ಮೂಲೆಗುಂಪಾಗಿರುವ ಎಂಇಎಸ್‌ ತನ್ನ ಅಸ್ತಿತ್ವಕ್ಕಾಗಿ ಕನ್ನಡಿಗರನ್ನು ಕೆಣಕುತ್ತಿದೆ; ಎಚ್‌ಡಿಕೆ ಆಕ್ರೋಶ

ಬೆಂಗಳೂರು: ಜಿಲ್ಲೆಯಲ್ಲಿ ಎಂಇಎಸ್‌ ಪುಂಡರು ನಡೆಸುವ ಪುಂಡಾಟಿಕೆಗಳನ್ನು ಖಂಡಾತುಂಡವಾಗಿ ವಿರೋಧಿಸುವ ರಾಜಕೀಯ ನಾಯಕರುಗಳ ಪೈಕಿ ಮಾಜಿ ಮುಖ್ಯಮಂತ್ರಿ ಪ್ರಮುಖರು. ಇದೀಗ ಮತ್ತೊಮ್ಮೆ ಬೆಳಗಾವಿಯಲ್ಲಿ ಬಾಲಬಿಚ್ಚಿರುವ ಎಂಇಎಸ್‌ ಪುಂಡರ ಕೃತ್ಯದ ವಿರುದ್ಧ ಎಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಎಚ್‌ಡಿ ಕುಮಾರಸ್ವಾಮಿ, ಕಳೆದ ಹಲವು ಚುನಾವಣೆಗಳಲ್ಲಿ ರಾಜಕೀಯವಾಗಿ ಮುಖಭಂಗ ಅನುಭವಿಸಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ- ಎಂಇಎಸ್, ಈಗ ಕನ್ನಡ ರಾಜ್ಯೋತ್ಸವ ಹತ್ತಿರಕ್ಕೆ ಬಂದ ಸಂದರ್ಭದಲ್ಲೇ ಪುಂಡಾಟಿಕೆ ಶುರು ಮಾಡಿದೆ. ಕನ್ನಡ ಅಸ್ಮಿತೆಯನ್ನೇ ಕೆಣಕುವ, ಕನ್ನಡಿಗರನ್ನು ಅಪಮಾನಿಸುವ ಹೇಯ ಕೆಲಸಕ್ಕೆ ಮುಂದಾಗಿದೆ. ಕೆಲ ದಿನಗಳಿಂದ ಬೆಳಗಾವಿಯಲ್ಲಿ ಕನ್ನಡಿಗರನ್ನು ವಿನಾಕಾರಣ ಕೆಣಕುತ್ತಿದೆ. ಪ್ರತಿಭಟನೆಯ ವೇಳೆ ಕರ್ನಾಟಕ ಸರಕಾರವನ್ನು ಎಂಇಎಸ್ ಪುಂಡರು ಗೇಲಿ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಅಲ್ಲಿನ ಸರಕಾರಿ ಕಚೇರಿಗಳಲ್ಲಿ ದಾಖಲೆಗಳನ್ನು ಮರಾಠಿ ಭಾಷೆಯಲ್ಲೇ ಕೊಡಬೇಕು ಎಂದು ಒತ್ತಾಯಿಸುವ ಭರದಲ್ಲಿ ಕರ್ನಾಟಕ ಸರಕಾರವನ್ನು ʼನಾಲಾಯಕ್ʼ ಎಂದು ಕರೆದು ʼಜೈ ಮಹಾರಾಷ್ಟ್ರʼ ಎಂದು ಘೋಷಣೆ ಕೂಗಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ಖಂಡನೀಯ ಎಂದಿರುವ ಕುಮಾರಸ್ವಾಮಿ, ರಾಜಕೀಯವಾಗಿ ಮೂಲೆ ಗುಂಪಾಗಿರುವ ಎಂಇಎಸ್ , ತಮ್ಮ ಅಸ್ತಿತ್ವಕ್ಕಾಗಿ ಬೆಳಗಾವಿಯಲ್ಲಿ ಗೊಂದಲ, ಗದ್ದಲ ಉಂಟು ಮಾಡುತ್ತಿದೆ. ಭಾಷಾ ಭ್ರಾತೃತ್ವ, ಸ್ನೇಹಶೀಲತೆ ಹಾಗೂ ಶಾಂತಿ ಸಹನೆಗೆ ಹೆಸರಾಗಿರುವ ಕುಂದಾ ನಗರಿಯ ಪ್ರತಿಷ್ಠೆಯನ್ನು ಹಾಳು ಮಾಡುವ ದುರುದ್ದೇಶ ಇವರಿಗಿದೆ ಎಂದು ಹೇಳಿದ್ದಾರೆ. ಅಲ್ಲದೇ, ನಾಡು ನುಡಿಯ ವಿಷಯದಲ್ಲಿ ರಾಜ್ಯ ಸರಕಾರ ಅಲಕ್ಷ್ಯ ಮಾಡಲೇಬಾರದು. ಕನ್ನಡವನ್ನು ಅಪಮಾನಿಸುವ ಈ ಪುಂಡರಿಗೆ ತಕ್ಕ ಶಾಸ್ತಿ ಮಾಡಬೇಕು ಎಂದು ನಾನು ಸರಕಾರವನ್ನು ಒತ್ತಾಯ ಮಾಡುತ್ತೇನೆ ಎಂದು ಎಚ್‌ಡಿಕೆ ಆಗ್ರಹಿಸಿದ್ದಾರೆ.


from India & World News in Kannada | VK Polls https://ift.tt/3jGPKwb

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...