ಗಣೇಶೋತ್ಸವ: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರದ ಸಭೆಯಲ್ಲಿ ಸಿಗುತ್ತಾ ಅನುಮತಿ?

ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವ ವಿಚಾರವಾಗಿ ಭಾನುವಾರ ಒಂದು ಗಂಟೆಗೆ ಸಿಎಂ ನೇತೃತ್ವದಲ್ಲಿ ತಜ್ಞರ ಜೊತೆಗೆ ಸಭೆ ನಡೆಯಲಿದೆ. ಸಭೆಯಲ್ಲಿ ಈ ವಿಚಾರವಾಗಿ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕೋವಿಡ್ ಸೋಂಕು ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಕೆಲವು ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ಈ ನಡುವೆ ಮೂರನೇ ಅಲೆಯ ಮನ್ಸೂಚನೆಯನ್ನು ತಜ್ಞರು ನೀಡಿದ್ದಾರೆ. ಈ ಕಾರಣಕ್ಕಾಗಿ ಗಣೇಶೋತ್ಸವಕ್ಕೆ ಯಾವ ರೀತಿಯಲ್ಲಿ ಅನುಮತಿ ನೀಡಬೇಕು ಎಂಬ ಕುರಿತಾಗಿ ಚರ್ಚೆ ನಡೆಯಲಿದೆ. ಕೋವಿಡ್ ಕಾರಣಕ್ಕಾಗಿ ಗಣೇಶೋತ್ಸವಕ್ಕೆ ಅನುಮತಿ ನಿರಾಕರಣೆ ಮಾಡಬಾರದು ಎಂದು ಹಿಂದೂಪರ ಸಂಘಟನೆಗಳು ಹಾಗೂ ಕೆಲವು ಶಾಸಕರೂ ಆಗ್ರಹಿಸಿದ್ದಾರೆ. ಹಲವು ಸಾರ್ವಜನಿಕ ಕಾರ್ಯಕ್ರಮಗಳು ನಡೆಯುತ್ತಿವೆ, ಪಕ್ಷದ ಕಾರ್ಯಕ್ರಮಗಳು ನಡೆಯುತ್ತಿವೆ. ಹೀಗಿದ್ದರೂ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನಿರಾಕರಣೆ ಮಾಡುವುದು ಸರಿಯಲ್ಲ ಎಂಬುವುದು ಇವರ ವಾದವಾಗಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಂಸದ ಪ್ರತಾಪ ಸಿಂಹ ಕೂಡಾ ಇದಕ್ಕೆ ಧ್ವನಿಗೂಡಿಸಿದ್ದಾರೆ. ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹವನ್ನು ಮಾಡಿದ್ದಾರೆ. ಈ ಕಾರಣದಿಂದ ಭಾನುವಾರದ ಸಭೆ ಮಹತ್ವ ಪಡೆಯಲಿದೆ. ಷರತ್ತುಬದ್ಧ ಅನುಮತಿ ಸಾಧ್ಯತೆ ಕೋವಿಡ್ ಕಾರಣದಿಂದಾಗಿ ಗಣೇಶೋತ್ಸವಕ್ಕೆ ಕೆಲವೊಂದು ಷರತ್ತುಬದ್ಧ ಅನುಮತಿ ನೀಡುವ ಸಾಧ್ಯತೆ ಇದೆ. ವಿಗ್ರಹ ಪ್ರತಿಷ್ಠಾಪನೆ ಹಾಗೂ ವಿಸರ್ಜನೆಯ ಸಂದರ್ಭದಲ್ಲಿ ಯಾವುದೇ ಮೆರವಣಿಗೆಗೆ ಅವಕಾಶ ನೀಡುವ ಸಾಧ್ಯತೆ ಇಲ್ಲ. ಅಷ್ಟೇ ಅಲ್ಲದೆ, ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಅವಕಾಶ ನೀಡುವ ಸಾಧ್ಯತೆ ಇಲ್ಲ. ಕೋವಿಡ್ ಗೈಡ್ ಲೈನ್ಸ್ ಪ್ರಕಾರ ಸಾರ್ವಜನಿಕ ನಡೆಸಲು ಅಸ್ತು ನೀಡುವ ಸಾಧ್ಯತೆ ಹೆಚ್ಚಾಗಿದೆ. ಇನ್ನು ಕೋವಿಡ್ ನಿಯಂತ್ರಣದಲ್ಲಿ ಇಲ್ಲದ ಜಿಲ್ಲೆಗಳಲ್ಲಿ ಹಾಗೂ ಕೇರಳ ಮಹಾರಾಷ್ಟ್ರ ಗಡಿ ಭಾಗದ ಜಿಲ್ಲೆಗಳಲ್ಲಿ ಆಯಾ ಜಿಲ್ಲಾಧಿಕಾರಿಗಳಿಗೆ ಇದರ ಹೊಣೆಯನ್ನು ನೀಡುವ ಸಾಧ್ಯತೆ ಇದೆ. ಇಲ್ಲಿನ ಪರಿಸ್ಥಿತಿಗೆ ಅನುಗುಣವಾಗಿ ಜಿಲ್ಲಾಧಿಕಾರಿಗಳು ನಿರ್ಧಾರ ಕೈಗೊಳ್ಳಲು ಸಭೆಯನ್ನು ನಿರ್ಧಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟಿನಲ್ಲಿ ತಜ್ಞರ ಸಲಹೆ ಸೂಚನೆಗಳನ್ನುಆಧಾರವಾಗಿ ಇಟ್ಟುಕೊಂಡು ಈ ಕುರಿತಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ನಿರ್ಧಾರ ಕೈಗೊಳ್ಳಲಿದ್ದಾರೆ.


from India & World News in Kannada | VK Polls https://ift.tt/3kVHDM7

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...