ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ 3 ಸಾವಿರ ವಿಶೇಷ ಅನುದಾನ‌ ನೀಡಿಕೆಗೆ ಬದ್ಧ: ಬೊಮ್ಮಾಯಿ

ಬಳ್ಳಾರಿ: ಪ್ರದೇಶಾಭಿವೃದ್ಧಿ ಮಂಡಳಿಗೆ ಈಗ ನೀಡಲಾಗುತ್ತಿರುವ 1500 ಕೋಟಿ ರೂ.ಖರ್ಚನ್ನು ನಿಗದಿಪಡಿಸಿದ ಅವಧಿಯೊಳಗೆ ಸಮರ್ಪಕ ಖರ್ಚು ಮಾಡಿದಲ್ಲಿ 3 ಸಾವಿರ ಕೋಟಿ ರೂ. ವಿಶೇಷ ಅನುದಾನವನ್ನು ಇದೇ ವರ್ಷದಿಂದ ಒದಗಿಸುವುದಕ್ಕೆ ನಮ್ಮ ಸರಕಾರ ‌ಬದ್ಧವಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನಮ್ಮ ಸರಕಾರ ನೀಡುತ್ತಿದೆ ಎಂದು ರಾಜ್ಯದ ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಆರ್. ವೈ. ಎಂ. ಇ. ಸಿ ಕಾಲೇಜು ಆವರಣದಲ್ಲಿ ಇರುವ ಎಸ್. ಕೆ. ಮೋದಿ ನ್ಯಾಷನಲ್ ಸ್ಕೂಲ್ , ವಿ. ವಿ ಸಂಘದ‌ ಕಿಂಡರ್ ಗಾರ್ಡನ್ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಮತ್ತು ಎಸ್. ಕೆ. ಮೋದಿ ಅವರ ಪ್ರತಿಮೆಯನ್ನು ಭಾನುವಾರ ಅನಾವರಣಗೊಳಿಸಿ ಸಿಎಂ ಮಾತನಾಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಪ್ರತಿ ವರ್ಷ ಈಗ ನೀಡಲಾಗುತ್ತಿರುವ ವಿಶೇಷ ಅನುದಾನ 1500 ಕೋಟಿ ರೂ.ಗಳನ್ನು ನಿಗದಿಪಡಿಸಿದ ಅವಧಿಯೊಳಗೆ ಇದುವರೆಗೆ ಖರ್ಚು ಮಾಡಲಾಗಿಲ್ಲ. ನಿಗದಿಪಡಿಸಿದ ಅವಧಿಯೊಳಗೆ ಅಂದರೇ ಮಾರ್ಚ್ ಅಂತ್ಯದೊಳಗೆ ಖರ್ಚು ಮಾಡುವುದಕ್ಕೆ ಹಾಗೂ ವಿಶೇಷ ಯೋಜನೆಗಳನ್ನು ರೂಪಿಸುವುದಕ್ಕೆ ಅಗತ್ಯ ಸಹಕಾರವನ್ನು ಸರಕಾರ ನೀಡಲಿದೆ. ಸಮರ್ಪಕವಾಗಿ ಅನುದಾನ ಬಳಕೆ ಮಾಡುವುದರ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಇಡೀ ಕರ್ನಾಟಕದ ರಾಜ್ಯದ ಅಭಿವೃದ್ಧಿ ನಕ್ಷೆಯಲ್ಲಿ ಜಿಲ್ಲೆಗೆ ಪ್ರಮುಖ ಸ್ಥಾನವಿದೆ. ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ನಮ್ಮ ಸರಕಾರ ಬದ್ಧವಿದೆ. ಅಭಿವೃದ್ಧಿ ಎಂಬುದು ನಿರಂತರ ಆಗಿರಬೇಕು. ಹಾಗೆ ಆದಾಗ ಮಾತ್ರ ಮುಂದಿನ ಪೀಳಿಗೆಗೆ ತಲುಪಲು ಸಾಧ್ಯ ಎಂದು ಬೊಮ್ಮಾಯಿ ಅವರು ಹೇಳಿದರು. ನಾನು ರಾಜ್ಯದ ಮುಖ್ಯಮಂತ್ರಿ ಆಗುತ್ತೇನೆ ಎಂದು ನಿರೀಕ್ಷಿಸಿರಲಿಲ್ಲ. ಸಿಎಂ ಆಗಿರುವುದು ದೈವಿಚ್ಛೆ ಮತ್ತು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ನಮ್ಮ‌ ಹೈಕಮಾಂಡ್ ಕಾರಣ. ತಾವೆಲ್ಲರೂ ನೀಡಿದ ಜವಾಬ್ದಾರಿ ದೊಡ್ಡದಿದೆ ಎಂಬ ಅರಿವು ನನಗಿದೆ. ತಾವು ನನ್ನ ಮೇಲೆ ಹಾಕಿರುವ ಶಾಲು ತಮ್ಮ ಶ್ರೀರಕ್ಷೆ ಎಂದು ಭಾವಿಸಿರುವೆ. ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ನನ್ನ ಮೇಲಿಟ್ಟು ಕೊಂಡಿರುವ ನಿರೀಕ್ಷೆಗಳನ್ನು ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ ಎಂದರು.


from India & World News in Kannada | VK Polls https://ift.tt/3B1zblk

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...