ಎಂ.ಪಿ. ರೇಣುಕಾಚಾರ್ಯ ಅವರಿಗೆ ಮೊಣಕಾಲಿನ ಶಸ್ತ್ರಚಿಕಿತ್ಸೆ: ಮುಂಬೈ ಖಾಸಗಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ () ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಕುರಿತು ಸ್ವತಃ ಎಂ.ಪಿ ರೇಣುಕಾಚಾರ್ಯ ಅವರೇ ಟ್ವಿಟ್ಟರ್ನಲ್ಲಿ ಮಾಹಿತಿ ನೀಡಿದ್ದಾರೆ. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಈ ಬಗ್ಗೆ ಆಸ್ಪತ್ರೆಯ ಬೆಡ್‌ ಮೇಲೆ ಮಲಗಿರುವ ಫೋಟೋಗಳನ್ನ ಬುಧವಾರ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಸಂಭವಿಸಿದ್ದ ಅಪಘಾತದಿಂದಾಗಿ ಕಳೆದ ಕೆಲ ತಿಂಗಳಿಂದ ಕಾಲು ನೋವು ಕಾಣಿಸಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತೆಯಲ್ಲಿ ಆಪರೇಷನ್ ಗೆ ಒಳಗಾಗಿದ್ದೇನೆ. ನಿಮ್ಮೆಲ್ಲರ ಹಾರೈಕೆ ಹಾಗೂ ಆಶೀರ್ವಾದದಿಂದ ಗುಣಮುಖನಾಗುತ್ತಿದ್ದು ವೈದ್ಯರ ಸಲಹೆ ಮೇರೆಗೆ ಮುಂದಿನ 15 ದಿನಗಳು ಬೆಂಗಳೂರಿನ ಆಯುರ್ವೇದಿಕ್ ಆಸ್ಪತ್ರೆಗೆ ದಾಖಲಾಗುತ್ತಿದ್ದು, ನಿಮ್ಮ ಅಹವಾಲುಗಳಿಗೆ ದೂರವಾಣಿ ಮೂಲಕ ನನ್ನ ಆಪ್ತ ಸಹಾಯಕರು ಸ್ಪಂದಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸಂಭವಿಸಿದ್ದ ಅಪಘಾತದಿಂದಾಗಿ ಅವರ ಕಾಲಿಗೆ ಪೆಟ್ಟಾಗಿತ್ತು. ಇದೀಗ ಕಾಲು ನೋವು ಹೆಚ್ಚಾದ ಕಾರಣ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುವ ಕಾರಣ ರೇಣುಕಾಚಾರ್ಯ ಅವರು 15 ದಿನಗಳ ವರೆಗೆ ಬೆಂಗಳೂರಿನ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಶಾಸಕ ಕೊರೋನಾ ಎರಡನೇ ಅಲೆ ಬಂದ ಮೇಲೆ ತಮ್ಮ ಕ್ಷೇತ್ರದಲ್ಲಿ ಟೊಂಕಕಟ್ಟಿ ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರದ ತುಂಬೆಲ್ಲಾ ಓಡಾಡುತ್ತಾ ಜನರಿಗೆ ಧೈರ್ಯ ತುಂಬುವುದಲ್ಲದೆ ಆಹಾರ, ವೈದ್ಯಕೀಯ ನೆರವು, ಕೊರೋನಾ ಸೋಂಕುತರು ನೆಲೆಸಿರುವ ಕೇಂದ್ರಗಳಲ್ಲಿ ವಾಸ ಮಾಡಿ ಯೋಗ, ಧ್ಯಾನ ಶಿಬಿರ, ಸಂಗೀತ ರಸಸಂಜೆಗಳನ್ನು ನಡೆಸಿಕೊಟ್ಟಿದ್ದರು. 4 ಆ್ಯಂಬುಲೆನ್ಸ್ ದೇಣಿಗೆ ಹೊನ್ನಾಳಿ ಸರ್ಕಾರಿ ಆಸ್ಪತ್ರೆಗೆ 4 ಆ್ಯಂಬುಲೆನ್ಸ್ ಹಾಗೂ 50 ಮಂಚವನ್ನು ದೇಣಿಗೆ ನೀಡಿದ್ದಾರೆ. ತಮ್ಮ ತಂದೆ ತಾಯಿ ಸ್ಮರಣಾರ್ಥ ಸರ್ಕಾರಿ ಆಸ್ಪತ್ರೆಗೆ ಈ ದೇಣಿಗೆ ನೀಡಿದ್ದಾರೆ. ತಮ್ಮ ತಂದೆ ಪಂಚಾಕ್ಷರಯ್ಯ ಮತ್ತು ತಾಯಿ ಕಮಲಮ್ಮ ಅವರ ಸ್ಮರಣಾರ್ಥ ರೇಣುಕಾಚಾರ್ಯ ಈ ಕಾರ್ಯ ಮಾಡಿದ್ದಾರೆ. ಸಂಸದ ಜಿ.ಎಂ.ಸಿದ್ದೇಶ್ವರ ಹಾಗೂ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೇರಿದಂತೆ ಪ್ರಮುಖರ ಸಮ್ಮುಖದಲ್ಲಿ ಅಂಬ್ಯುಲೆನ್ಸ್ ಮತ್ತು ಮಂಚ ದಾನ ಮಾಡಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹದು.


from India & World News in Kannada | VK Polls https://ift.tt/3jHYEcX

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...