ಟಿ20 ವಿಶ್ವಕಪ್‌: ಅಶ್ವಿನ್‌ಗೆ ಎಲ್ಲಾ ಪಂದ್ಯಗಳಲ್ಲಿ ಚಾನ್ಸ್ ನೀಡಬೇಕೆಂದ ಬ್ರೆಟ್‌ ಲೀ!

ಹೊಸದಿಲ್ಲಿ: ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಎಲ್ಲಾ ಪಂದ್ಯಗಳಲ್ಲಿ ಭಾರತ ತಂಡದ ಪರ ಆಡುವ ಸಾಮರ್ಥ್ಯ ಹಿರಿಯ ಆಫ್‌ ಸ್ಪಿನ್ನರ್‌ ರವಿಚಂದ್ರನ್ ಅಶ್ವಿನ್ ಅವರಿಗೆ ಇದೆ ಎಂದು ಆಸ್ಟ್ರೇಲಿಯಾ ಮಾಜಿ ವೇಗಿ ಬ್ರೆಟ್‌ ಲೀಗ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎಎನ್‌ಐ ಜತೆ ಸಂಭಾಷಣೆಯಲ್ಲಿ ಅವರ ಅಭಿಮಾನಿ ಎಂದು ಒಪ್ಪಿಕೊಂಡರು. ಅಷ್ಟೇ ಅಲ್ಲದೆ, ಅತ್ಯುನ್ನತ ಮಟ್ಟದಲ್ಲಿ ಆಡಿರುವ ಅಪಾರ ಅನುಭವವನ್ನು ಹೊಂದಿರುವ ಹಿನ್ನೆಲೆಯಲ್ಲಿ ಅವರಿಗೆ ಎಲ್ಲಾ ಪಂದ್ಯಗಳಲ್ಲಿ ಆಡುವ ಅವಕಾಶ ಕಲ್ಪಿಸಬೇಕು ಎಂದು ಸಲಹೆ ನೀಡಿದ್ದಾರೆ. "ಆರ್‌ ಅಶ್ವಿನ್‌ ಬಗ್ಗೆ ನೀವು ಒಂದು ದೃಷ್ಟಿಕೋನ ಹೊಂದಿದ್ದರೆ, ಅವರು ಮೊದಲ ಮತ್ತು ಅಗ್ರಗಣ್ಯ ಅದ್ಭುತ ಕ್ರಿಕೆಟಿಗರಾಗಿರುತ್ತಾರೆ. ನಾನು ಅವರ ದೊಡ್ಡ ಅಭಿಮಾನಿಯಾಗಿದ್ದು, ಅತ್ಯುತ್ತಮ ಅನುಭವವನ್ನು ಅವರು ಹೊಂದಿದ್ದಾರೆ. ಅಷ್ಟೇ ಅಲ್ಲದೆ ಅತ್ಯುತ್ತಮ ನಾಯಕತ್ವದ ಗುಣಗಳನ್ನು ಹೊಂದಿರುವ ಅಶ್ವಿನ್‌, ಎಲ್ಲಾ ಪಂದ್ಯಗಳಲ್ಲಿ ಆಡಬೇಕು," ಎಂದು ಬ್ರೆಟ್‌ ಲೀ ಅಭಿಪ್ರಾಯಪಟ್ಟರು. "ಪಾಕಿಸ್ತಾನ ವಿರುದ್ಧ ಮೊದಲನೇ ಹಣಾಹಣಿಯಲ್ಲಿ ಆರ್‌ ಅಶ್ವಿನ್‌ ಅವರನ್ನು ಆಡಿಸದೆ ಇರಲು ಟೀಮ್ ಮ್ಯಾನೇಜ್‌ಮೆಂಟ್‌ ನಿರ್ಧರಿಸಿತ್ತು. ಆದರೆ, ಮುಂದಿನ ಪಂದ್ಯಗಳಲ್ಲಿ ಅವರು ಪ್ಲೇಯಿಂಗ್‌ ಇಲೆವೆನ್‌ಗೆ ಕರೆ ತರುವುದು ಅಥವಾ ಬಿಡುವುದು ನಾಯಕ ವಿರಾಟ್‌ ಕೊಹ್ಲಿ ಹಾಗೂ ಆಯ್ಕೆದಾರರಿಗೆ ಬಿಟ್ಟಿದ್ದು," ಎಂದು ಹೇಳಿದ್ದಾರೆ. ಪಾಕಿಸ್ತಾನ ವಿರುದ್ಧ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ತನ್ನ ಆರಂಭಿಕ ಪಂದ್ಯದಲ್ಲಿ ಭಾರತ ಕನಿಷ್ಠ ಒಂದೇ ಒಂದು