ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ನೂರು ದಿನ; ಏನಂದ್ರು ಸಿಎಂ?

ಹುಬ್ಬಳ್ಳಿ: ಕಳೆದ ನೂರು ದಿನಗಳ ಆಡಳಿತದಲ್ಲಿ ಯಾವ ರೀತಿ ಭದ್ರ ಮತ್ತು ದಿಟ್ಟ ಹೆಜ್ಜೆಗಳನ್ನು ತೀರ್ಮಾನಗಳನ್ನು ಕೈಗೊಂಡಿದ್ದು, ಬರುವ ದಿನಗಳಲ್ಲಿ ನಮ್ಮ ಸರ್ಕಾರ ಜನರ ಪರವಾಗಿ ಯಾವ ರೀತಿ ಹೆಜ್ಜೆ ಇಡಲಿದೆ ಎಂಬುವುದರನ್ನು ತೋರಿಸುತ್ತದೆ ಎಂದು ಸಿಎಂ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಗುರುವಾರ ಮಾತನಾಡಿದ ಅವರು, ನಮ್ಮ ಸರ್ಕಾರ ಅಮೃತ ಯೋಜನೆ, ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಮಾಸಾಶನ ಒಳಗೊಂಡು ಬಡವರಿಗೆ ಸಂಧ್ಯಾ ಸುರಕ್ಷಾ ಹೆಚ್ಚು ಮಾಡಿದ್ದೇವೆ.ಇದರ ಜೊತೆಗೆ ಇನ್ನೂ ಹಲವಾರು ಯೋಜನೆಗಳನ್ನು ಜಾರಿ ಮಾಡುವ ಚಿಂತನೆ ಇದೆ ಎಂದರು. ಆರ್ಥಿಕ ಬೆಳವಣಿಗೆ ಈಗ ಚೇತರಿಸಿಕೊಳ್ಳುತ್ತಿದೆ. ಬರುವ ದಿನಗಳಲ್ಲಿ ಜನರ ಪರವಾಗಿ ಮತ್ತಷ್ಟು ಉತ್ತಮ ಯೋಜನೆಗಳನ್ನು ರೂಪಿಸಲಾಗುವುದು. ವ್ಯವಸ್ಥೆಯಲ್ಲಿ ಸುಧಾರಣೆ, ಜನರ ಬಳಿಗೆ ಸರ್ಕಾರಿ ಸೇವೆಗಳು ಹೋಗಬೇಕಿದೆ. ಆರ್ಥಿಕತೆ ಬೆಳವಣಿಗೆಳ ಹಿನ್ನೆಲೆಯಲ್ಲಿ ಮಾನವ ಸಂಪನ್ಮೂಲ ಉಪಯೋಗ ಮಾಡಿಕೊಳ್ಳಬೇಕಿದೆ. ತಲಾವಾರು ಆದಾಯ ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮ ರಾಜ್ಯದಲ್ಲಿ ಹೇಗಿದೆ ಎಂಬುವುದನ್ನು ಆಧರಿಸಿ ಎಸ್‌ಸಿ, ಎಸ್ ಟಿ, ಓಬಿಸಿ ಸಮುದಾಯಗಳು ಆರ್ಥಿಕತೆಯಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮ ಹಾಗೂ ಆರ್ಥಿಕ ನೆರವು ನೀಡಲಾಗುವುದು. ಮಹಿಳೆಯರಿಗೂ ನೆರವು ನೀಡುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು ಎಂದರು. ಆಡಳಿತ ಸುಧಾರಣೆಯಲ್ಲಿ ಸಿಎಂ ಡ್ಯಾಶ್ ಬೋರ್ಡ್‌ ಮಾಡಲಾಗಿದೆ. 15 ದಿನಕ್ಕೊಮ್ಮೆ ಪರಿಶೀಲನೆ ಮಾಡುತ್ತಿದ್ದೇನೆ. ಸಿಎಂ ಡ್ಯಾಶ್ ಬೋರ್ಡ್ ರಾಜ್ಯದಲ್ಲಿ ಮೊದಲ ಬಾರಿಗೆ ಆಗಿದೆ. ನೂರು ದಿನಗಳಲ್ಲಿ ಆಡಳಿತವನ್ನು ಸರಿಯಾದ ದಿಕ್ಕಿನಲ್ಲಿ ತೆಗೆದುಕೊಂಡು ಹೋಗುವುದಲ್ಲಿ ತೃಪ್ತಿ ತಂದಿದೆ ಎಂದರು.


from India & World News in Kannada | VK Polls https://ift.tt/3wm9jiz

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...