ಸೋಮವಾರ ಹೈಕೋರ್ಟ್‌ ಸಿಜೆ ಜೊತೆ ಬಸವರಾಜ ಬೊಮ್ಮಾಯಿ ಸಭೆ; ನ್ಯಾಯಾಂಗ ಇಲಾಖೆಯ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ

ಬೆಂಗಳೂರು: ನ್ಯಾಯಾಂಗ ಇಲಾಖೆಯ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸುವ ನಿಟ್ಟಿನಲ್ಲಿ ಪ್ರಮುಖ ಇಲಾಖೆಗಳ ಮುಖ್ಯಸ್ಥರ ಜೊತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕಾ ಅವರು ಸೋಮವಾರ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಸಿಎಂ ಕೂಡಾ ಉಪಸ್ಥಿತರಿರಲಿದ್ದಾರೆ. ನಗರದ ಕುಮಾರ ಕೃಪಾ ಅಥಿತಿ ಗೃಹದಲ್ಲಿ ಸೋಮವಾರ ಸಂಜೆ 5. 30 ಕ್ಕೆ ಸಭೆ ನಡೆಯಲಿದೆ. ಸಭೆಯಲ್ಲಿ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಜೆ.ಸಿ ಮಾಧುಸ್ವಾಮಿ ಕೂಡಾ ಭಾಗವಹಿಸಲಿದ್ದಾರೆ. ಅಲ್ಲದೆ ಅಡ್ವಕೇಟ್ ಜನರಲ್ ಕೂಡಾ ಉಪಸ್ಥಿತರಿರಲಿದ್ದಾರೆ. ಈ ಸಭೆಯಲ್ಲಿ ನ್ಯಾಯಾಂಗ ವ್ಯವಸ್ಥೆಗೆ ಸಂಬಂಧಿಸಿದ ಪ್ರಮುಖ ವಿಚಾರಗಳ ಕುರಿತಾಗಿ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ. ಈ ಸಭೆಗೂ ಮುನ್ನ ಪೂರ್ವಭಾವಿಯಾಗಿ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಲಿದ್ದಾರೆ. ಇನ್ನು ಹೈಕೋರ್ಟ್‌ ಸಿಜೆ ಜೊತೆಗಿನ ಈ ಮಹತ್ವದ ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಆರ್ಥಿಕ ಒಳಾಡಳಿತ, ನಗರಾಭಿವೃದ್ದಿ, ಜಲಸಂಪನ್ಮೂಲ, ಉನ್ನತ ಶಿಕ್ಷಣ ಇಲಾಖೆಗಳ ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.


from India & World News in Kannada | VK Polls https://ift.tt/3kj9fdI

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...