ತಮಿಳುನಾಡಿನಂತೆ ನಮ್ಮಲ್ಲೂ ನೀಟ್ ವಿರುದ್ಧ ನಿರ್ಣಯ ಕೈಗೊಳ್ಳಿ: ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದರೂ ವೈದ್ಯೆಯಾಗುವ ಬಯಕೆಗೆ ತಕ್ಕಂತೆ ಸರ್ಕಾರಿ ಕೋಟಾದಲ್ಲಿ ಎಂಬಿಬಿಎಸ್ ಸೀಟು ಪಡೆದುಕೊಳ್ಳಲು ಸಾಧ್ಯವಾಗದ ಕಾರಣಕ್ಕೆ ನೊಂದ ಮಾಡಿಕೊಂಡ ಘಟನೆ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಕನ್ನಡಿಗರನ್ನು ಅವಕಾಶ ವಂಚಿತರನ್ನಾಗಿ ಮಾಡುತ್ತಿರುವ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಸರಣಿ ಟ್ವೀಟ್‌ಗಳನ್ನು ಮಾಡಿ, ಘಟನೆ ಬಗ್ಗೆ ಬೇಸರ ಹೊರಹಾಕಿದ್ದಾರೆ. ವೈದ್ಯೆ ಆಗಬೇಕು ಎಂದು ಕನಸು ಕಂಡಿದ್ದ ವಿದ್ಯಾರ್ಥಿನಿಯೊಬ್ಬರು ದ್ವಿತೀಯ ಪಿಯುಸಿಯಲ್ಲಿ ಶೇ. 96ರಷ್ಟು ಅಂಕ ಗಳಿಸಿದ್ದರೂ ಅವರಿಗೆ ನೀಟ್ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬಾರದೇ ಸರಕಾರಿ ಸೀಟು ಸಿಗಲಿಲ್ಲ. ಈ ಕಾರಣಕ್ಕೆ ಆ ಹೆಣ್ಣುಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಲೂಕಿನ ಚನ್ನಪಟ್ಟಣ ಗ್ರಾಮದ ಸಂಕಲ್ಪ ಎಂಬ ವಿದ್ಯಾರ್ಥಿನಿ ಸಾವಿಗೆ ಶರಣಾಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ. ಹೀಗೆ ಜೀವವನ್ನು ಕೊನೆ ಮಾಡಿಕೊಂಡ ಆ ಯುವತಿಯ ದುರ್ಮರಣ ಎಲ್ಲರಿಗೂ ಪಾಠ ಆಗಬೇಕಿದೆ ಎಂದು ಎಚ್‌ಡಿಕೆ ಹೇಳಿದ್ದಾರೆ. ನಮ್ಮ ಶಿಕ್ಷಣ ವ್ಯವಸ್ಥೆ ಬದಲಾಗಬೇಕು ಹಾಗೂ ಉನ್ನತ ಶಿಕ್ಷಣ ಬಡ, ಸಾಮಾನ್ಯ ಮಕ್ಕಳಿಗೂ ಸಿಗಬೇಕು ಎನ್ನುವ ಕಾಳಜಿಯ ಜತೆಗೆ, ಯಾರೇ ವಿದ್ಯಾರ್ಥಿಗಳು ಸೀಟು ಸಿಗಲಿಲ್ಲ ಎನ್ನುವ ಕಾರಣಕ್ಕೆ ಸಂಕಲ್ಪ ಅವರಂತೆ ಬದುಕನ್ನು ಕೊನೆ ಮಾಡಿಕೊಳ್ಳಬಾರದು. ಅವಕಾಶಗಳು ಆಕಾಶದಷ್ಟು ಇವೆ. ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಮಾರ್ಗಗಳು ಕೂಡ ಇವೆ. ದೃಢ ಸಂಕಲ್ಪದೊಂದಿಗೆ ಭವಿಷ್ಯ ಕಂಡುಕೊಳ್ಳಬೇಕು. ಯಾವುದೇ ಕಾರಣಕ್ಕೂ ಸಂಕಲ್ಪ ಅವರಂತೆ ಜೀವ ತೆಗೆದುಕೊಳ್ಳಬಾರದು. ಇದು ನನ್ನ ಕಳಕಳಿಯ ಮನವಿ ಎಂದು ವಿದ್ಯಾರ್ಥಿಗಳಲ್ಲಿ ಅವರು ಕೇಳಿಕೊಂಡಿದ್ದಾರೆ. ನಮ್ಮ ಮಕ್ಕಳ ಜೀವದ ಜತೆ ಚೆಲ್ಲಾಟ ಆಡುತ್ತಿರುವ ನೀಟ್ ಪರೀಕ್ಷೆ ಬಗ್ಗೆ ನಾವು ಮರು ಆಲೋಚನೆ ಮಾಡಬೇಕಿದೆ. ಈಗಾಗಲೇ ತಮಿಳುನಾಡು ಸರಕಾರ ನೀಟ್ ವಿರುದ್ಧ ನಿರ್ಣಯ ಕೈಗೊಂಡಿದೆ. ನಮ್ಮ ಸರಕಾರವೂ ಇಂತಹ ನಿಲುವಿಗೆ ಬರಲಿ. ರಾಜ್ಯದಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ಸಂಕಲ್ಪ ಅವರ ಹಾದಿ ಹಿಡಿಯುವುದನ್ನು ತಪ್ಪಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಸೊರಬ ತಾಲೂಕಿನ ಚಂದ್ರಗುತ್ತಿ ಹೋಬಳಿ ಚನ್ನಪಟ್ಟಣದ ಸಂಕಲ್ಪ, ದ್ವಿತೀಯ ಪಿಯುಸಿಯಲ್ಲಿ ಶೇ 96ರಷ್ಟು ಅಂಕಗಳನ್ನು ಪಡೆದಿದ್ದರು. ಆದರೆ ಎರಡು ಬಾರಿ ನೀಟ್ ಪರೀಕ್ಷೆ ಬರೆದರೂ ನಿರೀಕ್ಷಿಸಿದಷ್ಟು ಅಂಕ ಸಿಗದೆ ಸರ್ಕಾರಿ ಕೋಟಾದಲ್ಲಿ ಸೀಟ್ ಸಿಕ್ಕಿರಲಿಲ್ಲ. ಮ್ಯಾನೇಜ್‌ಮೆಂಟ್ ಕೋಟಾದಲ್ಲಿ ಸೀಟು ಪಡೆಯಲು ಲಕ್ಷಾಂತರ ರೂ ಹಣ ಕೊಡಬೇಕಾಗುತ್ತದೆ. ಇದು ತನ್ನ ಕುಟುಂಬದಿಂದ ಸಾಧ್ಯವಿಲ್ಲ ಎಂದು ಬೇಸರಪಟ್ಟುಕೊಂಡಿದ್ದರು. ಮನೆಯವರು ಸಮಾಧಾನ ಹೇಳಿದ್ದರೂ ಸಂಕಲ್ಪ ಆತುರದ ನಿರ್ಧಾರ ತೆಗೆದುಕೊಂಡಿದ್ದರು ಎನ್ನಲಾಗಿದೆ. ಇದರಿಂದ ನೀಟ್ ಹಾಗೂ ಜೆಇಇ ಸೇರಿದಂತೆ ಕೇಂದ್ರೀಕೃತ ಪರೀಕ್ಷೆ ವ್ಯವಸ್ಥೆ ಬಗ್ಗೆ ಮತ್ತೊಮ್ಮೆ ಆಕ್ರೋಶ ವ್ಯಕ್ತವಾಗಿದೆ. ಕೇಂದ್ರ ಸರ್ಕಾರದಿಂದ ನಡೆಯುವ ಈ ಪರೀಕ್ಷೆಗಳನ್ನು ಸರ್ಕಾರ ರದ್ದುಗೊಳಿಸಬೇಕು. ಕರ್ನಾಟಕವೇ ಈ ಪರೀಕ್ಷೆಗಳನ್ನು ನಡೆಸಿದರೆ ನಮ್ಮಲ್ಲಿನ ಅರ್ಹರು, ಸಾಮಾನ್ಯ ಕುಟುಂಬದ ಮಕ್ಕಳಿಗೂ ತಮ್ಮ ಕನಸು ಈಡೇರಿಸಿಕೊಳ್ಳುವ ಅವಕಾಶ ಸಿಗುತ್ತದೆ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಆಗ್ರಹಿಸಲಾಗುತ್ತಿದೆ.


from India & World News in Kannada | VK Polls https://ift.tt/3re1ZVD

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...