ಗಾಂಧಿ ಜಯಂತಿ: ಮಹಾತ್ಮ ಗಾಂಧಿ ಸತ್ಯಾಗ್ರಹಕ್ಕೆ ರೈತರ ಪ್ರತಿಭಟನೆ ಹೋಲಿಕೆ ಮಾಡಿದ ರಾಹುಲ್ ಗಾಂಧಿ

ಹೊಸದಿಲ್ಲಿ: ಅವರ ಜನ್ಮದಿನಾಚರಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ , ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 'ಒಂದೇ ಒಂದು ಸತ್ಯಾಗ್ರಹ ದಿಗ್ವಿಜಯಕ್ಕೆ ಸಾಕು' ಎಂಬ ನುಡಿಯನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ, ಮಹಾತ್ಮ ಗಾಂಧಿ ಅವರಿಗೆ ವಿನಮ್ರ ಶ್ರದ್ಧಾಂಜಲಿಗಳು ಎಂದು ಹೇಳಿದ್ದಾರೆ. ಜತೆಗೆ ಅವರು ಮಹಾತ್ಮ ಗಾಂಧಿ ಅವರ ಸತ್ಯಾಗ್ರಹದ ಚಿತ್ರಗಳು ಹಾಗೂ ರೈತರ ಪ್ರತಿಭಟನೆಯ ಚಿತ್ರಗಳನ್ನು ವಿಡಿಯೋ ರೂಪದಲ್ಲಿ ಹಂಚಿಕೊಂಡಿರುವ ಅವರು, ಎರಡನ್ನೂ ಹೋಲಿಕೆ ಮಾಡಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರಕ್ಕೆ ಸತ್ಯಾಗ್ರಹದ ಪರಿಣಾಮದ ಕುರಿತಾದ ಎಚ್ಚರಿಕೆ ನೀಡಿದ್ದಾರೆ. 'ಸತ್ಯಾಗ್ರಹ ಆಗ ಮತ್ತು ಈಗ' ಎಂದು ಶೀರ್ಷಿಕೆಯ ಬರಹದಲ್ಲಿ ಅವರು, ಅಸತ್ಯ ಮತ್ತು ಅನ್ಯಾಯದ ವಿರುದ್ಧ ಬಾಪು ಸತ್ಯಾಗ್ರಹ ನಡೆಸಿದ್ದರು. ಇಂದು ಅನ್ನದಾತ ಸತ್ಯಾಗ್ರಹ ನಡೆಸುತ್ತಿದ್ದಾನೆ ಎಂದಿದ್ದಾರೆ. ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಲಾಠಿ ಪ್ರಹಾರ ನಡೆಸುವ ತುಣುಕನ್ನು ವಿಡಿಯೋದಲ್ಲಿ ಅಳವಡಿಸಲಾಗಿದೆ. 'ಬಾಪು ನಮ್ಮೆಲ್ಲರ ಹೃದಯದಲ್ಲಿ ನೆಲೆಸಿದ್ದಾರೆ. ನೀವು ಎಷ್ಟು ಮಂದಿ ಗೋಡ್ಸೆಗಳನ್ನು ತರುತ್ತೀರಿ? ನಾವು ನಿಮ್ಮ ದಬ್ಬಾಳಿಕೆಗೆ ಹೆದರಿಲ್ಲ. ನಿಮ್ಮ ಅನ್ಯಾಯಕ್ಕೆ ತಲೆಬಾಗುವುದಿಲ್ಲ. ನಾವು ಭಾರತದ ಜನರು. ಸತ್ಯದ ಹಾದಿಯಲ್ಲಿ ನಡೆಯುವುದನ್ನು ನಿಲ್ಲಿಸುವುದಿಲ್ಲ' ಎಂದು ಅದರಲ್ಲಿ ಬರೆಯಲಾಗಿದೆ. ರಾಹುಲ್ ಗಾಂಧಿ ಅವರ ಟ್ವೀಟ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗಾಂಧೀಜಿ ಅವರು ಬ್ರಿಟಿಷರ ವಿರುದ್ಧ ಆ ಕಾಲದಲ್ಲಿ ನಡೆಸಿದ್ದ ಸತ್ಯಾಗ್ರಹದಂತೆಯೇ, ಈ ಕಾಲದಲ್ಲಿ ಕೇಂದ್ರ ಸರ್ಕಾರದ ಅನ್ಯಾಯಗಳ ವಿರುದ್ಧ ರೈತರ ಹೋರಾಟ ನಡೆಯುತ್ತಿದೆ. ಎರಡೂ ಆಡಳಿತಗಳು ಸರ್ವಾಧಿಕಾರಿ ಧೋರಣೆ ಹೊಂದಿದ್ದವು. ಆಗ ಸತ್ಯಾಗ್ರಹ ಗೆದ್ದಂತೆ, ಈಗಲೂ ಹೋರಾಟಕ್ಕೆ ಗೆಲುವು ಸಿಗಲಿದೆ ಎಂದು ಅನೇಕರು ಹೇಳಿದ್ದಾರೆ. ಗಾಂಧೀಜಿ ಅವರ ಜನ್ಮದಿನದಂದು ಅವರನ್ನು ಯೋಗ್ಯ ರೀತಿಯಲ್ಲಿ ಸ್ಮರಿಸುವ ಬದಲು, ಅವರ ತತ್ವ ಆದರ್ಶಗಳನ್ನು ಮೂಲೆಗುಂಪು ಮಾಡಿದ ಕಾಂಗ್ರೆಸ್ ಪಕ್ಷದ ನಾಯಕ, ಈ ಸಂದರ್ಭದಲ್ಲಿಯೂ ತನ್ನ ರಾಜಕೀಯ ಲಾಭಕ್ಕಾಗಿ ರೈತರ ಪ್ರತಿಭಟನೆಯನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಅನೇಕರು ಟೀಕಿಸಿದ್ದಾರೆ. ಪಕ್ಷದಲ್ಲಿ ನಾಯಕತ್ವವೇ ಇಲ್ಲ ಎಂದು ಹೇಳಿದ್ದಕ್ಕೆ ಕಪಿಲ್ ಸಿಬಲ್ ಅವರ ಮನೆಯ ಮೇಲೆ ದಾಳಿ ಮಾಡಲಾಗಿದೆ. ಇದರ ಬಗ್ಗೆ ರಾಹುಲ್ ಗಾಂಧಿ ಚಕಾರವೆತ್ತಿಲ್ಲ. ಪಕ್ಷದೊಳಗಿನ ಸಮಸ್ಯೆಗಳನ್ನು ಬಗೆಹರಿಸಲು ಅವರಿಗೆ ಸಾಧ್ಯವಾಗಿಲ್ಲ. ಇನ್ನು ದೇಶಕ್ಕೆ ಯಾವ ರೀತಿ ಕೊಡುಗೆ ನೀಡುತ್ತಾರೆ? ಪಕ್ಷದಲ್ಲಿನ ಭಿನ್ನಾಭಿಪ್ರಾಯವನ್ನೇ ಸಹಿಸದ ಅವರು, ಮಹಾತ್ಮ ಗಾಂಧಿ ಅವರನ್ನು ಬಳಸಿಕೊಳ್ಳುತ್ತಿರುವುದು ನಾಚಿಕೆಗೇಡು ಎಂದು ಟೀಕಿಸಿದ್ದಾರೆ.


from India & World News in Kannada | VK Polls https://ift.tt/3or0PVB

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...