ಮುಸ್ಲಿಂ ಮಹಿಳೆಯರಿಗೆ ನಾವು ಯೋಜನೆ ಘೋಷಣೆ ಮಾಡಿದ್ದಲ್ಲ;ಶಶಿಕಲಾ ಜೊಲ್ಲೆ

ವಿಜಯಪುರ: ಕ್ಯಾನ್ಸರ್‌ ಪೀಡಿತ ಮುಸ್ಲಿಂ ಮಹಿಳೆಯರಿಗೆ ಸರಕಾರದಿಂದ ತಲಾ 1 ಲಕ್ಷ ರೂ. ಸಹಾಯ ಧನ ನೀಡುವ ಯೋಜನೆ ತಾವು ಘೋಷಣೆ ಮಾಡಿದ್ದಲ್ಲ ಎಂದು ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವೆ ಹೇಳಿದ್ದಾರೆ. ಬುಧವಾರ ರಾತ್ರಿ ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಅವರು, ಕ್ಯಾನ್ಸರ್‌ ಪೀಡಿತ ಮುಸ್ಲಿಂ ಮಹಿಳೆಯರಿಗೆ ಸರಕಾರದಿಂದ ತಲಾ 1 ಲಕ್ಷ ರೂ. ಸಹಾಯ ಧನ ನೀಡುವ ಯೋಜನೆ 2009 ರಿಂದಲೇ ಜಾರಿಯಲ್ಲಿದೆ. ಈ ಯೋಜನೆ ಬಗ್ಗೆ ಬಹಳಷ್ಟು ಜನರು ತಪ್ಪು ತಿಳುವಳಿಕೆ ಹೊಂದಿದ್ದಾರೆ. ಹಜ್‌ ಮತ್ತು ವಕ್ಫ್‌ ಇಲಾಖೆಯಲ್ಲಿ 2009 ರಲ್ಲೇ ಈ ಕುರಿತು ಆದೇಶ ಜಾರಿಯಾಗಿದೆ. ನಾನು ಹೊಸದಾಗಿ ಹೇಳಿಲ್ಲ ಎಂದರು. ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದರೆ ಅವರಿಗೆ 1 ಲಕ್ಷ ರೂ. ಸಹಾಯ ಧನ ನೀಡಲು ಅಂದು ತೀರ್ಮಾನಿಸಲಾಗಿತ್ತು. ಈ ಬಗ್ಗೆ ಯಾರಿಗೂ ಗೊತ್ತಿರಲಿಲ್ಲ. ನಾನು ಇಲಾಖೆ ಜವಾಬ್ದಾರಿ ವಹಿಸಿಕೊಂಡ ಬಳಿಕ ಮಾಹಿತಿ ನೀಡುವಾಗ ಆ ಬಗ್ಗೆ ಹೇಳಿದ್ದೇನೆ. ನಾನು ಕೇವಲ ಆ ಯೋಜನೆ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದೇನೆ ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಅವರು ತಿಳಿಸಿದರು. ಅಲ್ಲದೇ, ಈ ಯೋಜನೆಯನ್ನು ಮುಸ್ಲಿಂ ಮಹಿಳೆಯರಿಗೆ ಮಾತ್ರವಲ್ಲದೆ ಎಲ್ಲ ವರ್ಗದವರಿಗೂ ಕೊಡಬೇಕೆಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಪತ್ರ ಬರೆದಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಶಶಿಕಲಾ ಜೊಲ್ಲೆ ಅವರು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಬಿಎಸ್‌ ಯಡಿಯೂರಪ್ಪ ಅವರ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಖಾತೆಯ ಸಚಿವರಾಗಿದ್ದ ವೇಳೆ ಶಶಿಕಲಾ ಜೊಲ್ಲೆ ಅವರ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು. ಶಾಲಾ ಮಕ್ಕಳಿಗೆ ನೀಡುವ ಮೊಟ್ಟೆಯಲ್ಲಿ ಕೋಟ್ಯಂತರ ರೂಪಾಯಿ ಹಗರಣ ನಡೆಸಿರುವ ಆರೋಪ ಕೇಳಿ ಬಂದಿತ್ತು. ಈ ಪ್ರಕರಣ ದೇಶಾದ್ಯಂತ ಸದ್ದು ಮಾಡಿತ್ತು. ವಿಪಕ್ಷಗಳು ಕೂಡ ಶಶಿಕಲಾ ಜೊಲ್ಲೆ ಅವರ ರಾಜೀನಾಮೆಗೆ ಒತ್ತಾಯಿಸಿದ್ದವು. ಬಳಿಕ ಸಿಎಂ ಬದಲಾವಣೆ ನಂತರ ಈ ಹಗರಣದ ಪ್ರಕರಣ ತಣ್ಣಗಾಗಿತ್ತು.


from India & World News in Kannada | VK Polls https://ift.tt/2YdY7Yd

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...