ಬೆಂಗಳೂರು: ಹಾನಗಲ್ ಹಾಗೂ ಸಿಂದಗಿ ಉಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲೂ ಗೆಲ್ಲುವ ವಿಶ್ವಾಸವನ್ನು ರಾಜ್ಯ ಉಸ್ತುವಾರಿ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಅವರು, ಭಾನುವಾರ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಅಲ್ಲಿ ಅಭ್ಯರ್ಥಿ ಆಯ್ಕೆ ಕುರಿತಾಗಿ ಚರ್ಚೆ ನಡೆಯಲಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರು ಈ ಸಭೆಗೆ ಬರಲಿದ್ದಾರೆ ಎಂದು ತಿಳಿಸಿದರು. ಸಭೆಯಲ್ಲಿ ಚರ್ಚೆ ಆದ ಬಳಿಕ ಅಂತಿಮವಾಗಿ ಯಾರು ಅಭ್ಯರ್ಥಿ ಎಂದು ಬಿಜೆಪಿ ಕೇಂದ್ರಿಯ ಚುನಾವಣಾ ಸಮಿತಿಯಿಂದ ಅಂತಿಮಗೊಳಿಸಲಾಗುವುದು ಎಂದು ಅರುಣ್ ಸಿಂಗ್ ತಿಳಿಸಿದರು. ಅಕ್ಟೋಬರ್ 30 ರಂದು ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದೆ. ಬಿಜೆಪಿಯಿಂದ ಸಿಂದಗಿ ಕ್ಷೇತ್ರಕ್ಕೆ ಲಕ್ಷ್ಮಣ ಸವದಿ, ಚಿದಾನಂದ್ ಸವದಿ, ರಮೇಶ್ ಬೋಸನೂರ್ ಹೆಸರು ಚಾಲ್ತಿಯಲ್ಲಿದೆ. ಈ ಪೈಕಿ ಸವದಿ ಪುತ್ರ ಚಿದಾನಂದ ಸವದಿಗೆ ಟಿಕೆಟ್ ನೀಡುವಂತೆ ಒತ್ತಡವೂ ಹೆಚ್ಚಿದೆ. ಅದೇ ರೀತಿ ಸಿ.ಎಂ ಉದಾಸಿ ನಿಧನದಿಂದ ತೆರವಾದ ಹಾನಗಲ್ ಕ್ಷೇತ್ರಕ್ಕೆ, ಸಿಎಂ ಉದಾಸಿಯವರ ಪುತ್ರ ಶಿವಕುಮಾರ್ ಉದಾಸಿ, ರೇವತಿ ಉದಾಸಿ, ಕಲ್ಯಾಣ್ ಶೆಟ್ಟರ್, ಮಹಾಂತೇಶ್ ಸೊಪ್ಪಿನ್ ಹೆಸರುಗಳು ಚಾಲ್ತಿಯಲ್ಲಿದೆ. ಈ ಪೈಕಿ ಕಲ್ಯಾಣ್ ಶೆಟ್ಟರ್ ಆರ್‌ಎಸ್‌ಎಸ್ ಹಿನ್ನೆಲೆ ಹೊಂದಿದ್ದಾರೆ. ಆದರೆ ಈ ಬಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಯಲಿದೆ. ಚರ್ಚೆಯಲ್ಲಿ ಇಬ್ಬರ ಹೆಸರು ಅಂತಿಮಗೊಳಿಸಲಾಗುವುದು. ಇದಾದ ಬಳಿಕ ಕೋರ್ ಕಮಿಟಿ ಸಭೆಯಲ್ಲಿ ಅಂತಿಮಗೊಂಡ ಹೆಸರನ್ನು ಕೇಂದ್ರ ಚುನಾವಣಾ ಸಮಿತಿಗೆ ಕಳಿಸಿಕೊಡಲಾಗುವುದು. ಅಲ್ಲಿ ಅಭ್ಯರ್ಥಿಯ ಹೆಸರು ಅಂತಿಮಗೊಳ್ಳಲಿದೆ.
from India & World News in Kannada | VK Polls https://ift.tt/3ooWli9