ಲಖೀಂಪುರ ಖೇರಿ : ಬಿಜೆಪಿಯೆಡೆ ಮಲ್ಲಿಕಾರ್ಜುನ ಖರ್ಗೆ ತೂರಿದ ನಾಲ್ಕು ಬಾಣಗಳು!

ಬೆಂಗಳೂರು: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾತ್ಮಕ ಘಟನೆಯನ್ನು ಕಟು ಶಬ್ಧಗಳಲ್ಲಿ ಟೀಕಿಸಿರುವ ರಾಜ್ಯಸಭಾ ವಿಪಕ್ಷ ನಾಯಕ ಹಾಗೂ ಹಿರಿಯ ಕಾಂಗ್ರೆಸ್ ನೇತಾರ , ಕೇಂದ್ರ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರಗಳು ರೈತರ ಮೇಲೆ ತೀವ್ರವಾದ ದಬ್ಬಾಳಿಕೆ ನಡೆಸುತ್ತಿದೆ ಎಂದು ಹರಿಹಾಯ್ದಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಖರ್ಗೆ, ರೈತರ ಪರ ಧ್ವನಿ ಎತ್ತಿದ ಅವರನ್ನು ಸರ್ಕಾರ ಅಕ್ರಮವಾಗಿ ಬಂಧನದಲ್ಲಿ ಇರಿಸಿದೆ ಎಂದು ಕಿಡಿಕಾರಿದರು. ಇದೇ ವೇಳೆ ರೈತರ ಮೇಲೆ ಕಾರು ಹಾಯಿಸಿದ ಸಚಿವರ ಪುತ್ರನನ್ನು ಇದುವರೆಗೂ ಬಂಧಿಸದಿರುವುದು ಕಾನೂನಿಗೆ ಮಾಡುತ್ತಿರುವ ಅಪಹಾಸ್ಯ ಎಂದು ಖರ್ಗೆ ಹರಿಹಾಯ್ದರು. ಕೇಂದ್ರದ ಮೂರು ಕೃಷಿ ಕಾಯ್ದೆಗಳ ಜಾರಿ ವಿರೋಧಿಸಿದ ರೈತರು ನ್ಯಾಯಯುತ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಅವರ ಬೇಡಿಕೆಗಳನ್ನು ಆಲಿಸುವ ಬದಲು ವಾಮಮಾರ್ಗದಲ್ಲಿ ಅವರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ ಎಂದು ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಪ್ರಿಯಾಂಕಾ ಅವರ ಬಂಧನ ಅಕ್ರಮ ಎಂದು ಖುದ್ದು ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಾಧೀಶರು ಹೇಳಿದ್ದಾರೆ. ಪ್ರಿಯಾಂಕಾ ಬಂಧನ ಪ್ರಕ್ರಿಯೆಯನ್ನು ಇಡೀ ದೇಶ ಪ್ರಶ್ನಿಸುತ್ತಿದೆ. ಆದರೆ ಸರ್ವಾಧಿಕಾರಿ ಮನೋಭಾವದ ಬಿಜೆಪಿ ಸರ್ಕಾರ ದೇಶದ ಜನರ ಕೂಗನ್ನು ಆಲಿಸುತ್ತಿಲ್ಲ ಎಂದು ಖರ್ಗೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ರೈತ ಹೋರಾಟದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಲಾಗುತ್ತಿದೆ. ಇಂತಹ ವಿಷಯದಲ್ಲಿ ರಾಜಕೀಯ ಮಾಡುವ ಅಗತ್ಯ ಕಾಂಗ್ರೆಸ್‌ಗೆ ಇಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದರು. ರೈತರ ಕುಟುಂಬಗಳನ್ನು ಭೇಟಿ ಮಾಡಲು ಅವಕಾಶ ನೀಡದ ಬಿಜೆಪಿ ಸರ್ಕಾರವೇ ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಖರ್ಗೆ ಆರೋಪಿಸಿದರು. ಬಿಜೆಪಿ ಆಡಳಿತಾವಧಿಯಲ್ಲಿ ಪ್ರಜಾಪ್ರಭುತ್ವಕ್ಕೆ ಅಪಾಯ ಎದುರಾಗಿದೆ. ಭಿನ್ನ ಧ್ವನಿಗಳನ್ನು ಅಡಗಿಸುವ ಬಿಜೆಪಿ ಹುನ್ನಾರ ಎಂದೂ ಸಫಲವಾಗದು ಎಂದು ಖರ್ಗೆ ಇದೇ ವೇಳೆ ಗುಡುಗಿದರು. ರೈತರ ನ್ಯಾಯುತ ಹೋರಾಟಕ್ಕೆ ಕಾಂಗ್ರೆಸ್ ಸದಾ ಬೆಂಬಲ ನೀಡಲಿದೆ ಎಂದೂ ಈ ವೇಳೆ ಖರ್ಗೆ ಸ್ಪಷ್ಟಪಡಿಸಿದರು. ಇನ್ನು ಆರ್‌ಎಸ್‌ಎಸ್ ಕುರಿತ ತಮ್ಮ ಅಭಿಪ್ರಾಯದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿರುವ ಖರ್ಗೆ, ಜೀವಮಾನವಿಡಿ ಆರ್‌ಎಸ್‌ಎಸ್‌ ಸಿದ್ಧಾಮತ ವಿರುದ್ಧ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಆರ್‌ಎಸ್‌ಎಸ್‌ ವಿರುದ್ಧ ನನ್ನ ಹೋರಾಟ ನಿರಂತರ ಎಂದು ಖರ್ಗೆ ಸ್ಪಷ್ಟ ನುಡಿಗಳಲ್ಲಿ ತಿಳಿಸಿದರು. ಒಟ್ಟಿನಲ್ಲಿ ದುರ್ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಲ್ಲಿಕಾರ್ಜುನ ಖರ್ಗೆ, ರೈತರ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ ಮುಂದುವರೆಯುವುದು ಎಂದು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಬಂಧನದಲ್ಲಿರುವ ಪ್ರಿಯಾಂಕಾ ಗಾಂಧಿ ಅವರನ್ನು ಬಿಡುಗಡೆ ಮಾಡುವಂತೆ ಖರ್ಗೆ ಒತ್ತಾಯಿಸಿದ್ದಾರೆ.


from India & World News in Kannada | VK Polls https://ift.tt/2YphCx1

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...