ಸುಳ್ಯ ನ್ಯಾಯಾಲಯಕ್ಕೆ ಸಾಕ್ಷಿ ನುಡಿಯಲು ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಮಂಗಳೂರು: 'ನಾನು ಇಂಧನ ಸಚಿವನಾಗಿದ್ದ ಸಂದರ್ಭದಲ್ಲಿ ಯಾವುದೋ ವ್ಯಕ್ತಿ ಕರೆ ಮಾಡಿ ಬಾಯಿಗೆ ಬಂದಂತೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ನಂತರ ಅಧಿಕಾರಿಗಳು ದೂರು ದಾಖಲಿಸಿದ್ದರು. ನಂತರ ಆತ ಆ ಅಧಿಕಾರಿಗಳಿಗೂ ನಿಂದನೆ ಮಾಡಿದ್ದ. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಯಾಗಿ ಬರಬೇಕು ಎಂದು ನ್ಯಾಯಾಲಯ ಸೂಚಿಸಿದೆ. ಮೊದಲ ಬಾರಿಗೆ ನನಗೆ ತಿಳಿದಿರಲಿಲ್ಲ. ಹೀಗಾಗಿ ನ್ಯಾಯಾಲಯಕ್ಕೆ ತಲೆಬಾಗಿ ಈಗ ಆಗಮಿಸಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಸುಳ್ಯದ ಕೋರ್ಟ್‌ಗೆ ಹಾಜರಾಗಿ ಸಾಕ್ಷಿ ನುಡಿಯಲು ಬಂದಿದ್ದ ಅವರು, ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಇದೇ ವೇಳೆ ಕೃಷಿ ಕಾಯ್ದೆ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತು ಮಾತನಾಡಿದ ಡಿಕೆಶಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ, ಪ್ರತಿಭಟನೆ ನಮ್ಮ ಹಕ್ಕು. ಅಹಿಂಸೆ ಮಾರ್ಗದಲ್ಲಿ ಹೋರಾಟ ಮಾಡುವುದು ಗಾಂಧೀಜಿ ಅವರು ನಮಗೆ ಹೇಳಿಕೊಟ್ಟ ಪಾಠ. ರೈತರು ಕಳೆದ 10 ತಿಂಗಳಿಂದ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದು, ಪ್ರಧಾನಮಂತ್ರಿಗಳಾಗಲಿ, ಮಂತ್ರಿಗಳಾಗಲಿ ಯಾರೂ ರೈತರನ್ನು ಭೇಟಿ ಮಾಡಿ ಮಾತನಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇನ್ನು ಉತ್ತರಪ್ರದೇಶದ ಲಖಿಮ್‌ಪುರ್ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕಾರ್ ಹರಿಸಿ ಹತ್ಯೆಗೈದ ಬಿಜೆಪಿ ಶಾಸಕನ ಪುತ್ರನ ಅಟ್ಟಹಾಸದ ಕುರಿತು ಮಾತನಾಡಿದ ಶಿವಕುಮಾರ್, ಕೇಂದ್ರ ಸಚಿವರ ಮಗ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿಸಿ 4 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಜನ ದಾಳಿ ಮಾಡಿದ್ದಾರೆ. ಇದು ಕೂಡ ನಡೆಯಬಾರದ ಘಟನೆ. ಆದರೆ ಇದಕ್ಕೆ ಕಾರಣರಾದವರನ್ನು ಬಂಧಿಸಿಲ್ಲ, ಮಂತ್ರಿ ರಾಜೀನಾಮೆ ನೀಡಿಲ್ಲ, ಇದು ಒಂದು ಸರ್ಕಾರನಾ?' ಎಂದು ಡಿ.ಕೆ.ಶಿವಕುಮಾರ್ ಕಿಡಿಕಾರಿದರು. ಅಲ್ಲದೇ, ಮೃತ ರೈತರ ಕುಟುಂಬಕ್ಕೆ ಸಾಂತ್ವನ ಹೇಳಲು ಮುಂದಾಗಿದ್ದ ನಮ್ಮ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಸಾಂತ್ವನ ಹೇಳುವುದು ರಾಜಕೀಯ ಕರ್ತವ್ಯ. ಅದನ್ನು ಮಾಡಲು ಹೋದರೆ ಪುರುಷ ಪೊಲೀಸ್ ಅಧಿಕಾರಿಗಳು ಎಳೆದಾಡಿ ಅವರ ಹಕ್ಕನ್ನು ಕಸಿದಿದ್ದಾರೆ. ಇದು ಇಡೀ ಭಾರತೀಯ ಸಂಸ್ಕೃತಿಗೆ ಮಾಡಿದ ಅಪಮಾನ' ಎಂದು ಅಸಮಾಧಾನ ವ್ಯಕ್ತಪಡಿಸಿದರು.


from India & World News in Kannada | VK Polls https://ift.tt/3Aazqtg

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...