ರೆಸಾರ್ಟ್‌ನಲ್ಲಿ ಬಡಿದಾಟ: ಆನಂದ್ ಸಿಂಗ್-ಕಂಪ್ಲಿ ಗಣೇಶ್ ನಡುವೆ ರಾಜಿ ಸಂಧಾನ

ಬೆಂಗಳೂರು: ಎರಡು ವರ್ಷಗಳ ಹಿಂದೆ ಬಿಡದಿಯ ಈಗಲ್ಟನ್ ರೆಸಾರ್ಟ್‌ನಲ್ಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಮತ್ತು ಈಗ ಸಚಿವರಾಗಿರುವ ನಡುವೆ ನಡೆದಿದೆ. ಹೀಗಾಗಿ ಈ ಪ್ರಕರಣವನ್ನು ಹೈಕೋರ್ಟ್ ಏಕಸದಸ್ಯ ಪೀಠ ರದ್ದುಗೊಳಿಸಿದೆ. ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅವರ ಪರ ವಕೀಲ ಎ.ಎಸ್. ಪೊನ್ನಣ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ಅವರ ಏಕಸದಸ್ಯ ಪೀಠ ಸೋಮವಾರ ಅಂಗೀಕರಿಸಿದೆ. 'ಈ ಪ್ರಕರಣದಲ್ಲಿ ಕೊಲೆ ಯತ್ನದ (ಸೆಕ್ಷನ್ 307) ಉದ್ದೇಶ ಎಲ್ಲಿಯೂ ಕಂಡುಬರುತ್ತಿಲ್ಲ. ಇದು ಆ ಕ್ಷಣಕ್ಕೆ ಘಟಿಸಿದ ಘಟನೆಯಷ್ಟೇ. ಈ ಕುರಿತಾದ ವೈದ್ಯಕೀಯ ವರದಿ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ (ಎಫ್‌ಎಸ್‌ಎಲ್‌) ವರದಿ ಹಾಗೂ ಇತರೆ ಸಾಕ್ಷ್ಯಗಳು ಕೂಡ ಇದನ್ನು ದೃಢಪಡಿಸುತ್ತಿವೆ. ಹೀಗಾಗಿ ಪ್ರಕರಣವನ್ನು ರದ್ದುಗೊಳಿಸಬಹುದು' ಎಂದು ವಕೀಲ ಎ.ಎಸ್. ಪೊನ್ನಣ್ಣ ವಾದಿಸಿದ್ದರು. 'ಕೊಲೆ ಯತ್ನ ಆರೋಪ ಇದ್ದ ಕಾರಣದಿಂದ ರಾಜಿ ಸಂಧಾನ ಸಾಧ್ಯವಾಗಿರಲಿಲ್ಲ. ಇದು ಕೇವಲ ಹಣಕಾಸಿನ ವಿಚಾರವಾಗಿ ನಡೆದಿದ್ದ ಜಗಳ. ಆರೋಪಿ ಮತ್ತು ದೂರುದಾರರು ಈಗಾಗಲೇ ರಾಜಿ ಮಾಡಿಕೊಳ್ಳಲು ಒಪ್ಪಿಕೊಂಡಿದ್ದಾರೆ. ಹೀಗಾಗಿ ಸೆಕ್ಷನ್ 307 ಅನ್ವಯವಾಗುವುದಿಲ್ಲ' ಎಂದು ತಿಳಿಸಿದ್ದರು. ಇದನ್ನು ಪರಿಗಣಿಸಿದ ನ್ಯಾಯಾಲಯ, ಕಂಪ್ಲಿ ಗಣೇಶ್ ವಿರುದ್ಧ ದಾಖಲಿಸಿದ್ದ ಎಫ್‌ಐಆರ್ ಮತ್ತು ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಯನ್ನು ರದ್ದುಗೊಳಿಸಲು ಆದೇಶಿಸಿದೆ. ಏನಿದು ಘಟನೆ?2019ರ ಜನವರಿ 19ರಂದು ಬಿಡದಿಯ ಈಗಲ್ಟನ್ ರೆಸಾರ್ಟ್‌ನಲ್ಲಿ ರಾತ್ರಿ ಕಂಪ್ಲಿ ಶಾಸಕ ಗಣೇಶ್ ಮತ್ತು ವಿಜಯನಗರ ಶಾಸಕ ಆನಂದ್ ಸಿಂಗ್ ನಡುವೆ ಭಾರಿ ಗಲಾಟೆ ನಡೆದಿತ್ತು. ತಮ್ಮ ಶಾಸಕರನ್ನು 'ಆಪರೇಷನ್ ಕಮಲ'ದಿಂದ ಉಳಿಸಿಕೊಳ್ಳಲು ಪಕ್ಷದ ನಾಯಕರು ಕಡೆ ಅವರನ್ನು ಕರೆದೊಯ್ದಿದ್ದರು. ಈ ಸಂದರ್ಭದಲ್ಲಿ ಇಬ್ಬರೂ ಹೊಡೆದಾಡಿಕೊಂಡಿದ್ದರು. ಗಾಯಗೊಂಡಿದ್ದ ಆನಂದ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆನಂದ್ ಸಿಂಗ್ ಅವರು ಸಲ್ಲಿಸಿದ್ದ ದೂರಿನ ಅನ್ವಯ ಬಿಡದಿ ಪೊಲೀಸರು ಹಲ್ಲೆ ಮತ್ತು ಕೊಲೆ ಯತ್ನ ಆರೋಪಗಳಡಿ ಎಫ್‌ಐಆರ್ ದಾಖಲಿಸಿದ್ದರು. ಶಾಸಕರು ಮತ್ತು ಸಂಸದರ ವಿರುದ್ಧದ ಅಪರಾಧ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ ಈ ಪ್ರಕರಣದ ವಿಚಾರಣೆ ನಡೆಸುತ್ತಿತ್ತು. ಘಟನೆ ನಡೆದ ಸಂದರ್ಭದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿತ್ತು. ಆನಂದ್ ಸಿಂಗ್ ಅವರು ಕಾಂಗ್ರೆಸ್ ಶಾಸಕರಾಗಿದ್ದರು. ಒಂದೇ ಪಕ್ಷದ ಇಬ್ಬರು ಶಾಸಕರ ಬಡಿದಾಟ ತೀವ್ರ ಭಾರಿ ಸದ್ದು ಮಾಡಿತ್ತು. ತಮ್ಮ ವಿರುದ್ಧ ಎಫ್‌ಐಆರ್ ದಾಖಲಾಗುತ್ತಿದ್ದಂತೆ ಗಣೇಶ್ ತಲೆಮರೆಸಿಕೊಂಡಿದ್ದರು. ಅವರ ಪತ್ತೆಗೆ ತೀವ್ರ ಹುಡುಕಾಟ ನಡೆಸಿದ್ದ ಬಿಡದಿ ಪೊಲೀಸರು, ಸುಮಾರು ಒಂದು ತಿಂಗಳ ಬಳಿಕ ಗುಜರಾತ್‌ನಲ್ಲಿ ಅವರನ್ನು ಬಂಧಿಸಿದ್ದರು. ಕೆಲವು ದಿನಗಳ ಬಳಿಕ ಗಣೇಶ್, ಜೈಲಿನಿಂದ ಬಿಡುಗಡೆಯಾಗಿದ್ದರು.


from India & World News in Kannada | VK Polls https://ift.tt/3AfpDlw

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...