ಕರಾವಳಿ ಸೇರಿದಂತೆ ಕೆಲ ಜಿಲ್ಲೆಗಳಿಗೆ ಸೆ. 5, 6ರಂದು ಯಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸೆಪ್ಟೆಂಬರ್‌ 5 ಮತ್ತು 6 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಗುರುವಾರ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಹಾಗೂ ಉತ್ತರ ಕರ್ನಾಟಕ ಜಿಲ್ಲೆಗಳಾದ ಬೀದರ್‌, ಕಲಬುರಗಿ ಮತ್ತು ವಿಜಯಪುರ ಹಾಗೂ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನ ಜಿಲ್ಲೆಗಳಿಗೆ ಸೆಪ್ಟೆಂಬರ್‌ 5ರಂದು ಯಲ್ಲೋ ಆಲರ್ಟ್‌ ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್‌ 6ರಂದು ಕರಾವಳಿ ಮತ್ತು ಮಲೆನಾಡಿನ ಎಲ್ಲ ಜಿಲ್ಲೆಗಳಿಗೆ ಹಾಗೂ ಬೀದರ್‌, ಬಾಗಲಕೋಟೆ, ಕಲಬುರಗಿ, ವಿಜಯಪುರ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳಿಗೆ ಯಲ್ಲೋ ಆಲರ್ಟ್‌ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನೆಯಲ್ಲಿ ಹೇಳಿದೆ. ಗುರುವಾರ ಕರಾವಳಿಯ ಎಲ್ಲಾ ಕಡೆ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಾತ್ರ ಮಳೆಯಾಗಿದೆ. ವಿಶೇಷವಾಗಿ ಉಡುಪಿ ಜಿಲ್ಲೆಯ ಕೋಟಾದಲ್ಲಿ 9 ಸೆಂ.ಮೀ, ಸಿದ್ದಾಪುರದಲ್ಲಿ 7 ಸೆಂ.ಮೀ, ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಭಟ್ಕಳ, ಗೋಕರ್ಣ, ಅಂಕೋಲಾದಲ್ಲಿ 5 ಸೆಂ.ಮೀ., ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 5 ಸೆಂ.ಮೀ. ಮತ್ತು ತಾಳಗುಪ್ಪದಲ್ಲಿ 4 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಗುರುವಾರ ಸಂಜೆಯಿಂದ ರಾತ್ರಿವರೆಗೆ ಧಾರಾಕಾರ ಮಳೆಯಾಗಿದೆ. ನಗರದ ಹಲವು ಭಾಗಗಳಲ್ಲಿ ಎಡೆಬಿಡದೆ ಸುರಿದಿದೆ. ಸೆಪ್ಟೆಂಬರ್‌ನಲ್ಲಿ ಹೆಚ್ಚಿನ ಮಳೆ ಹೊಸದಿಲ್ಲಿ: ದೇಶದ ಬಹುತೇಕ ಭಾಗಗಳಲ್ಲಿ ಸೆಪ್ಟೆಂಬರ್‌ನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. "ಜೂನ್‌ನಲ್ಲಿ ಮಳೆಯ ಪ್ರಮಾಣ ವಾಡಿಕೆಗಿಂತಲೂ ಶೇ. 7ರಷ್ಟು ಕಡಿಮೆಯಾಗಿತ್ತು. ಆಗಸ್ಟ್‌ನಲ್ಲಿ ಶೇ. 24ರಷ್ಟು ಕಡಿಮೆಯಾಗಿದೆ. ಹೀಗಾಗಿ ದೇಶದ ಒಟ್ಟಾರೆ ಮುಂಗಾರು ಮಳೆ ಪ್ರಮಾಣ ಶೇ. 9ರಷ್ಟು ಕುಂಠಿತವಾಗಿದೆ. ಆದರೆ ಸೆಪ್ಟೆಂಬರ್‌ನಲ್ಲಿ ಉತ್ತಮ ಮಳೆಯ ಕಾರಣದಿಂದಾಗಿ ಕೊರತೆ ಪ್ರಮಾಣ ನೀಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾ ನಿರ್ದೇಶಕರು ಬುಧವಾರ ತಿಳಿಸಿದ್ದಾರೆ. ಉತ್ತರ, ಈಶಾನ್ಯ ಮತ್ತು ದಕ್ಷಿಣ ಭಾರತದ ಕೆಲ ಭಾಗಗಳಲ್ಲಿ ವಾಡಿಕೆಯಷ್ಟು ಅಥವಾ ಅದಕ್ಕಿಂತಲೂ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.


from India & World News in Kannada | VK Polls https://ift.tt/2WG2FpD

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...