ಬಾಲಕಾರ್ಮಿಕ ಪದ್ದತಿಗೆ ಬೀಳುತ್ತಿಲ್ಲ ಬ್ರೇಕ್; ರಾಜ್ಯದಲ್ಲಿ ಎರಡು ವರ್ಷದಲ್ಲಿ 187 ಪ್ರಕರಣ ದಾಖಲು

ಬೆಂಗಳೂರು: ರಾಜ್ಯದಲ್ಲಿ ಬಾಲಕಾರ್ಮಿಕ ಪದ್ದತಿಗೆ ಬ್ರೇಕ್‌ ಹಾಕುವ ಪ್ರಯತ್ನ ನಡೆಯುತ್ತಿದ್ದರೂ ಅದು ಸಾಧ್ಯವಾಗುತ್ತಿಲ್ಲ. ಕಳೆದ ಎರಡು ವರ್ಷಗಳಲ್ಲಿ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 187 ಪ್ರಕರಣಗಳು ದಾಖಲಾಗಿವೆ. ಇನ್ನು ಕೋವಿಡ್ ಕಾಲದಲ್ಲಿ ಶಾಲೆ- ಶಿಕ್ಷಣ ಸಂಸ್ಥೆಗಳು ಬಂದ್ ಇದ್ದ ಪರಿಣಾಮ ಗ್ರಾಮೀಣ ಭಾಗಗಳಲ್ಲಿ ಮಕ್ಕಳನ್ನು ಕೃಷಿ ಸೇರಿದಂತೆ ಇತರ ಚಟುವಟಿಕೆಗಳಲ್ಲಿ ಬಳಕೆ ಮಾಡಿಕೊಂಡ ಹಲವು ಉದಾಹರಣೆಗಳು ಕಂಡುಬಂದಿವೆ. ಸರ್ಕಾರ ನೀಡುವ ಅಂಕಿ ಅಂಶಗಳ ಪ್ರಕಾರ 2019 ರಲ್ಲಿ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ 96 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಶಿಕ್ಷೆಯಾದ ಪ್ರಕರಣಗಳ ಸಂಖ್ಯೆ 20 ಇದೆ. 2,66,000 ದಂಡ ವಿಧಿಸಲಾಗಿದ್ದು, ಮೂರು ಪ್ರಕರಣಗಳಲ್ಲಿಆರೋಪಿಗಳಿಗೆ 6 ತಿಂಗಳು ಜೈಲು ಶಿಕ್ಷೆಯಾಗಿದೆ. 2020 ರಲ್ಲಿ ವಿವಿಧ ನ್ಯಾಯಾಲಯಗಳಲ್ಲಿ 91 ಪ್ರಕರಣ ದಾಖಲಾಗಿವೆ. ಈ ಪೈಕಿ 4 ಪ್ರಕರಣಗಳಲ್ಲಿ ಶಿಕ್ಷೆಯಾಗಿವೆ. 1,40,000 ದಂಡ ಆರೋಪಿಗಳಿಂದ ವಸೂಲಿ ಮಾಡಲಾಗಿದೆ. ಒಟ್ಟು ಎರಡು ವರ್ಷಗಳಲ್ಲಿ 87 ಪ್ರಕರಣಗಳು ದಾಖಲಾದರೆ ಒಟ್ಟು 24 ಪ್ರಕರಣಗಳಲ್ಲಿ ಜೈಲು ಶಿಕ್ಷೆಯಾಗಿವೆ. ಹಾಗೂ 4,06,000 ದಂಡ ವಸೂಲಿ ಮಾಡಲಾಗಿದೆ. ಅರಿವು ಮೂಡಿಸುವ ಕಾರ್ಯಕ್ರಮ ಇನ್ನು ರಾಜ್ಯದಲ್ಲಿ ಬಾಲಕಾರ್ಮಿಕ ಪದ್ದತಿಗೆ ಬ್ರೇಕ್ ಹಾಕಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಬಾಲ ಕಾರ್ಮಿಕರನ್ನು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸುವುದರಿಂದ ಅಂತಹ ಮಕ್ಕಳಿಗೆ ಶಿಕ್ಷಣ ಅಡ್ಡಿಯಾಗುವ ಕುರಿತಾಗಿ ದೂರುಗಳು ಬಂದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬೀದಿ ನಾಟಕಗಳು, ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದೆ. ಆದರೆ ಬೇರೆ ರಾಜ್ಯಗಳಿಂದ ವಸಲೆ ಬರುವ ಕಾರ್ಮಿಕರ ಮಕ್ಕಳು ಕೂಡಾ ಬಾಲಕಾರ್ಮಿಕರಾಗಿ ದುಡಿಯುತ್ತಿರುವ ಪ್ರಕರಣಗಳು ಕಂಡುಬರುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ರಾಜ್ಯದ ಮತ್ತು ಹೊರ ರಾಜ್ಯದ ಬಾಲ ಕಾರ್ಮಿಕರು ವಲಸೆ ಹೋಗುವ ಮುನ್ನ ಅವರ ಸ್ವಂತ ಊರಿನ ಪಂಚಾಯಿತಿಗಳಲ್ಲಿ ವಿವರಗಳನ್ನು ದಾಖಲಿಸುವ ಕುರಿತಾಗಿ ಇಲಾಖೆಯಲ್ಲಿ ಯಾವುದೇ ನಿಯಮ ಜಾರಿಯಲ್ಲಿಲ್ಲ. ಕೋವಿಡ್ ಸಂದರ್ಭದಲ್ಲೂ ಬಾಲಕಾರ್ಮಿಕ ಪದ್ದತಿಗೆ ಹಲವು ಕಡೆಗಳಲ್ಲಿ ವರದಿಯಾಗಿವೆ. ಈ ನಿಟ್ಟಿನಲ್ಲಿ ಜನರಲ್ಲಿ ಇನ್ನಷ್ಟು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಿದೆ.


from India & World News in Kannada | VK Polls https://ift.tt/2ZTrXCk

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...