ಸಿಂದಗಿ, ಹಾನಗಲ್ ಬೈಎಲೆಕ್ಷನ್: ಬಿಜೆಪಿ ಅಭ್ಯರ್ಥಿಗಳಾಗಿ ರಮೇಶ್ ಭೂಸನೂರು, ಶಿವರಾಜ್ ಸಜ್ಜನರ್ ಹೆಸರು ಘೋಷಣೆ

ಬೆಂಗಳೂರು: ಹಾಗೂ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ ಆಗಿದೆ. ಸಿಂದಗಿ ಕ್ಷೇತ್ರಕ್ಕೆ ರಮೇಶ್ ಭೂಸನೂರು ಹಾಗೂ ಹಾನಗಲ್ ನಲ್ಲಿ ಶಿವರಾಜ್ ಸಜ್ಜನರ್ ಹೆಸರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಘೋಷಣೆ ಮಾಡಿದ್ದಾರೆ. ನಾಮಪತ್ರ ಸಲ್ಲಿಕೆಗೆ ಒಂದು ದಿನ ಮೊದಲು ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಈ ಎರಡು ಕ್ಷೇತ್ರಕ್ಕೆ ಹಲವು ಆಕಾಂಕ್ಷಿಗಳು ಇದ್ದರು. ಸಿಎಂ ಉದಾಸಿ ನಿಧನದಿಂದ ತೆರವಾದ ಹಾನಗಲ್‌ ಕ್ಷೇತ್ರದಲ್ಲಿ ರೇವತಿ ಉದಾಸಿ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಶಿವರಾಜ್ ಸಜ್ಜನರ್ ಅವರಿಗೆ ಟಿಕೆಟ್ ನೀಡಲಾಗಿದೆ. (ರಮೇಶ್ ಭೂಸನೂರು ಸಿಂದಗಿ ಅಭ್ಯರ್ಥಿ) ಈ ಎರಡೂ ಕ್ಷೇತ್ರದ ಉಪಚುನಾವಣೆಯನ್ನು ಬಿಜೆಪಿ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಹಾನಗಲ್ ಕ್ಷೇತ್ರವನ್ನು ಉಳಿಸಿಕೊಳ್ಳುವುದು ಬಿಜೆಪಿ ಪಾಲಿಗೆ ಪ್ರತಿಷ್ಠೆಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾಗಿರುವ ಹಿನ್ನೆಲೆಯಲ್ಲಿ ಈ ಕ್ಷೇತ್ರದ ಚುನಾವಣೆ ಮಹತ್ವ ಪಡೆದುಕೊಂಡಿದೆ. (ಶಿವರಾಜ್ ಸಜ್ಜನರ್ ಹಾವೇರಿ ಅಭ್ಯರ್ಥಿ) ಹಾನಗಲ್‌ನಲ್ಲಿ ದಿವಂಗತ ಸಿಎಂ ಉದಾಸಿ ಕುಟುಂಬಕ್ಕೆ ಟಿಕೆಟ್ ನೀಡಲಾಗುವುದು ಎನ್ನಲಾಗಿತ್ತು. ಆದರೆ ಕುಟುಂಬ ರಾಜಕೀಯದ ಬಗ್ಗೆ ಸಾಕಷ್ಟು ಚರ್ಚೆ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಪಕ್ಷ ಈ ನಿರ್ಧಾರ ಕೈಗೊಂಡಿದೆ. ಇನ್ನು ಸಿಂದಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಮನಗೊಳಿ ಹಾಗೂ ಹಾನಗಲ್‌ನಲ್ಲಿ ಶ್ರೀನಿವಾಸ್ ಮಾನೆ ಕಣಕ್ಕಿಳಿದಿದ್ದಾರೆ. ಅಕ್ಟೋಬರ್ 30 ರಂದು ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ.


from India & World News in Kannada | VK Polls https://ift.tt/3AmONP8

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...