಲ್ಲಿ ಪ್ರತಿ ದಿನ ಎಲ್ಲಾ ವಿದ್ಯಾರ್ಥಿಗಳಿಗೆ ಕೊವಿಡ್ ಸ್ಕ್ರೀನಿಂಗ್ ಮಾಡಿ, ಸೋಂಕು ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ತಿಳುವಳಿಕೆ ನೀಡಿ, ಅನಾರೋಗ್ಯ ಲಕ್ಷಣ ಕಂಡು ಬಂದರೆ ತಕ್ಷಣ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಎಂದು ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ಸೂಚನೆ ನೀಡಿದರು. ಶಾಸಕರಾದ ಸಿ.ಎನ್. ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಎಂ.ಎ. ಗೋಪಾಲ ಸ್ವಾಮಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಾರ್ವಜ ನಿಕ ಶಿಕ್ಷಣ ಇಲಾಖೆ ಅಧಿಕಾರಿ ಗಳು ಹಾಜರಿದ್ದರು.
from India & World News in Kannada | VK Polls https://ift.tt/3DbEGzx