ಆಸೀಸ್‌ ವಿರುದ್ಧ ರಾಣಿ ಪಡೆಗೆ ಜಯ: ಸೆಮಿಫೈನಲ್‌ ಪ್ರವೇಶಿಸಿ ಇತಿಹಾಸ ಬರೆದ ಭಾರತ!

ಟೋಕಿಯೋ (ಜಪಾನ್‌): ಗುರ್ಜೀತ್‌ ಕೌರ್‌ ಅವರ ಏಕೈಕ ಗೋಲಿನ ನೆರವಿನಿಂದ ಟೋಕಿಯೋ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಸೆಮಿಫೈನಲ್‌ ಪ್ರವೇಶಿಸಿದೆ. ಆ ಮೂಲಕ ಒಲಿಂಪಿಕ್ಸ್‌ ಇತಿಹಾಸದಲ್ಲಿಯೇ ವನಿತೆಯರು ಮೊಟ್ಟ ಮೊದಲ ಬಾರಿ ಮಹತ್ವದ ಕ್ರೀಡಾಕೂಟದಲ್ಲಿ ಅಂತಿಮ ನಾಲ್ಕರ ಘಟ್ಟಕ್ಕೆ ಪ್ರವೇಶ ಮಾಡಿದಂತಾಯಿತು. ಕ್ರೀಡಾಕೂಟದ ಆರಂಭದಲ್ಲಿ ಹ್ಯಾಟ್ರಿಕ್‌ ಸೋಲು ಅನುಭವಿಸಿದ್ದ ರಾಣಿ ರಾಂಪಾಲ್‌ ನಾಯಕತ್ವದ ಭಾರತ ಹಾಕಿ ತಂಡ, ಗುಂಪು ಹಂತದ ಕೊನೆಯ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಕ್ವಾರ್ಟರ್‌ ಫೈನಲ್‌ಗೆ ಅರ್ಹತ ಪಡೆದಿತ್ತು. ಅದರಂತೆ ಇಂದು(ಸೋಮವಾರ) ನಡೆದಿದ್ದ ಅಂತಿಮ 8ರ ಘಟ್ಟದ ಪಂದ್ಯದಲ್ಲಿ ಅವರ ಏಕೈಕ ಗೋಲಿನ ನೆರವಿನಿಂದ ಭಾರತ 1-0 ಅಂತರದಲ್ಲಿ ವಿಶ್ವದ ಎರಡನೇ ಶ್ರೇಯಾಂಕದ ಆಸ್ಟ್ರೇಲಿಯಾವನ್ನು ಸೋಲಿಸಿದೆ. ಆ ಮೂಲಕ ಭಾರತಕ್ಕೆ ಪದಕದ ಭರವಸೆ ಮೂಡಿಸಿದೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2VqdkUC

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...