ಮುಂದಿನ ವರ್ಷದಿಂದ ರಾಜ್ಯೋತ್ಸವ ಪ್ರಶಸ್ತಿ ಮೊತ್ತ 5 ಲಕ್ಷ ರೂ.ಗಳಿಗೆ ಹೆಚ್ಚಳ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಂದಿನ ವರ್ಷದಿಂದ ರಾಜ್ಯೋತ್ಸವ ಪ್ರಶಸ್ತಿಯನ್ನು ಅರ್ಜಿ ಪಡೆದು ನೀಡಲಾಗುವುದಿಲ್ಲ. ಅದರ ಜತೆ ರಾಜ್ಯೋತ್ಸವ ಪ್ರಶಸ್ತಿಯ ಮೊತ್ತವನ್ನು 5 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಇಂದು (ನವೆಂಬರ್‌ 1) ಘೋಷಿಸಿದರು. ಅವರು ಸೋಮವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಪ್ರದಾನ ಸಮಾರಂಭ - 2021ರಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡುತ್ತಿದ್ದರು. ರಾಜ್ಯೋತ್ಸವ ಪ್ರಶಸ್ತಿಯ ಮೌಲ್ಯ ಹೆಚ್ಚಬೇಕು. ಹಣದ ಮೊತ್ತ ಇಲ್ಲಿ ಮಹತ್ವದ್ದಲ್ಲ. ಆದರೆ ಸರ್ಕಾರವೇ ಪ್ರಶಸ್ತಿಗೆ ಅರ್ಹರನ್ನು ಗುರುತಿಸಲಿದೆ. ಎರಡು ತಿಂಗಳಿಗಿಂತ ಮುಂಚಿತವಾಗಿ ಆಯ್ಕೆ ಸಮಿತಿ ಸಾಧಕರನ್ನು ಪಟ್ಟಿ ಮಾಡಲಿದೆ. ನಂತರ ಸರ್ಕಾರವೇ ಸಾಧಕರನ್ನು ಅಯ್ಕೆ ಮಾಡಿ ಪ್ರಶಸ್ತಿ ನೀಡಲಿದೆ. ಇಂಥ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ತಿಳಿಸಿದರು. ಸರ್ಕಾರವೇ ಅರ್ಹರನ್ನು ಗುರುತಿಸಿದಾಗ ಪ್ರಶಸ್ತಿಯ ಮೌಲ್ಯ ನೂರು ಪಟ್ಟು ಹೆಚ್ಚುತ್ತದೆ. ಪ್ರಶಸ್ತಿ ಪಡೆಯುವವರ ನೋವು, ಅದರ ಹಿಂದಿರುವ ಕಠಿಣ ಪರಿಶ್ರಮವನ್ನು ಗುರುತಿಸಿ, ಸಮಾಜದಲ್ಲಿ ಸಾಧಕರಿಗೆ ಯಾವುದೇ ಕಷ್ಟವಾಗಬಾರದು ಎಂಬ ದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು. ಇನ್ನು ಮುಂದೆ ಯಾರೂ ಬಯೋಡೇಟಾ ತಯಾರು ಮಾಡಬೇಕಾದ, ಪತ್ರಿಕಾ ತುಣುಕುಗಳನ್ನು ಜೋಡಿಸಿಟ್ಟು ತೋರಿಸುವ ಅಗತ್ಯವಿಲ್ಲ ಎಂದು ಪ್ರಶಸ್ತಿ ಆಕಾಂಕ್ಷಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಕಿವಿ ಮಾತು ಹೇಳಿದರು. ಪ್ರಶಸ್ತಿ ಬಹಳ ಪ್ರತಿಷ್ಠಿತವಾದದ್ದು. ಇದರ ಮೌಲ್ಯ ಹೆಚ್ಚಾಗಬೇಕಾದರೆ ಆಯ್ಕೆ ಪ್ರಕ್ರಿಯೆ ಬದಲಾಗಬೇಕು. ಮಾನದಂಡಗಳ ಪರಿಷ್ಕರಣೆಗೆ ಅಗತ್ಯ ಕ್ರಮ ವಹಿಸಲಾಗುವುದು. ಒಳ್ಳೆತನಕ್ಕೆ ಶಿಕ್ಷಣ ಬೇಕಾಗಿಲ್ಲ, ಮನಸ್ಸು ಒಳ್ಳೆಯದಿರಬೇಕು. ಪೌರಕಾರ್ಮಿಕರಿಗೆ ದೊಡ್ಡ ಪ್ರಶಸ್ತಿ ನೀಡಿದರೆ ಇನ್ನೂ ಹೆಚ್ಚು ಕೆಲಸ ಮಾಡುತ್ತಾರೆ. ಆಯ್ಕೆ ಶೋಧನೆಯಿಂದಾಗಬೇಕು ಹೊರತಾಗಿ ಅರ್ಜಿಗಳಿಂದ ಅಲ್ಲ ಎಂದರು. ಪ್ರತಿಭೆಗೆ ವಯಸ್ಸಿನ ಗಡಿ ಮಿತಿಗಳಿಲ್ಲ 60 ವರ್ಷ ಮೇಲ್ಪಟ್ಟವರಿಗೆ ಪ್ರಶಸ್ತಿ ನೀಡಬೇಕೆಂದು ಹಿಂದೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಆದರೆ ಪ್ರತಿಭೆ ಎನ್ನುವುದು ವಯಸ್ಸಿಗೆ ಸಂಬಂಧಿಸಿದ್ದಲ್ಲ. ತಂತ್ರಜ್ಞಾನದ ಕಾಲದಲ್ಲಿ ಅದೆಷ್ಟೋ ಮಕ್ಕಳು ಎಷ್ಟೊಂದು ಕ್ಷೇತ್ರಗಳಲ್ಲಿ ಪ್ರತಿಭಾವಂತರಿದ್ದಾರೆ. ಕನ್ನಡ ನಾಡಿನಲ್ಲಿ ಎಷ್ಟೋ ಮಂದಿಗೆ ನೀರಜ್ ಚೋಪ್ರಾರಿಗೆ ಒಲಿಂಪಿಕ್ಸ್‌ ಚಿನ್ನದ ಪದಕ ದೊರೆತಿರುವುದರಿಂದ ಸ್ಫೂರ್ತಿ ದೊರೆತಿದೆ ಎಂದು ಅಭಿಪ್ರಾಯ ಪಟ್ಟ ಮುಖ್ಯಮಂತ್ರಿಗಳು, ವಯಸ್ಸನ್ನು ಕಡಿಮೆ ಮಾಡುವ ಕುರಿತು ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸಿ ಅನುಮತಿ ಪಡೆಯುವ ಕೆಲಸವನ್ನು ಮುಂದಿನ ವರ್ಷ ಮಾಡಲಿದ್ದೇವೆ ಎಂದು ತಿಳಿಸಿದರು. ಹಿರಿಯರ ಜೊತೆಗೆ ವಿಶೇಷ ಪ್ರತಿಭೆಗಳನ್ನೂ ಗುರುತಿಸಿ ಪ್ರಶಸ್ತಿ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್. ಅಶೋಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಮತ್ತು ಇತರರು ಉಪಸ್ಥಿತರಿದ್ದರು.


from India & World News in Kannada | VK Polls https://ift.tt/3nHcgq4

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...