
ಬೆಂಗಳೂರು : ರಾಜ್ಯದಲ್ಲಿ ನ.25ರ ನಂತರ ಪ್ರಮಾಣ ತಗ್ಗಲಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಸಾಧರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ನ.25 ಮತ್ತು ನ.26ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಕಡೆ ನ.25 ರಂದು ಸಾಧಾರಣ ಹಾಗೂ ನ.26ರಂದು ತುಂತುರು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟ, ಬೆಳಗಾವಿ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳ ಕೆಲವೆಡೆ ನ. 25ರಂದು ತುಂತುರು ಮಳೆಯಾಗಲಿದೆ. ನ.26 ಮತ್ತು27 ರಂದುಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಳಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ರಾಜ್ಯದ ಕೆಲವು ಕಡೆ ಬುಧವಾರ ಮಳೆಯಾಗಿದ್ದು, ವಿಶೇಷವಾಗಿ ಯಾದಗಿರಿಯಲ್ಲಿ 81.5 ಮಿ.ಮೀ., ಮುಂಡರಗಿಯಲ್ಲಿ 76.5 ಮಿ.ಮೀ., ದಕ್ಷಿಣ ಕನ್ನಡ ಜಿಲ್ಲೆ ಮಡಪ್ಪಾಡಿಯಲ್ಲಿ 62 ಮಿ.ಮೀ., ಮೈಸೂರು ಜಿಲ್ಲೆ ಬಿಳಿಕೆರೆಯಲ್ಲಿ 47.5 ಮಿ.ಮೀ. ಮಳೆಯಾಗಿದೆ. ಕೊಲ್ಲಿಯಲ್ಲಿ ವಾಯುಭಾರ ಕುಸಿತ ಮತ್ತೆ ಶುರುವಾದ ಮಳೆ ಆರ್ಭಟ ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ಚೆನ್ನೈ ಸೇರಿದಂತೆ ಹಲವೆಡೆ ಮಳೆ ಆರ್ಭಟ ಶುರುವಾಗಿದೆ. ಮುಂದಿನ ನಾಲ್ಕೈದು ದಿನಗಳ ಕಾಲ ದಕ್ಷಿಣ ಭಾರತದ ರಾಜ್ಯಗಳಲ್ಲಿ ಬಿರುಸಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆಗ್ನೇಯ ಬಂಗಾಳ ಕೊಲ್ಲಿಯಿಂದ ಚಲಿಸುತ್ತಿರುವ ಚಂಡಮಾರುತ ದಕ್ಷಿಣ ತಮಿಳುನಾಡು ಕರಾವಳಿ ಮೂಲಕ ಶ್ರೀಲಂಕಾದತ್ತ ಕ್ರಮಿಸುತ್ತಿದ್ದು, ಆಂಧ್ರಪ್ರದೇಶದ ಕರಾವಳಿ, ಯಾನಂ, ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ಪುದುಚೇರಿ ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
from India & World News in Kannada | VK Polls https://ift.tt/3CJQ6Je