ಶಿರಾಡಿ ಘಾಟ್‌ನಲ್ಲಿ ಎಲ್ಲ ಬಗೆಯ ವಾಹನ ಸಂಚಾರ ಮುಕ್ತ - ಡಿಸಿ ಆದೇಶ

ಹಾಸನ: ರಾಷ್ಟ್ರೀಯ ಹೆದ್ದಾರಿ 75 (48) ರ ಬೆಂಗಳೂರು - ರಸ್ತೆಯ ಮಾರನಹಳ್ಳಿಯಿಂದ ದೊಣಿಗಲ್‌ವರೆಗಿನ ರಸ್ತೆಯಲ್ಲಿ ಎಲ್ಲಾ ಬಗೆಯ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆರ್‌. ಗಿರೀಶ್‌ ಆದೇಶಿಸಿದ್ದಾರೆ. ಇದರಿಂದ ಹೊರ ಜಗತ್ತಿನ ಜತೆಗಿನ ದಕ್ಷಿಣ ಕನ್ನಡದ ಪ್ರಮುಖ ಸಂಪರ್ಕ ಕೊಂಡಿ ಎಲ್ಲಾ ಬಗೆಯ ವಾಹನಗಳ ಸಂಚಾರಕ್ಕೂ ಮುಕ್ತವಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ಮಾರನಹಳ್ಳಿಯಿಂದ ದೊಣಿಗಲ್‌ವರಗಿನ ಹಾಸನ ಜಿಲ್ಲಾ ವ್ಯಾಪ್ತಿಯ ಶಿರಾಡಿ ಘಾಟ್ ರಸ್ತೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಸೆ. 28 ರಿಂದ ಜಾರಿಗೆ ಬರುವಂತೆ ಎಲ್ಲಾ ಬಗೆಯ ಲಘು ಹಾಗೂ ಭಾರಿ ವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿ ಮುಕ್ತಗೊಳಿಸಿದ್ದಾರೆ. ಈ ರಸ್ತೆಯಲ್ಲಿ ಪೊಲೀಸ್ ಇಲಾಖಾ ವತಿಯಿಂದ ಸಿಬ್ಬಂದಿಯವರನ್ನು ನೇಮಕಗೊಳಿಸಲು ಜಿಲ್ಲಾ ಪೊಲೀಸ್ ಅಧೀಕ್ಷರಿಗೆ ತಿಳಿಸಲಾಗಿದ್ದು, ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಮತ್ತು ಹೆದ್ದಾರಿ ಆಡಳಿತ ಹಾಗೂ ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಸಕಲೇಶಪುರ ರಾಷ್ಟ್ರೀಯ ಹೆದ್ದಾರಿಯವರು ವಾಹನಗಳ ಸಂಚಾರಕ್ಕೆ ಅವಶ್ಯವಿರುವ ಸೂಚನ ಫಲಕ ಅಳವಡಿಸಲು ಮತ್ತು ಸಾರ್ವಜನಿಕರ ಮಾಹಿತಿಗಾಗಿ ವ್ಯಾಪಕ ಪ್ರಚಾರ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್, ಮತ್ತು ಪಿ.ಐ.ಯುನ ಯೋಜನಾ ನಿರ್ದೇಶಕರನ್ನು ರಸ್ತೆ ಸಂಚಾರದ ತಾಂತ್ರಿಕ ವ್ಯವಸ್ಥೆಯ ಜವಾಬ್ದಾರಿ ಅಧಿಕಾರಿಗಳನ್ನಾಗಿ ನೇಮಿಸಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಜುಲೈ 22ರಿಂದ ಭಾರಿ ವಾಹನ ಸಂಚಾರ ಬಂದ್ ಶಿರಾಡಿ ಘಾಟಿ ಪ್ರದೇಶ ಮತ್ತು ಸಕಲೇಶಪುರ ವ್ಯಾಪ್ತಿಯಲ್ಲಿ ಭಾರಿ ಮಳೆಯಾದ ಪರಿಣಾಮ ದೋಣಿಗಲ್‌ ಸಮೀಪ ಹೆದ್ದಾರಿಗೆ ತಾಗಿಕೊಂಡಿರುವ ಬರೆ ಕುಸಿಯಲು ಆರಂಭಿಸಿ, ಕೊನೆಗೊಮ್ಮೆ ಜುಲೈ 22 ರಂದು ಸಂಪರ್ಕ ಕಡಿತಗೊಂಡಿತ್ತು. ಈ ಸಂದರ್ಭದಲ್ಲಿ ಪರ್ಯಾಯವಾಗಿ ಬಿಸಲೆ ಘಾಟಿ ರಸ್ತೆ ಮತ್ತು ಚಾರ್ಮಾಡಿ ಮೂಲಕ ತೆರಳಲು ಸೂಚಿಸಲಾಗಿತ್ತು. ಸಕಲೇಶಪುರ ಮೂಲಕ ಹೋಗುವ ರಸ್ತೆ ಸಂಚಾರ ಸ್ಥಗಿತವಾಗಿದ್ದರಿಂದ ಬಿಸಲೆ ಘಾಟ್‌ ಮತ್ತು ಚಾರ್ಮಾಡಿ ಘಾಟ್‌ ರಸ್ತೆ ಬಳಸಲು ಸೂಚಿಸಲಾಗಿದ್ದರೂ ಭಾರೀ ಗಾತ್ರದ ವಾಹನಗಳು ಈ ರಸ್ತೆಯಲ್ಲಿ ಸಂಚರಿಸಲು ಕಷ್ಟ ಸಾಧ್ಯವಾಗಿದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಭಾರಿ ತೊಂದರೆ ಅನುಭವಿಸುತ್ತಿದ್ದರು. ಇದಕ್ಕೀಗ ಮುಕ್ತಿ ಸಿಕ್ಕಿದೆ.


from India & World News in Kannada | VK Polls https://ift.tt/3zPLmAq

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...