ಬಂಟ್ವಾಳ: ಬಿಜೆಪಿ ಮುಖಂಡನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ತಾಲೂಕಿನ ಬಡಗ ಬೆಳ್ಳೂರು ಸಮೀಪ ನಡೆದಿದೆ. ಬಂಟ್ವಾಳ ತಾಲೂಕು ಬಡಗ ಬೆಳ್ಳೂರು ನಿವಾಸಿ ಬಿಜೆಪಿಯ ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಆಗಿರುವ ಪ್ರಕಾಶ್ ಬೆಳ್ಳೂರು ಅವರ ಮೇಲೆ ಯುವಕರ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿದ್ದು, ಸದ್ಯ ಗಂಭೀರ ಸ್ಥಿತಿಯಲ್ಲಿರುವ ಪ್ರಕಾಶ್ ಬೆಳ್ಳೂರು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೆ ಊರಿನ ನಿತಿನ್ ಬಡಗ ಬೆಳ್ಳೂರು ಮತ್ತು ನಿಶಾಂತ್ ಬಡಗ ಬೆಳ್ಳೂರು, ಪವನ್ ಕುಮ್ಡೇಲ್ ಹಾಗೂ ಇನ್ನಿತರರು ಸೇರಿ ಪ್ರಕಾಶ್ ಬೆಳ್ಳೂರು ಮನೆಯೊಳಗೆ ನುಗ್ಗಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕಾಶ್ ಬೆಳ್ಳೂರು ಅವರ ಮೇಲೆ ತಲವಾರು ಮತ್ತು ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪಿಗಳಾದ ನಿತಿನ್ ಬಡಗ ಬೆಳ್ಳೂರು ಮತ್ತು ನಿಶಾಂತ್ ಬಡಗ ಬೆಳ್ಳೂರು, ಪವನ್ ಕುಮ್ಡೇಲ್ ಹಾಗೂ ಇನ್ನಿತರರು ಹಿಂದೂ ಪರ ಸಂಘಟನೆಯೊಂದಕ್ಕೆ ಸೇರಿದ ಕಾರ್ಯಕರ್ತರು ಎನ್ನಲಾಗಿದ್ದು, ಬಿಜೆಪಿಯ ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯ ಮೇಲೆಯೇ ತಲವಾರಿನಿಂದ ಕೊಲೆ ಯತ್ನಕ್ಕೆ ಪ್ರಯತ್ನಿಸಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಸದ್ಯ ಗಾಯಾಳು ಪ್ರಕಾಶ್ ಬೆಳ್ಳೂರು ಅವರನ್ನು ಬಂಟ್ವಾಳದ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೇಲ್ನೋಟಕ್ಕೆ ವೈಯಕ್ತಿಕ ಕಾರಣಕ್ಕೆ ಆರೋಪಿಗಳು ಪ್ರಕಾಶ್ ಬೆಳ್ಳೂರು ಅವರ ಕೊಲೆಗೆ ಪ್ರಯತ್ನಿಸಿದ್ದಾರೆಂದು ತಿಳಿದು ಬಂದಿದ್ದು, ಘಟನೆ ಮತ್ತು ಅದಕ್ಕೆ ಕಾರಣ ಏನೆಂಬುದು ಇನ್ನಷ್ಟೇ ತಿಳಿದು ಬರಬೇಕಿದೆ. ಪ್ರಕರಣ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.
from India & World News in Kannada | VK Polls https://ift.tt/3BjWPce