ರಾಮನಗರ: 45 ಕಾರ್ಮಿಕರನ್ನು ವಜಾಗೊಳಿಸಿದ ಟೊಯೊಟಾ; ಟಿಕೆಎಂ ಕಾರ್ಮಿಕ ಸಂಘ ತೀವ್ರ ಆಕ್ರೋಶ

ರಾಮನಗರ: ಬಿಡದಿ‌ ಕೈಗಾರಿಕಾ ಪ್ರದೇಶದಲ್ಲಿರುವ ಕಂಪನಿಯು ತನ್ನ 45 ಉದ್ಯೋಗಿಗಳನ್ನು ಸೇವೆಯಿಂದ ವಜಾ ಮಾಡಿದೆ. ಕಾರ್ಮಿಕರ ಮೇಲೆ ಅಧಿಕಾರಿಗಳು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಟಿಕೆಎಂ ನೌಕರರ ಸಂಘದ ನೇತೃತ್ವದಲ್ಲಿ ಕೆಲವು‌ ತಿಂಗಳ ಹಿಂದೆ ‌ಸಾವಿರಾರು‌ ಮುಷ್ಕರ ನಡೆಸಿದ್ದರು. ಇದರಿಂದಾಗಿ ಎರಡೆರಡು ಬಾರಿ ಕಂಪನಿ‌ ಲಾಕೌಟ್ ಘೋಷಿಸಿತ್ತು. ಕಡೆಗೆ ಸರ್ಕಾರದ ಮಧ್ಯಸ್ಥಿಕೆಯಲ್ಲಿ ಸಂಧಾನ ಸಭೆ ನಡೆದು‌ ಉತ್ಪಾದನೆ ಪುನರಾರಂಭಗೊಂಡಿತ್ತು. ನಿಯಮಬಾಹಿರವಾಗಿ ಮುಷ್ಕರ ನಡೆಸಿದ ಆರೋಪದ‌ ಮೇಲೆ ಟಿಕೆಎಂ ತನ್ನ 66 ನೌಕರರನ್ನು ಸೇವೆಯಿಂದ ಅಮಾನತು ಮಾಡಿ, ಅವರ ವಿರುದ್ಧ ತನಿಖೆಗೆ ಆದೇಶಿಸಿತ್ತು. ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ‌ಕಂಪನಿ‌ ‌ನಿಯಮಗಳ ಪ್ರಕಾರ ಈ ಕಾರ್ಮಿಕರನ್ನು ಸೇವೆಯಿಂದ ವಜಾ‌ ಮಾಡಿರುವುದಾಗಿ ಟಿಕೆಎಂ‌ ಪ್ರಕಟಣೆಯಲ್ಲಿ ತಿಳಿಸಿದೆ. ಕಾರ್ಮಿಕ ಸಂಘದ ಆಕ್ರೋಶಕಂಪನಿಯ ಕ್ರಮಕ್ಕೆ ಟಿಕೆಎಂ ಕಾರ್ಮಿಕ ಸಂಘವು ಆಕ್ರೋಶ ವ್ಯಕ್ತಪಡಿಸಿದೆ. ಕಂಪನಿಯು ತನ್ನ ಹಠಮಾರಿ ಧೋರಣೆ ಹಾಗೂ ಕಾರ್ಮಿಕ‌ ವಿರೋಧಿ ನೀತಿಯನ್ನು ಮತ್ತೆ ಮುಂದುವರಿಸಿದೆ. ಇದು ದುರಹಂಕಾರದ ಪರಮಾವಧಿ ಎಂದು ಸಂಘವು ಟೀಕಿಸಿದೆ.


from India & World News in Kannada | VK Polls https://ift.tt/3uA7jCh

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...