ಕುಪ್ಪೂರು ಗದ್ದುಗೆ ಮಠದ ಡಾ. ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

ತುಮಕೂರು: ಪಂಚಪೀಠಗಳಲ್ಲಿ ಒಂದಾದ ತಾಲೂಕು ಕುಪ್ಪೂರು ಗದ್ದುಗೆ ಪೀಠದ ಮಠಾಧ್ಯಕ್ಷ ಡಾ. ಶನಿವಾರ ಲಿಂಗೈಕ್ಯರಾಗಿದ್ದಾರೆ. ಶುಕ್ರವಾರ ರಾತ್ರಿ ಶ್ರೀಗಳ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯಾಘಾತಕ್ಕೆ ಒಳಗಾಗಿದ್ದ ಸ್ವಾಮೀಜಿ ಅವರನ್ನು ಬೆಂಗಳೂರಿಗೆ ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ನೆಲಮಂಗಲ ಬಳಿ ಶಿವೈಕ್ಯರಾಗಿದ್ದಾರೆ. ಸ್ವಾಮೀಜಿ ಅವರಲ್ಲಿ ಕೊರೊನಾ ವೈರಸ್ ಸೋಂಕು ಪಾಸಿಟಿವ್ ಇರುವುದು ಪತ್ತೆಯಾಗಿತ್ತು. ಅವರ ಆಮ್ಲಜನಕದ ಮಟ್ಟ ಕಡಿಮೆ ಆಗಿತ್ತು. ಅವರನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಬೆಳಿಗ್ಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರಿಳೆದಿದ್ದಾರೆ.‌ 47 ವರ್ಷದ ಡಾ. ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಮಧುಮೇಹ ಸಮಸ್ಯೆ ಕೂಡ ಇತ್ತು. 1974ರ ಜುಲೈ 29ರಂದು ವ್ಯೋಮಕೇಶಯ್ಯ ಮತ್ತು ದೇವಿರಮ್ಮ ದಂಪತಿಗೆ ಮಠದಲ್ಲಿಯೇ ಜನಿಸಿದ ಅವರು, ಐವರು ಮಕ್ಕಳಲ್ಲಿ ನಾಲ್ಕನೆಯವರು. ಪ್ರೌಢಶಿಕ್ಷಣ ಮುಗಿಸಿ ಪದವಿಪೂರ್ವ ಕಾಲೇಜಿಗೆ ಸೇರಿಕೊಳ್ಳುವ ಮುನ್ನವೇ ಮಠದ ಗದ್ದುಗೆಯೇರುವ ಸಂದರ್ಭ ಉಂಟಾಯಿತು. 16ನೇ ವಯಸ್ಸಿನಲ್ಲಿಯೇ ಮಠದ ಉತ್ತರಾಧಿಕಾರಿಯಾದರು. ಬೆಂಗಳೂರಿನ ಮುಡುಕುತೊರೆಯಲ್ಲಿ ಶ್ರೀ ಮಹಾಲಿಂಗ ಶಿವಾಚಾರ್ಯರ ಸಮ್ಮುಖದಲ್ಲಿ ವೇದ, ಸಂಸ್ಕೃತ, ಆಗಮ, ಜ್ಯೋತಿಷ್ಯ, ಮುಂತಾದ ವಿದ್ಯೆಗಳನ್ನು ಕಲಿತರು. 'ವೀರಶೈವ ಧಾರ್ಮಿಕ ಸಂಸ್ಕಾರಗಳು ಮತ್ತು ಸಾಮಾಜಿಕ ಸ್ವಾಸ್ಥ್ಯ' ಎಂಬ ಮಹಾಪ್ರಬಂಧಕ್ಕೆ ಶ್ರೀಲಂಕಾದ ಕೊಲಂಬೋ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದರು. ಅನೇಕ ಸಮಾಜಮುಖಿ ಚಟುವಟಿಕೆಗಳಿಂದ ಮನೆಮಾತಾಗಿದ್ದ ಸ್ವಾಮೀಜಿ, ನೀರಾವರಿ ಹೋರಾಟದಲ್ಲಿ ಮುಂದಾಳತ್ವ ವಹಿಸಿದ್ದರು.


from India & World News in Kannada | VK Polls https://ift.tt/2XZiecT

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...