ಹಲ್ಲೆ, ಕೊಲೆ ಯತ್ನ ಪ್ರಕರಣ; ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಂಧನ

: ಹಲ್ಲೆ, ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಂಧನವಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕೈವಾರ ಶ್ರೀನಿವಾಸ್ ಪಕ್ಕದ ಮನೆಯ ನಿವಾಸಿಗಳಾದ ನಾರಾಯಣಸ್ವಾಮಿ ಹಾಗೂ ಕುಟುಂಬಸ್ಥರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಬಗ್ಗೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸರು ಕೈವಾರ ಶ್ರೀನಿವಾಸ್ ಹಾಗೂ ಆತನ ಇಬ್ಬರು ಸಹೋದರರು ಸೇರಿದಂತೆ ಒರ್ವ ಸ್ನೇಹಿತ ಸೇರಿ ಒಟ್ಟು ನಾಲ್ವರನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಏನಿದು ಪ್ರಕರಣ? ಚಿಂತಾಮಣಿ ತಾಲೂಕಿನ ಕೈವಾರ ಗ್ರಾಮದ ನಿವಾಸಿ ಕಸಾಪಾ ಜಿಲ್ಲಾಧ್ಯಕ್ಷ ಶ್ರೀನಿವಾಸ್ ಪಕ್ಕದ ಮನೆಯವರಾದ ನಾರಾಯಣಸ್ವಾಮಿಯವರಿಗೂ ಜಮೀನು, ನಿವೇಶನ ಸಂಬಂಧ ವಿವಾದಗಳಿದ್ದು, ಈ ವಿವಾದ ಸಂಬಂಧ ಪದೇ ಪದೇ ಮಾತುಕತೆ, ವಾಗ್ವಾದ, ರಾಜೀ ಪಂಚಾಯತಿ ಗಲಾಟೆಗಳು ನಡೆಯುತ್ತಿದ್ದವು ಎನ್ನಲಾಗಿದೆ. ಇದೇ ವಿಚಾರವಾಗಿ ಎರಡೂ ಕುಟುಂಬಸ್ಥರ ನಡುವೆ ಗಲಾಟೆಯಾಗಿದ್ದು, ಕೈವಾರ ಶ್ರೀನಿವಾಸ್ ಕುಟುಂಬಸ್ಥರು ನಾರಾಯಣಸ್ವಾಮಿ ಹಾಗೂ ಆತನ ಸಹೋದರ ಅಶ್ವತ್ಥನಾರಾಯಣ ಹಾಗೂ ಪತ್ನಿ ಉಮಾದೇವಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಲಾಗಿದೆ. ಹಲ್ಲೆಗೆ ಒಳಗಾಗಿರುವ ನಾರಾಯಣಸ್ವಾಮಿ ಆತನ ಸಹೋದರ ಹಾಗೂ ಪತ್ನಿ ಚಿಂತಾಮಣಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಕೈವಾರ ಶ್ರೀನಿವಾಸ್ ಸಹ ದೂರು ನೀಡಿದ್ದು, ತನಿಖೆಯ ಹಂತದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ


from India & World News in Kannada | VK Polls https://ift.tt/3uBcnqm

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...