ಬಿಟ್‌ ಕಾಯಿನ್‌ ದಂಧೆ ಪ್ರಕರಣದಲ್ಲಿ ಬಿಜೆಪಿಯ ಯಾವ ನಾಯಕರೂ ಇಲ್ಲ; ಆರಗ ಜ್ಞಾನೇಂದ್ರ

ಬೆಂಗಳೂರು: ಬಿಟ್‌ ಕಾಯಿನ್‌ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಹೇಳಿದರು. ವಿಧಾನ ಸೌಧದ ಮುಂಭಾಗ ರಾಜ್ಯ ಅಗ್ನಿಶಾಮಕ ಇಲಾಖೆಯು ದೀಪಾವಳಿ ಹಬ್ಬದ ಆಚರಣೆ ಸಂದರ್ಭದಲ್ಲಿ ಉಂಟಾಗಬಹುದಾದ ಅಗ್ನಿ ಅವಘಡ ಹಾಗೂ ತಡೆ ಬಗ್ಗೆ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ‘ಮಾದಕ ವಸ್ತು ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಶ್ರೀಕಿಯನ್ನು ವಿಚಾರಣೆಗೊಳಪಡಿಸಿದಾಗ ಆತ ಬಿಟ್‌ ಕಾಯಿನ್‌ ಪ್ರಕರಣದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂತು. ಹಾಗಾಗಿ ಇ.ಡಿ ತನಿಖೆಗೆ ಶಿಫಾರಸು ಮಾಡಲಾಗಿದೆ. ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಕೆಲಸ ಮಾಡಿಲ್ಲ’ ಎಂದು ತಿಳಿಸಿದರು. ಬಿಟ್‌ ಕಾಯಿನ್‌ ಪ್ರಕರಣದ ಆರೋಪಿಯ ಸಂಪರ್ಕದಲ್ಲಿ ಬಿಜೆಪಿಯ ಯಾವ ಘಟಾನುಘಟಿ ನಾಯಕರೂ ಇಲ್ಲ. ಆರೋಪಿಯ ಸಂಪರ್ಕದಲ್ಲಿ ಯಾರಿದ್ದಾರೆ ಎಂಬುದನ್ನು ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯನವರು ಸ್ಪಷ್ಟವಾಗಿ ಹೇಳಲಿ. ಕಾಂಗ್ರೆಸ್‌ನವರೇ ಆತನ ಸಂಪರ್ಕದಲ್ಲಿರುವುದು ಎಂದು ತಿರುಗೇಟು ನೀಡಿದರು. ‘ನಗರದ ಯುಬಿ ಸಿಟಿಯಲ್ಲಿ 2018ರಲ್ಲಿ ನಡೆದ ಗಲಾಟೆ ಸಂದರ್ಭದಲ್ಲಿ ಆರೋಪಿ ಶ್ರೀಕಿಯನ್ನು ಅಂದಿನ ಕಾಂಗ್ರೆಸ್‌ ಸರಕಾರ ಏಕೆ ಬಂಧಿಸಿರಲಿಲ್ಲ? ಕಾಂಗ್ರೆಸ್‌ನ ಇಬ್ಬರು ನಾಯಕರ ಮಕ್ಕಳ ಜತೆಗೇ ಶ್ರೀಕಿ ಸಿಕ್ಕಿಬಿದ್ದಾಗ ಬಂಧಿಸಿ ತನಿಖೆ ಏಕೆ ನಡೆಸಲಿಲ್ಲ ಎಂದು ಪ್ರಶ್ನಿಸಿದರು. ಉಪ ಚುನಾವಣೆ ಪ್ರಚಾರದ ಅಬ್ಬರಕ್ಕೆ ತೆರೆ ಬೀಳುತ್ತಿದ್ದಂತೆ, ಬಿಟ್‌ ಕಾಯಿನ್‌ ವ್ಯವಹಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿತ್ತು. ಇದರ ಬೆನ್ನಿಗೇ ಪ್ರತಿಕ್ರಿಯಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಪ್ರಕರಣ ಸಂಬಂಧ ಕೇಂದ್ರೀಯ ತನಿಖಾ ಸಂಸ್ಥೆಗಳಿಂದ ಈಗಾಗಲೇ ತನಿಖೆ ನಡೆಯುತ್ತಿದೆ ಎಂದಿದ್ದರು. ಬಿಟ್‌ ಕಾಯಿನ್‌ ಅವ್ಯವಹಾರದಲ್ಲಿ ಪ್ರಭಾವಿ ರಾಜಕಾರಣಿಗಳು ಶಾಮೀಲಾಗಿದ್ದಾರೆ ಎಂಬ ಮಾತು ಕೇಳಿ ಬಂದಿದೆ. ಉಪ ಚುನಾವಣೆ ಪ್ರಚಾರದ ಕಡೆಯ ದಿನ ಬಿಟ್‌ ಕಾಯಿನ್‌ ದಂಧೆ ಬಗ್ಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದರು. ಬಳಿಕ ಇದೇ ವಿಚಾರವಾಗಿ ಟ್ವೀಟ್‌ ಮಾಡಿದ್ದ ಅವರು, ಈ ಪ್ರಕರಣವನ್ನೇ ಮುಚ್ಚಿ ಹಾಕುವ ಯತ್ನ ನಡೆದಿದೆ ಎಂದು ಆರೋಪಿಸಿದ್ದರು. ಅದರೊಂದಿಗೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಸುದ್ದಿಯೊಂದು ಮುನ್ನೆಲೆಗೆ ಬರುವಂತಾಗಿತ್ತು. ಮುಚ್ಚಿ ಹಾಕುವ ಆರೋಪಬಿಟ್‌ ಕಾಯಿನ್‌ ದಂಧೆಯಲ್ಲಿ ದೊಡ್ಡ ಅವ್ಯವಹಾರ ನಡೆದಿದೆ. ಅದನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕುವ ಯತ್ನ ನಡೆಸಲಾಗುತ್ತಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್‌ ಆರೋಪಿಸಿದೆ. ಪ್ರಕರಣದ ತನಿಖೆಯನ್ನು ಇಡಿ, ಸಿಬಿಐಗೆ ನೀಡಿದ್ದು ಹೌದಾದರೆ ಈ ಸಂಗತಿಯನ್ನು ಏಕೆ ಬಹಿರಂಗಗೊಳಿಸಿಲ್ಲ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ. ಇನ್ನು ಸಿಎಂ ಹೇಳಿಕೆ ನೀಡಿದ ದಿನ ಹುಬ್ಬಳ್ಳಿಯಲ್ಲೇ ಇದ್ದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದರು. ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿ, ‘ಈ ಪ್ರಕರಣದಲ್ಲಿ 10 ಸಾವಿರ ಕೋಟಿ ರೂ. ವಹಿವಾಟಿನ ಗುಮಾನಿಯಿದೆ. ಇದರ ಸತ್ಯಾಂಶ ಹೊರಬಂದರೆ ಹಲವು ನಾಯಕರ ಕುರ್ಚಿ ಅಲುಗಾಡಲಿದೆ. ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಯೇ ಸೂಕ್ತ. ಇತರ ತನಿಖಾ ಸಂಸ್ಥೆಗಳ ಮೇಲೆ ನಂಬಿಕೆ ಹೊರಟು ಹೋಗಿದೆ’ ಎಂದು ಹೇಳಿದ್ದರು.


from India & World News in Kannada | VK Polls https://ift.tt/3w8am5H

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...