ಹುಬ್ಬಳ್ಳಿ: ಜೆಡಿಎಸ್‌ಗೆ ಯಾವತ್ತಿದ್ದರೂ ಪಕ್ಷವೇ ಟಾರ್ಗೆಟ್ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಹುಬ್ಬಳ್ಳಿಯಲ್ಲಿ ಗುರುವಾರ ಆರೋಪಿಸಿದರು. ಹಾನಗಲ್ ಮತ್ತು ಸಿಂದಗಿ ವಿಧಾನಸಭೆ ಉಪ ಚುನಾವಣೆಗಳಲ್ಲಿ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ ವಿಚಾರವಾಗಿ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಜೆಡಿಎಸ್‌ಗೆ ಯಾವತ್ತಿದ್ರೂ ಕಾಂಗ್ರೆಸ್ ಟಾರ್ಗೆಟ್. ಹಿಂದೆ ಬಸವಕಲ್ಯಾಣದಲ್ಲೂ ಹಾಗೆ ಮಾಡಿದ್ರು, ಈಗಲೂ ಹಾಗೆ ಮಾಡಿದ್ದಾರೆ ಎಂದು ಕಿಡಿಕಾರಿದರು. ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದರೆ ಖಂಡಿತಾ ತಪ್ಪಿಲ್ಲ. ಆದರೆ ಅವರು ಮಂಡ್ಯ ಮತ್ತು ಹಾಸನದಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಲಿ. ಉಪ ಚುನಾವಣೆಯಲ್ಲಿ ಬಿಜೆಪಿಗೆ ನೆರವಾಗಲು ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿದೆ ಎಂದು ಆರೋಪಿಸಿದರು. ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್‌ನಷ್ಟೇ ಕಾಂಗ್ರೆಸ್ ಕೂಡ ಶಕ್ತಿಯುತವಾಗಿದೆ. ಅದೇ ಕಾರಣಕ್ಕೆ ಕಾಂಗ್ರೆಸ್ ಅನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದರು. ಆರ್‌ಎಸ್‌ಎಸ್ ವಿರುದ್ಧ ಮತ್ತೆ ವಾಗ್ದಾಳಿ ಕಳೆದ ಕೆಲವು ದಿನಗಳಿಂದ ವಿರುದ್ಧ ಟೀಕಾಪ್ರಹಾರ ನಡೆಸುತ್ತಿರುವ ಸಿದ್ದರಾಮಯ್ಯ, ಮತ್ತೆ ಸಂಘಟನೆ ವಿರುದ್ಧ ವಾಗ್ದಾಳಿ ನಡೆಸಿದರು. ಆರ್‌ಎಸ್‌ಎಸ್ ಒಂದು ಕೋಮುವಾದಿ ಸಂಘಟನೆ. ಸಮಾಜದಲ್ಲಿ ಅಶಾಂತಿ ನಿರ್ಮಾಣ ಮಾಡುವ ಕೆಲಸವನ್ನು ಆರ್‌ಎಸ್‌ಎಸ್ ಮಾಡುತ್ತಿದೆ. ಹಿಂದೂಗಳನ್ನ ಮುಸ್ಲಿಮರ ವಿರುದ್ದ ಎತ್ತಿ ಕಟ್ಟುವುದು, ಸಮಾಜದಲ್ಲಿ ಅಶಾಂತಿ ನಿರ್ಮಿಸುವ ಕೆಲಸವನ್ನು ಮೊದಲಿನಿಂದಲೂ ಮಾಡುತ್ತಿದೆ ಎಂದು ಆರೋಪಿಸಿದರು. ಆರ್‌ಎಸ್‌ಎಸ್‌ನ ಮುಖವಾಡವೇ ಬಿಜೆಪಿ. ಆರ್‌ಎಸ್‌ಎಸ್‌ನವರು ಏನು ನಿರ್ದೇಶನ ಕೊಡುತ್ತಾರೋ, ಅದನ್ನು ಬಿಜೆಪಿ ಮಾಡುತ್ತದೆ ಎಂದು ಟೀಕಿಸಿದರು. ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ದಿನದಿಂದ ದಿನಕ್ಕೆ ಬೆಲೆ ಏರಿಕೆಯಿಂದ ಜನರು ರೋಸಿ ಹೋಗಿದ್ದಾರೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರೇ ಹೊಣೆ. ರಾಜ್ಯ ಸರ್ಕಾರ ಇಲ್ಲಿ ತಮಟೆ ಹೊಡೆದುಕೊಂಡು ಕುಳಿತಿದೆ ಎಂದು ವ್ಯಂಗವಾಡಿದರು. ದಿಲ್ಲಿಗೆ ತೆರಳಿ ಸೋನಿಯಾ ಗಾಂಧಿ ಭೇಟಿ ಮಾಡಿದ ವಿಚಾರದ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ರಾಜಕಾರಣ ಬಗ್ಗೆ ಚರ್ಚಿಸಲು ಭೇಟಿಯಾಗಿದ್ದೆ. ಅಲ್ಲಿ ರಾಷ್ಟ್ರ ರಾಜಕಾರಣದ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಸೋನಿಯಾ ಗಾಂಧಿ ರಾಷ್ಟ್ರ ರಾಜಕಾರಣಕ್ಕೆ ಕರೆದೂ ಇಲ್ಲ. ಆ ಬಗ್ಗೆ ಯಾವುದೇ ಚರ್ಚೆನೂ ಮಾಡಿಲ್ಲ ಎಂದು ವರದಿಗಳನ್ನು ಅಲ್ಲಗಳೆದರು.
from India & World News in Kannada | VK Polls https://ift.tt/3oERARv