ಎಲ್ಲಾ ಶಾಲೆಗಳಲ್ಲಿ ಕನ್ನಡ ಭಾಷಾ ಕಲಿಕೆ ಕಡ್ಡಾಯ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ 4ನೇ ತರಗತಿ ಬಾಲಕ!

ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲೂ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಲಿಸುವುದನ್ನು ಕಡ್ಡಾಯಗೊಳಿಸಿರುವ ಕಲಿಕಾ ಕಾಯಿದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್‌ ರಾಜ್ಯ ಸರಕಾರಕ್ಕೆ ನೋಟಿಸ್‌ ಜಾರಿಗೊಳಿಸಿದೆ. ನಗರದ ಐಸಿಎಸ್‌ಸಿ ಶಾಲೆಯೊಂದರ ನಾಲ್ಕನೇ ತರಗತಿ ವಿದ್ಯಾರ್ಥಿ ಕೀರ್ತನ್‌ ಸುರೇಶ್‌ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್‌. ದೇವದಾಸ್‌ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ಮಾಡಿ, ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಿದೆ. ಅರ್ಜಿದಾರರ ಪರ ವಕೀಲರು, ಕನ್ನಡ ಭಾಷಾ ಕಲಿಕಾ ಕಾಯಿದೆ- 2015 ರ ಪ್ರಕಾರ 2020- 21 ನೇ ಸಾಲಿನಿಂದ ಕರ್ನಾಟಕದ ಶಾಲೆಗಳಲ್ಲಿ 1 ರಿಂದ 10 ನೇ ತರಗತಿವರೆಗೆ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಮೊದಲ ಅಥವಾ ದ್ವಿತೀಯ ಭಾಷೆಯಾಗಿ ಕಲಿಯುವುದು ಕಡ್ಡಾಯಗೊಳಿಸಲಾಗಿದೆ. ಸಿಬಿಎಸ್‌ಇ ಮತ್ತು ಐಸಿಎಸ್‌ಇ ನೋಂದಾಯಿತ ಶಾಲೆಗಳಿಗೂ ಈ ನಿಯಮವನ್ನು ಅನ್ವಯಿಸಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು. ಕನ್ನಡ ಭಾಷಾ ಕಲಿಕಾ ಕಾಯಿದೆಯನ್ನು ಸಿಬಿಎಸ್‌ಇ / ಐಸಿಎಸ್‌ಇ ನೋಂದಾಯಿತ ಸಂಸ್ಥೆಗಳನ್ನು ಅನ್ವಯಿಸಲು ಸರಕಾರಕ್ಕೆ ಅಧಿಕಾರ ಇಲ್ಲ. ಪದೇ ಪದೆ ವರ್ಗವಾಗುವವರು ಮಕ್ಕಳನ್ನು ಸಾಮಾನ್ಯವಾಗಿ ಸಿಬಿಎಸ್‌ಇ ಅಥವಾ ಐಸಿಎಸ್‌ಇ ನೋಂದಾಯಿತ ಶಾಲೆಗೆ ಸೇರಿಸುತ್ತಾರೆ. ಒಂದು ವೇಳೆ ವರ್ಗಾವಣೆಯಾದರೂ ಬೇರೆ ಸ್ಥಳದಲ್ಲಿ ಅವರ ಕಲಿಕೆಗೆ ಯಾವುದೇ ತೊಂದರೆಯಾಗದು. ಸರಕಾರದ ಆದೇಶದಿಂದಾಗಿ 2 ನೇ ಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯವಾದರೆ ಬೇರೆ ರಾಜ್ಯಕ್ಕೆ ವರ್ಗವಾದರೆ ಅವರು ಅತಂತ್ರ ಸ್ಥಿತಿ ಎದುರಿಸುತ್ತಾರೆ ಎಂದು ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ. ಅಲ್ಲದೆ, ಕನ್ನಡ ಭಾಷೆ ಕಲಿಕಾ ಕಾಯಿದೆ- 2015, ಸಂವಿಧಾನದ ಪರಿಚ್ಛೇದ 14ರ ಜತೆಗೆ 19 (1) (ಜಿ), 21 ಮತ್ತು 301 ನ್ನು ಉಲ್ಲಂಘಿಸುತ್ತದೆ. ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿರುವ ರಾಷ್ಟ್ರೀಯ ಶಿಕ್ಷಣ ನೀತಿ- 2020 ರ ಗುರಿ ಮತ್ತು ಉದ್ದೇಶಗಳಿಗೆ ವಿರುದ್ಧವಾಗಿದೆ ಎಂದು ವಕೀಲರು ಹೇಳಿದರು. ಕೇಂದ್ರ ಸರ್ಕಾರ ಜಾರಿ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿ- 2020 ರ ಬಗ್ಗೆ ಕರ್ನಾಟಕದ ವಿರೋಧ ಪಕ್ಷಗಳು, ಸ್ಥಳೀಯ ಭಾಷಾ ಪರ ಸಂಘಟನೆಗಳು ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ವಿರೋಧ ವ್ಯಕ್ತವಾಗಿದೆ.


from India & World News in Kannada | VK Polls https://ift.tt/3ADWPnS

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...