ಹಿಂದೂ ದೇವರುಗಳಿಗೆ ಅಪಮಾನ; ಸಚಿವ ಮುರುಗೇಶ ನಿರಾಣಿ ವಿರುದ್ಧ ತನಿಖೆಗೆ ಆದೇಶಿಸಿದ ಕೋರ್ಟ್‌

ಬೆಂಗಳೂರು: ಹಿಂದೂ ದೇವತೆಗಳ ವಿರುದ್ಧ ಆಕ್ಷೇಪಾರ್ಹ ಸಂದೇಶ ಕಳುಹಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ವಿರುದ್ಧ ನಗರದ ತನಿಖೆಗೆ ಆದೇಶಿಸಿದೆ. ಗೋವಿಂದರಾಮ್‌ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರು ಆಧರಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಈ ಆದೇಶ ನೀಡಿದೆ. ಅರ್ಜಿದಾರರ ವಾದ ಆಲಿಸಿದ ಬಳಿಕ ನ್ಯಾಯಾಲಯ, ನಗರದ ಕೊಡಿಗೇಹಳ್ಳಿ ಪೊಲೀಸರಿಗೆ ಸೆ.13 ರೊಳಗೆ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ನೀಡಿದೆ. ಕಳೆದ ವರ್ಷ ವಾಟ್ಸಪ್‌ ಗ್ರೂಪ್‌ನಲ್ಲಿ ಮುರುಗೇಶ್‌ ನಿರಾಣಿ ಹಿಂದೂ ದೇವತೆಗಳ ವಿರುದ್ಧ ಆಕ್ಷೇಪಾರ್ಹ ಸಂದೇಶ ಕಳುಹಿಸಿದ್ದರು. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಾಲಯವನ್ನು ಕೋರಿದ್ದರು ತನ್ನ ವಿರುದ್ಧ ನ್ಯಾಯಾಲಯ ತನಿಖೆಗೆ ಆದೇಶಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಮುರುಗೇಶ್ ನಿರಾಣಿ, ಹಿಂದೂ ದೇವತೆಗಳಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪದ ಕುರಿತಾಗಿ ನನ್ನ ವಿರುದ್ಧ ತನಿಖೆಗೆ ನ್ಯಾಯಾಲಯ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಪೊಲೀಸ್‌ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ದೇಶದ ಕಾನೂನಿಗಿಂತ ಯಾರೂ ದೊಡ್ಡವರಿಲ್ಲ. ಜವಾಬ್ದಾರಿಯುತ ಪ್ರಜೆಯಾಗಿ ನ್ಯಾಯಾಲಯ ನೀಡಿರುವ ಆದೇಶಕ್ಕೆ ಬದ್ಧನಾಗಿದ್ದೇನೆ. ಹಿಂದೂ ಧರ್ಮ, ಆಚಾರ- ವಿಚಾರ, ಸಂಪ್ರದಾಯ ಹಾಗೂ ದೇವತೆಗಳ ಬಗ್ಗೆ ಅಪಾರ ಗೌರವ ಇಟ್ಟುಕೊಂಡಿದ್ದೇನೆ. ಯಾವುದೇ ಸಂದರ್ಭದಲ್ಲೂ ಹಿಂದೂ ಧರ್ಮಕ್ಕಾಗಲಿ, ದೇವತೆಗಳ ಬಗ್ಗೆಯಾಗಲಿ ಅಪಮಾನ ಮಾಡುವ ಕೆಲಸ ಮಾಡಿಲ್ಲ ಎಂದು ಹೇಳಿದ್ದಾರೆ. ವಾಟ್ಸ್‌ಆ್ಯಪ್‌ ಗ್ರೂಪ್‌ಗೆ ಕಣ್ತಪ್ಪಿನಿಂದ ಯಾರೋ ಕಳುಹಿಸಿದ ಸಂದೇಶವನ್ನು ಫಾರ್ವರ್ಡ್‌ ಮಾಡಿದ್ದಾರೆ. ಈ ಅಚಾತುರ್ಯ ಗಮಕ್ಕೆ ಬಂದ ತಕ್ಷಣ ಸಂದೇಶವನ್ನು ಡಿಲೀಟ್‌ ಮಾಡಲಾಗಿತ್ತು. ತಕ್ಷಣ ನಾನು ರಾಜ್ಯದ ಜನತೆಯ ಕ್ಷಮೆ ಕೇಳಿದ್ದೇನೆ. ನಮ್ಮ ಕುಟುಂಬ ತಲೆತಲಾಂತರದಿಂದಲೂ ಆಚಾರ- ವಿಚಾರ, ಸಂಪ್ರದಾಯ ನಂಬಿಕೊಂಡು ಬಂದಿದೆ. ಎಂದಿಗೂ ಯಾವುದೇ ಧರ್ಮವಾಗಲಿ, ಅಲ್ಲಿನ ನಂಬಿಕೆಗಳನ್ನು ಅಪಮಾನಿಸುವ ಕೆಲಸ ಮಾಡಿಲ್ಲ ಎಂದು ತಿಳಿಸಿದ್ದಾರೆ.


from India & World News in Kannada | VK Polls https://ift.tt/3mb6Y77

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...