ವಿಜಯಪುರದಲ್ಲಿ ಬಸ್-ಕಾರು ಮುಖಾಮುಖಿ : ನಾಗಠಾಣ ಶಾಸಕರ ಸೋದರಳಿಯ ಸೇರಿ ನಾಲ್ವರು ಸಾವು!

ವಿಜಯಪುರ: ಸಾರಿಗೆ ಸಂಸ್ಥೆಯ ಬಸ್ ಹಾಗೂ ಫಾರ್ಚುನರ್ ಕಾರು ಮಧ್ಯೆ ಮುಖಾಮುಖಿ ಅಪಘಾತದಲ್ಲಿ ಜಿಲ್ಲೆಯ ಶಾಸಕರೊಬ್ಬರ ಅಳಿಯ ಸೇರಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆ ನಾಂದೇಡ ಮೂಲದ ನಾಲ್ವರು ನಿವಾಸಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪಾರ್ಚ್ಯೂನರ್ ಕಾರಿನ ಅತೀವೇಗ ಹಾಗೂ ಚಾಲಕನ ಆಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ನಡೆದ ಬೆನ್ನಲ್ಲೇ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಆಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತ ನಾಲ್ವರ ಗುರುತು ಪತ್ತೆ ಹಚ್ಚಲಾಗಿದೆ. ಮೃತರಲ್ಲಿ ನಾಗಠಾಣ ಶಾಸಕ ದೇವಾನಂದ್ ಚವ್ಹಾಣ ಅಳಿಯ ವಿಜಯಕುಮಾರ್ ಕಾಶಿನಾಥ ದೊಡಮನಿ(45) ಆತನ ಸ್ನೇಹಿತರಾದ ಚಿದಾನಂದ ನಾಗೇಶ ಸೂರ್ಯವಂಶಿ(45) ಸೋಮನಾಥ ಕಾಳೆ(43) ಸಂದೀಪ ಪವಾರ(40) ಎಂದು ಗುರುತಿಸಲಾಗಿದೆ. ಇನ್ನು ಅಪಘಾತಕ್ಕೀಡಾದ ಕೆಎ 22 ಎಫ್ 2198 ನಂಬರಿನ ಬಸ್ ನಿಶ್ಚಿತಾರ್ಥ ಕಾರ್ಯಕ್ಕೆಂದು ನರಗುಂದನಿಂದ ವಿಜಯಪುರಕ್ಕೆ ಆಗಮಿಸಿದ್ದು, ನಿಶ್ಚಿತಾರ್ಥ ಕಾರ್ಯ ಮುಗಿಸಿ ವಾಪಸ್ ತೆರಳುತ್ತಿದ್ದ ವೇಳೆ ನಡೆದ ಅವಘಡ ಸಂಭವಿಸಿದೆ. ಎದುರಿಗೆ ವೇಗವಾಗಿ ಆಗಮಿಸಿದ ಎಂಎಚ್ 13 ಸಿಎಸ್ 3330 ನಂಬರಿನ ಫಾರ್ಚೂನರ್ ಕಾರು ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದೆ. ಇನ್ನು ಮೃತರು ನಾಂದಣಿ ಗ್ರಾಮದ ನಿವಾಸಿಗಳಾಗಿದ್ದು, ಇವರೆಲ್ಲರೂ ಡಿಕ್ಕಿ ಹೊಡೆದ ಕಾರಿನಲ್ಲಿದ್ದರೆನ್ನಲಾಗಿದೆ. ಫಾರ್ಚೂನರ್ ಕಾರ್ ಮಾಲೀಕ ಚಿದಾನಂದ ಸೂರ್ಯವಂಶಿ ಎಂದು ಗುರುತಿಸಲಾಗಿದ್ದು, ವಿಜಯಪುರದ ಕೊಲ್ಹಾರ ಗ್ರಾಮಕ್ಕೆ ನಿಶ್ಚಿತಾರ್ಥಕ್ಕಾಗಿ ಆಗಮಿಸಿದ್ದರೆಂಬ ಮಾಹಿತಿ ಲಭ್ಯವಾಗಿದೆ.


from India & World News in Kannada | VK Polls https://ift.tt/3CWuIR6

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...