ಖಾತೆ ಕ್ಯಾತೆ: ದೆಹಲಿಗೆ ಭೇಟಿ ನೀಡಲಿದ್ದಾರೆ ಬಸವರಾಜ ಬೊಮ್ಮಾಯಿ

ಬೆಂಗಳೂರು: ಖಾತೆ ಕ್ಯಾತೆ ಹಾಗೂ ಖಾಲಿ ಇರುವ ಸಚಿವ ಸ್ಥಾನಗಳಿಗೆ ನಡೆಯುತ್ತಿರುವ ಪೈಪೋಟಿ ಹಿನ್ನೆಲೆಯಲ್ಲಿ ಸಿಎಂ ಅವರು ದೆಹಲಿಗೆ ತೆರಳಲಿದ್ದಾರೆ. ದೆಹಲಿಗೆ ತೆರಳುವ ದಿನಾಂಕ‌ ಅಧಿಕೃತವಾಗಿ ನಿರ್ಧಾರ ಆಗದೇ ಇದ್ದರೂ ರಾಷ್ಟ್ರ ರಾಜಧಾನಿಗೆ ತೆರಳುವ ವಿಚಾರವನ್ನು ಸ್ವತಃ ಸಿಎಂ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸಚಿವರುಗಳ ಭೇಟಿಗೆ ಸಮಯಾವಕಾಶ ತೋರಿದ್ದೇನೆ. ಸಮಯ ನಿಗದಿಯಾದ ಬೆನ್ನಲ್ಲೇ ದೆಹಲಿಗೆ ತೆರಳಲಿದ್ದೇನೆ ಎಂದು ತಿಳಿಸಿದರು. ಖಾತೆ ವಿಚಾರವಾಗಿ ಸಚಿವ ಆನಂದ್ ಸಿಂಗ್ ಕ್ಯಾತೆ ಮುಂದುವರಿದಿದೆ. ಸದ್ಯ ಆನಂದ್ ಸಿಂಗ್ ದೆಹಲಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಖಾತೆ ನೀಡಿದರೂ ಈವರೆಗೂ ಅಧಿಕಾರ ಸ್ವೀಕಾರವನ್ನು ಆನಂದ್ ಸಿಂಗ್ ಮಾಡಿಲ್ಲ. ಜೊತೆಗೆ ಗುರುವಾರ ನಡೆದ ಕ್ಯಾಬಿನೆಟ್ ಸಭೆಗೂ ಹಾಜರಾಗಿಲ್ಲ. ಈ ನಿಟ್ಟಿನಲ್ಲಿ ಸಿಎಂ ದೆಹಲಿಗೆ ತೆರಳಿ ವರಿಷ್ಠರ ಜೊತೆಗೆ ಮಾತುಕತೆ ನಡೆಸುತ್ತಾರಾ ಎಂಬುವುದು ಕೂಡಾ ಕುತೂಹಲಕ್ಕೆ ಕಾರಣವಾಗಿದೆ. ಮೇಕೆದಾಟು ವಿಚಾರವಾಗಿಯೂ ಚರ್ಚೆ ಇನ್ನು ಮೇಕೆದಾಟು ಯೋಜನೆ ಜಾರಿಗೊಳಿಸಿಯೇ ಸಿದ್ಧ ಎಂದು ಈಗಾಗಲೇ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.ಆದರೆ ಈ ಬಗ್ಗೆ ತಮಿಳುನಾಡು ಕ್ಯಾತೆ ತೆಗೆದಿದೆ. ತಮಿಳುನಾಡಿನ ರಾಜ್ಯಾಧ್ಯಕ್ಷ ಅಣ್ಣಾಮಲೈ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸುವ ಸಾಧ್ಯತೆಯೂ ಇದೆ.


from India & World News in Kannada | VK Polls https://ift.tt/3z7NaFs

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...