ಬಿಎಸ್‌ವೈ ರಾಜ್ಯ ಪ್ರವಾಸ: ಇನ್ನೂ ಬಗೆಹರಿಯದ ಗೊಂದಲ!

ಬೆಂಗಳೂರು: ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ರಾಜ್ಯ ಪ್ರವಾಸದ ಗೊಂದಲ ಇನ್ನೂ ಮುಂದುವರಿದಿದೆ. ವಿದೇಶ ಪ್ರವಾಸದಿಂದ ವಾಪಸಾದ ಬಳಿಕ ರಾಜ್ಯಪ್ರವಾಸಕ್ಕೆ ಮುಂದಾಗಿದ್ದ ಯಾವಾಗ ಇದನ್ನು ಹಮ್ಮಿಕೊಳ್ಳುತ್ತಾರೆ ಎಂಬುವುದು ಇನ್ನೂ ಸ್ಪಷ್ಟಗೊಂಡಿಲ್ಲ. ಆರಂಭದಲ್ಲಿ ಬಿಎಸ್‌ವೈ ಅವರೇ ರಾಜ್ಯಾದ್ಯಂತ ಸುತ್ತಾಟ ನಡೆಸುತ್ತಾರೆ ಎಂದು ಹೇಳಲಾಗುತ್ತಿದ್ದರೂ ಇದೀಗ ರಾಜ್ಯಾಧ್ಯಕ್ಷರು ಸೇರಿದಂತೆ ಪಕ್ಷದ ಮುಖಂಡರೂ ಇದರಲ್ಲಿ ಭಾಗಿಯಾಗುತ್ತಾರೆ ಎಂದು ಹೇಳಲಾಗುತ್ತಿದೆ. ಆದರೆ ಸೆಪ್ಟಂಬರ್ ೧೩ ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿದ್ದು ಅಧಿವೇಶನ ಮುಗಿದ ಬಳಿಕ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಬಿಎಸ್‌ ಯಡಿಯೂರಪ್ಪ ರಾಜ್ಯ ಪ್ರವಾಸದ ಕುರಿತಾಗಿ ಹಲವಾರು ಆಯಾಮಗಳಲ್ಲಿ ಚರ್ಚೆಗಳು ನಡೆಯುತ್ತಿದ್ದವು. ಇದು ಶಕ್ತಿ ಪ್ರದರ್ಶನ ಹಾಗೂ ತಮ್ಮನ್ನು ಕಡೆಗಣಿಸಿದವರಿಗೆ ಪರೋಕ್ಷ ಸಂದೇಶ ಎಂಬ ಆಯಾಮದಲ್ಲೂ ಚರ್ಚೆಗಳು ನಡೆಯುತ್ತಿದ್ದವು. ಈ ಕಾರಣಕ್ಕಾಗಿಯೇ ಯಡಿಯೂರಪ್ಪ ರಾಜ್ಯ ಪ್ರವಾಸ ವಿಚಾರ ಮಹತ್ವವನ್ನು ಪಡೆದುಕೊಂಡಿತ್ತು. ರಾಜೀನಾಮೆ ಬಳಿಕ ಸೈಲೆಂಟಾಗಿದ್ದ ಯಡಿಯೂರಪ್ಪ ರಾಜ್ಯ ಪ್ರವಾಸ ನಡೆಸುವ ಮೂಲಕ ತಮ್ಮ ಶಕ್ತಿ ಪ್ರದರ್ಶನ ಮಾಡಿ ಹೈಕಮಾಂಡ್‌ಗೂ ಒಂದು ಸಂದೇಶ ರವಾನಿಸುವ ಉದ್ದೇಶ ಹೊಂದಿದ್ದಾರೆ ಎಂದೇ ವ್ಯಾಖ್ಯಾನ ಮಾಡಲಾಗಿತ್ತು. ಈ ನಿಟ್ಟಿನಲ್ಲಿ ಪಕ್ಷದ ಆಂತರಿಕ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿತ್ತು. ಆದರೆ ಇದು ವೈಯಕ್ತಿಕ ನೆಲೆಯಲ್ಲಿ ಆಗಬಾರದು ಬದಲಾಗಿ ಪಕ್ಷದ ನೆಲೆಯಲ್ಲೇ ನಡೆಯಬೇಕು ಎಂಬ ನಿಟ್ಟಿನಲ್ಲಿ ಒತ್ತಡಗಳು ಹೆಚ್ಚಾಗಿವೆ. ಈ ಕಾರಣಕ್ಕಾಗಿಯೇ ರಾಜ್ಯ ಪ್ರವಾಸದ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎನ್ನಲಾಗುತ್ತಿವೆ. ಪಕ್ಷದ ಮೂಲಕವೇ ರೂಪುರೇಷೆ ನಡೆಸಿ ಬಳಿಕ ರಾಜ್ಯ ಪ್ರವಾಸ ಹಮ್ಮಿಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ. ಅಧಿವೇಶನ ಮುಕ್ತಾಯಗೊಂಡ ಬಳಿಕ ರಾಜ್ಯ ಪ್ರವಾಸದ ದಿನಾಂಕ ನಿಗದಿ ಮಾಡುವ ಸಾಧ್ಯತೆ ಇದೆ. ಆದರೆ ಇದು ಕೇವಲ ಬಿಎಸ್‌ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯುವ ರಾಜ್ಯಪ್ರವಾಸ ಆಗುವ ಸಾಧ್ಯತೆ ಕಡಿಮೆ. ಬದಲಾಗಿ ಮುಂದಿನ ಚುನಾವಣೆಯ ದೃಷ್ಟಿಯಲ್ಲಿ ಪಕ್ಷದ ಪ್ರಮುಖರ ಮಾರ್ಗದರ್ಶನದಲ್ಲೇ ನಡೆಯುವ ಸಾಧ್ಯತೆ ಹೆಚ್ಚಿದೆ ಎಂಬುವುದು ಸದ್ಯಕ್ಕೆ ತಿಳಿದುಬರುತ್ತಿರುವ ಮಾಹಿತಿ.


from India & World News in Kannada | VK Polls https://ift.tt/3kMYgtv

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...