ಡಿಸೆಂಬರ್ ವೇಳೆಗೆ ಬೆಳಗಾವಿಗೆ ಸರ್ಕಾರಿ ಕಚೇರಿಗಳ ಸ್ಥಳಾಂತರ; ಬಸವರಾಜ ಬೊಮ್ಮಾಯಿ

ಬೆಳಗಾವಿ: ಅಕ್ಟೋಬರ್ 3 ರಿಂದ ಸಕ್ಕರೆ ನಿರ್ದೇಶನಾಲಯ ಬೆಳಗಾವಿಯಲ್ಲಿ ಕಾರ್ಯಾರಂಭ ಮಾಡಲಿದೆ. ಡಿಸೆಂಬರ್ ನಲ್ಲಿ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಲಾಗುವುದು. ಆ ವೇಳೆಗೆ ಸಾಧ್ಯವಿರುವಷ್ಟು ಕಚೇರಿಗಳನ್ನು ಬೆಳಗಾವಿಗೆ ಸ್ಥಳಾಂತರ ಮಾಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. ಭಾನುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2019- 20 ನೇ ಸಾಲಿನಲಿ ಬೆಳಗಾವಿಯಲ್ಲಿ ಅತ್ಯಧಿಕ ಮಳೆಯಾಗಿ ಮನೆಗಳು ಹಾಗೂ ಬೆಳೆಗಳು ಹಾನಿಗೊಳಗಾಗಿವೆ. ಆ ಸಂದರ್ಭದಲ್ಲಿ ನಮ್ಮ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಹಲವು ಸೌಲಭ್ಯಗಳನ್ನು ಪ್ರಕಟಿಸಿದ್ದರು. ಒಟ್ಟು 44205 ಮನೆಗಳಿಗೆ ಪರಿಹಾರ ನೀಡುವ ಕಾರ್ಯ ಪ್ರಾರಂಭವಾಗಿದೆ. ಎ ಮತ್ತು ಬಿ ಕೆಟಗೆರಿ ಮನೆಗಳಿಗೆ 718 ಕೋಟಿ ರೂ. , ಬಿ ಕೆಟಗರಿಗೆ 9.64 ಸಿ ಕೆಟಗರಿಗೆ 132 ಕೋಟಿ ರೂ.ಗಳು ಸೇರಿದಂತೆ ಒಟ್ಟು 1864 ಕೋಟಿ ರೂ.ಗಳನ್ನು ನೀಡಲಾಗಿದ್ದು, ಬೆಳೆ ಹಾನಿಗೆ 263 ಕೋಟಿ ರೂ.ಗಳ ಪರಿಹಾರವನ್ನು 1.56 ಲಕ್ಷ ರೈತರಿಗೆ ಈಗಾಗಲೇ ನೀಡಿದೆ ಎಂದು ತಿಳಿಸಿದರು. ಪರಿಹಾರ ಪಾವತಿಗೆ ತೊಡಕಿರುವ ಅಂಶಗಳ ಬಗ್ಗೆ ಕಳೆದ ಬಾರಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಕಂದಾಯ ಇಲಾಖೆ ಕೋರಿರುವ ವಿವರಗಳನ್ನು ಒದಗಿಸಿ ಆರ್ಥಿಕ ಇಲಾಖೆಯೊಂದಿಗೆ ಚರ್ಚೆ ಮಾಡಿ ಪರಿಹಾರ ನೀಡಲಾಗುವುದು ಎಂದು ಅವರು ಹೇಳಿದರು. ಕಬ್ಬು ಬೆಳೆಗಾರರಿಗೆ ಬಾಕಿ ಹಣ ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಗೆ ಸಂಬಂಧಪಟ್ಟಂತೆ ಈಗಾಗಲೇ ಮಾತುಕತೆ ನಡೆದಿದೆ. ಬಾಕಿ ಹಣವನ್ನು ನೀಡದಿದ್ದರೆ ಕಾನೂನಾತ್ಮಕವಾಗಿ ಕ್ರಮ ಜರುಗಿಸಲಾಗುವುದು. ಈ ಮಧ್ಯೆ ಸಕ್ಕರೆ ಕಾರ್ಖಾನೆಗಳು, ಸಕ್ಕರೆ ನಿರ್ದೇಶನಾಲಯ ಹಾಗೂ ಅಪೆಕ್ಸ್ ಬ್ಯಾಂಕ್ ಅವರೊಟ್ಟಿಗೆ ಮಾತುಕತೆ ನಡೆಸಿ ಹಣ ಪಾವತಿಗೆ ಕ್ರಮವಹಿಸಲಾಗುವದು ಎಂದು ಹೇಳಿದರು. ಭಾರತ್ ಬಂದ್ ಬೇಡ ಭಾರತ್ ಬಂದ್ ನಡೆಸುವುದು ಸೂಕ್ತವಲ್ಲ. ಕೋವಿಡ್ ನಿಂದ ಈಗ ತಾನೇ ಚೇತರಿಸಿಕೊಳ್ಳುತ್ತಿರುವ ಹೊತ್ತಿನಲ್ಲಿ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಆರ್ಥಿಕ ಚಟುವಟಿಕೆಗಳಿಗೆ ಅನುವು ಮಾಡಿಕೊಡಬೇಕು. ಹೀಗಾಗಿ ಭಾರತ್ ಬಂದ್ ಬೇಡ ಎಂಬ ಸಲಹೆ ನೀಡಿದರು. ರಾಜ್ಯದಲ್ಲಿ ವೈರಲ್ ಜ್ವರದ ಬಗ್ಗೆ ಸಂಪೂರ್ಣ ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು. ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ, ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲು ಸೂಚಿಸಲಾಗಿದೆ ಎಂದರು.


from India & World News in Kannada | VK Polls https://ift.tt/3EQ6jih

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...