ವಿಕೆಟ್‌ ಪಡೆಯಲು ಸಾಧ್ಯವಾಗಿರಲಿಲ್ಲ. ಆದರೆ, ಆರ್‌ ಅಶ್ವಿನ್‌ ಯಾವಾಗಲೂ ವಿಕೆಟ್‌ ಪಡೆಯುವ ಬೌಲರ್‌ ಆಗಿದ್ದಾರೆ. ಆದ್ದರಿಂದ ನ್ಯೂಜಿಲೆಂಡ್‌ ವಿರುದ್ಧ ನಿರ್ಣಾಯಕ ಪಂದ್ಯದಲ್ಲಿ ಆರ್‌ ಅಶ್ವಿನ್‌ ಅವರನ್ನು ಕೊಹ್ಲಿ ಆಡಿಸಿದರೆ, ಪಾಲಿಗೆ ಉತ್ತಮವಾಗಲಿದೆ. ಕಳೆದ 2017ರಲ್ಲಿ ಭಾರತ ತಂಡದ ಪರ ಕೊನೆಯ ಟಿ20 ಪಂದ್ಯವಾಡಿದ್ದ ಆರ್‌ ಅಶ್ವಿನ್‌ ಅಂದಿನಿಂದ ಇಲ್ಲಿಯವರೆಗೂ ಐಪಿಎಲ್‌ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ತೋರುತ್ತಿದ್ದಾರೆ. ಇತ್ತೀಚೆಗೆ ಮುಕ್ತಾಯವಾಗಿದ್ದ ಆವೃತ್ತಿಯಲ್ಲಿಯೂ ಡೆಲ್ಲಿ ಕ್ಯಾಪಿಟಲ್ಸ್ ಪರ ಆರ್‌ ಅಶ್ವಿನ್‌ ಗಮನಾರ್ಹ ಬೌಲಿಂಗ್‌ ಪ್ರದರ್ಶನ ತೋರಿದ್ದರು. 13 ಪಂದ್ಯಗಳಾಡಿದ್ದ ಆರ್‌ ಅಶ್ವಿನ್‌, ಕೇವಲ 7 ವಿಕೆಟ್‌ ಪಡೆದುಕೊಂಡರೂ 7.41ರ ಅತ್ಯುತ್ತಮ ಎಕಾನಮಿ ರೇಟ್‌ ಅನ್ನು ಹೊಂದಿದ್ದರು. ರವೀಂದ್ರ ಜಡೇಜಾ ತಂಡಕ್ಕೆ ಆಟೋಮ್ಯಾಟಿಕ್ ಆಯ್ಕೆಯಾಗಿದ್ದಾರೆ. ಆದರೆ, ಟೀಮ್‌ ಮ್ಯಾನೇಜ್‌ಮೆಂಟ್‌ ಬೌಲಿಂಗ್‌ ವಿಭಾಗದಲ್ಲಿ ಬದಲಾವಣೆ ಬಯಸಿದರೆ, ವರುಣ್‌ ಚಕ್ರವರ್ತಿ ಅವರ ಸ್ಥಾನಕ್ಕೆ ಆರ್ ಅಶ್ವಿನ್‌ಗೆ ಚಾನ್ಸ್ ನೀಡುವ ಸಾಧ್ಯತೆ ಇದೆ. ನಾಳೆ (ಭಾನುವಾರ) ಟಿ20 ವಿಶ್ವಕಪ್‌ ಟೂರ್ನಿಯ ಸೂಪರ್‌ 12ರ ಹಂತದ ತನ್ನ ಎರಡನೇ ಪಂದ್ಯದಲ್ಲಿ ಭಾರತ ತಂಡ, ನ್ಯೂಜಿಲೆಂಡ್‌ ವಿರುದ್ಧ ಸೆಣಸಲಿದೆ. ಈ ಎರಡೂ ತಂಡಗಳ ಹೈಲ್ಟೋಜ್ ಕದನಕ್ಕೆ ದುಬೈ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ವೇದಿಕೆ ಸಿದ್ದವಾಗಿದೆ. ಅಂದಹಾಗೆ, ಕೇನ್‌ ವಿಲಿಯಮ್ಸನ್‌ ನಾಯಕತ್ವದ ನ್ಯೂಜಿಲೆಂಡ್‌ ತಂಡ ಕೂಡ ತನ್ನ ಮೊದಲನೇ ಪಂದ್ಯದಲ್ಲಿ ಸೋಲುಂಡಿದೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3nI8EUL

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...