West Bengal By Polls: ಬಿಜೆಪಿ ಅಭ್ಯರ್ಥಿ ಎದುರು ಮಮತಾ ಬ್ಯಾನರ್ಜಿಗೆ ಭಾರಿ ಮುನ್ನಡೆ

ಕೋಲ್ಕತಾ: ವಿಧಾನಸಭೆ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಭಾರಿ ಮುನ್ನಡೆ ಸಾಧಿಸಿದ್ದು, ಭರ್ಜರಿ ವಿಜಯದತ್ತ ಸಾಗಿದ್ದಾರೆ. ಸೆ. 30ರಂದು ನಡೆದ ಉಪ ಚುನಾವಣೆಗಳ ಮತ ಎಣಿಕೆ ಭಾನುವಾರ ನಡೆಯುತ್ತಿದ್ದು, ತೃಣಮೂಲ ಕಾಂಗ್ರೆಸ್ ಪಕ್ಷ ಎಲ್ಲ ಮೂರೂ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಏಪ್ರಿಲ್-ಮೇ ತಿಂಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಲ್ಲಿ ಎದುರಾಳಿ ಸುವೇಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದ ಮಮತಾ ಬ್ಯಾನರ್ಜಿ ಅವರಿಗಾಗಿ ತೆರವಾದ ಭವಾನಿಪುರ ವಿಧಾನಸಭೆ ಕ್ಷೇತ್ರಕ್ಕೆ ನಡೆದಿತ್ತು. ಪರಾಭವ ಹೊಂದಿದ್ದರೂ ಮುಖ್ಯಮಂತ್ರಿ ಕುರ್ಚಿಗೇರಿದ್ದ ಮಮತಾ ಬ್ಯಾನರ್ಜಿ ಅವರಿಗೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ಸಿಎಂ ಸ್ಥಾನದಲ್ಲಿ ಉಳಿಯಲು ಇಲ್ಲಿ ಗೆಲುವು ಪಡೆಯುವುದು ಅನಿವಾರ್ಯವಾಗಿದೆ. ಅ. 3ರ ಬೆಳಿಗ್ಗೆ ಆರಂಭವಾದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ತಿಬ್ರೆವಾಲ್ ಎದುರು ಅಲ್ಪ ಮುನ್ನಡೆ ಸಾಧಿಸಿದ್ದರು. ಆದರೆ ನಂತರದ ಸುತ್ತುಗಳಲ್ಲಿ ಅವರ ಮತಗಳಿಕೆ ಅಂತರ ಹೆಚ್ಚಾಗಿದೆ. ಮಧ್ಯಾಹ್ನ 12 ಗಂಟೆಗೆ 11ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಾಗ ಮಮತಾ ಅವರು 45,894 ಮತಗಳನ್ನು ಗಳಿಸಿ ಬಿಜೆಪಿ ಅಭ್ಯರ್ಥಿಗಿಂತ ಸುಮಾರು 34,000 ಮತಗಳ ಅಂತರದ ಮುನ್ನಡೆ ಸಾಧಿಸಿದ್ದರು. ಪ್ರಿಯಾಂಕಾ ಅವರು 11,894 ಮತಗಳನ್ನು ಗಳಿಸಿದ್ದರು. ಸಿಪಿಎಂ ಅಭ್ಯರ್ಥಿ ಕೇವಲ 1,515 ಮತಗಳನ್ನು ಪಡೆದಿದ್ದರು. ಮುರ್ಷಿದಾಬಾದ್ ಜಿಲ್ಲೆಯ ಸಮ್ಸೆರ್ಗಂಜ್ ಮತ್ತು ಜಂಗೀಪುರ ಕ್ಷೇತ್ರಗಳ ಅಭ್ಯರ್ಥಿಗಳು ಮೃತಪಟ್ಟಿದ್ದರಿಂದ ಈ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿತ್ತು. ಜಂಗೀಪುರ ಕ್ಷೇತ್ರದಲ್ಲಿ ಅಭ್ಯರ್ಥಿ ಜಾಕೀರ್ ಹುಸೇನ್ 20,132 ಮತಗಳನ್ನು ಗಳಿಸಿದ್ದು, ಬಿಜೆಪಿ ಅಭ್ಯರ್ಥಿಗಿಂತ ಸುಮಾರು 12,000 ಮತಗಳ ಮುನ್ನಡೆ ಸಾಧಿಸಿದ್ದರು. ಸಮ್ಸೆರ್ಗಂಜ್‌ನಲ್ಲಿ ಟಿಎಂಸಿ ಅಭ್ಯರ್ಥಿ ಅಮಿರುಲ್ ಇಸ್ಲಾಂ 24,414 ಮತಗಳನ್ನು ಪಡೆದಿದ್ದು, ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಜೈದುರ್ ರಹಮಾನ್ 19,224 ಮತಗಳೊಂದಿಗೆ ಹಿನ್ನಡೆ ಅನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಮಿಲನ್ ಘೋಷ್ ಅವರಿಗೆ ಕೇವಲ 3,374 ಮತಗಳು ಸಿಕ್ಕಿವೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದ್ದು, ಈಗಲೇ ಮಮತಾ ಬ್ಯಾನರ್ಜಿ ಅವರ ನಿವಾಸದ ಎದುರು ನೂರಾರು ಕಾರ್ಯಕರ್ತರು ಸೇರಿದ್ದಾರೆ.


from India & World News in Kannada | VK Polls https://ift.tt/3D88UTe

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...