ಇಂದು ಮಹಾತ್ಮ ಗಾಂಧಿ, ಲಾಲ್‌ ಬಹದ್ದೂರ್ ಶಾಸ್ತ್ರಿ ಜನ್ಮದಿನ; ಮೋದಿ ಸೇರಿದಂತೆ ಗಣ್ಯರಿಂದ ನಮನ

ಹೊಸದಿಲ್ಲಿ: ದೇಶಾದ್ಯಂತ ಇಂದು ಮಹಾತ್ಮ ಗಾಂಧೀಜಿ ಅವರ 152ನೇ ಜನ್ಮದಿನವನ್ನು ಮತ್ತು ಮಾಜಿ ಪ್ರಧಾನ ಮಂತ್ರಿ ಲಾಲ್‌ಬಹದ್ದೂರ್ ಶಾಸ್ತ್ರಿ ಅವರ 117 ಜನ್ಮದಿನವನ್ನು ಆಚರಣೆ ಮಾಡಲಾಗ್ತಿದೆ. ಮಹಾತ್ಮ ಹಿನ್ನೆಲೆ ದೇಶಾದ್ಯಂತ ಇಂದು ಸ್ವಚ್ಛತಾ ಕಾರ್ಯಾಗರವನ್ನು ಹಮ್ಮಿಕೊಳ್ಳಲಾಗಿದ್ದು, ಗಾಂಧೀಜಿಗೆ ನಮನ ಸಲ್ಲಿಸುವ ಸಲುವಾಗಿ ಪ್ರಧಾನಿ ಟ್ವೀಟ್‌ ಮೂಲಕ ರಾ‍ಷ್ಟ್ರಪಿತನಿಗೆ ಗೌರವ ಸಮರ್ಪಿಸಿದ್ದಾರೆ. ತಮ್ಮ ಟ್ವೀಟ್‌ನಲ್ಲಿ ಅವರು, ‘ಮಹಾತ್ಮ ಗಾಂಧಿಯವರ ಜನ್ಮದಿನದ ಸಂದರ್ಭದಲ್ಲಿ ಅವರಿಗೆ ವಿನಮ್ರ ಶ್ರದ್ಧಾಂಜಲಿಯನ್ನು ಅರ್ಪಿಸುತ್ತೇನೆ. ಬಾಪೂ ಅವರ ಜೀವನ ಮತ್ತು ಆದರ್ಶ ದೇಶದ ಪ್ರತಿಯೊಬ್ಬರೂ ಕರ್ತವ್ಯ ಮಾರ್ಗದಲ್ಲಿ ಸಾಗಲು ಪ್ರೇರಣೆ ನೀಡುತ್ತದೆ. ಗಾಂಧಿಯವರ ಆದರ್ಶ ತತ್ವಗಳು ಜಾಗತಿಕವಾಗಿ ಪ್ರಸ್ತುತವಾಗಿದ್ದು, ಕೋಟ್ಯಂತರ ಜನಕ್ಕೆ ಪ್ರೇರಣೆಯಾಗುತ್ತದೆ ಎಂದು ಕೊಂಡಾಡಿದ್ದಾರೆ. ಇನ್ನು ಮಾಜಿ ಪ್ರಧಾನಿ ಅವರನ್ನೂ ನೆನಪಿಸಿಕೊಂಡಿರುವ ಮೋದಿ, ‘ಮೌಲ್ಯಗಳು ಮತ್ತು ತತ್ವಗಳನ್ನಾದರಿಸಿದ ಶಾಸ್ತ್ರಿ ಅವರ ಜೀವನವು ದೇಶವಾಸಿಗಳಲ್ಲಿ ಸ್ಪೂರ್ತಿಯ ಸೆಲೆಯಾಗಿ ನಿಲ್ಲುತ್ತದೆ’ ಎಂದು ಟ್ವೀಟ್ ಮಾಡಿದ್ದಾರೆ. ಬೆಳಗ್ಗೆ ಏಳು ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಅವರ ಸ್ಮಾರಕಕ್ಕೆ ತೆರಳಿ ಪುಷ್ಪಾರ್ಚನೆ ಮಾಡಿ ಗಾಂಧೀಜಿ ಅವರಿಗೆ ನಮನ ಸಲ್ಲಿಸಿದ್ದಾರೆ. ಅಲ್ಲಿಂದ ವಿಜಯ್‌ ಘಾಟ್‌ನಲ್ಲಿರುವ ಮಾಜಿ ಪ್ರಧಾನ ಮಂತ್ರಿ ಲಾಲ್‌ಬಹದ್ದೂರ್ ಶಾಸ್ತ್ರಿ ಅವರ ಸ್ಮಾರಕಕ್ಕೆ ತೆರಳಿ ಶಾಸ್ತ್ರಿ ಅವರಿಗೆ ನಮಿಸಿದ್ದಾರೆ. ಇದೇ ವೇಳೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೂಡ ಬೆಳಗ್ಗೆ ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧೀಜಿ ಅವರ ಸ್ಮಾರಕಕ್ಕೆ ತೆರಳಿ ಪುಷ್ಪಾರ್ಚನೆ ಮಾಡಿ ಮಹಾತ್ಮ ಗಾಂಧಿಗೆ ನಮನ ಸಲ್ಲಿಸಿದ್ದಾರೆ. ಬಳಿಕ ವಿಜಯ್‌ ಘಾಟ್‌ನಲ್ಲಿರುವ ಮಾಜಿ ಪ್ರಧಾನ ಮಂತ್ರಿ ಲಾಲ್‌ಬಹದ್ದೂರ್ ಶಾಸ್ತ್ರಿ ಅವರ ಸ್ಮಾರಕಕ್ಕೆ ತೆರಳಿ ಶಾಸ್ತ್ರಿ ಅವರಿಗೆ ವಂದಿಸಿದ್ದಾರೆ. ಇನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬೆಳಗ್ಗೆ ದೆಹಲಿಯ ರಾಜ್ ಘಾಟ್‌ನಲ್ಲಿರುವ ಗಾಂಧಿ ಪ್ರತಿಮೆ ಬಳಿ ತೆರಳಿ ಪುಷ್ಪಗುಚ್ಛವಿರಿಸಿ ಗೌರವ ನಮನ ಸಲ್ಲಿಸಿದ್ದಾರೆ. ಅದರ ಬೆನ್ನಲ್ಲೇ ವಿಜಯ್‌ ಘಾಟ್‌ಗೆ ತೆರಳಿ ಶಾಸ್ತ್ರಿ ಅವರಿಗೂ ನಮಿಸಿದ್ದಾರೆ. ಇದರ ಜೊತೆಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕ ಗಣ್ಯರು ದೇಶದ ಇಬ್ಬರು ಮಹಾನ್ ನಾಯಕರ ಸ್ಮಾರಕಕ್ಕೆ ತೆರಳಿ ಗೌರವ ಸಲ್ಲಿಸಿದ್ದಾರೆ.


from India & World News in Kannada | VK Polls https://ift.tt/3A6qFjI

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...